• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

'ಹೆಲ್ತ್ ರಿಜಿಸ್ಟರ್' ಯೋಜನೆಗೆ ಮುನ್ನುಡಿ ಬರೆದ ಡಾ. ಕೆ. ಸುಧಾಕರ್

|

ಬೆಂಗಳೂರು, ಮೇ 27: "ಆರೋಗ್ಯ ಕರ್ನಾಟಕ'ಕ್ಕೆ ವೇದಿಕೆ ಕಲ್ಪಿಸಲಿರುವ "ಹೆಲ್ತ್ ರಿಜಿಸ್ಟರ್' ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಂಗಳವಾರ ಮುನ್ನುಡಿ ಬರೆದರು.

   ಬಾಳೆಹಣ್ಣು ಮತ್ತು ಬಿಸಿನೀರಿನಿಂದ ಆರೋಗ್ಯ ಕಾಪಾಡೋದು ಹೇಗೆ ಅಂತ ನೋಡಿ | Warm Water & Banana Benefits

   ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಹೆಲ್ತ್ ರಿಜಿಸ್ಟರ್ ಯೋಜನೆಗೆ ಸಂಬಂಧಿಸಿದಂತೆ ಆರೋಗ್ಯ ವಲಯದ ತಜ್ಞರ ಜತೆ ಸಚಿವ ಸುಧಾಕರ್ ಮೊದಲ ಸಭೆ ನಡೆಸಿ ಮಾಹಿತಿ ವಿನಿಮಯ ಮಾಡಿಕೊಂಡರು. ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಹದಿನೆಂಟು ಮಂದಿ ತಜ್ಞರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

   ಆಯುಷ್ ವೈದ್ಯರ ಸಮಸ್ಯೆಗಳ ಪರಿಹಾರಕ್ಕೆ ಅಸ್ತು ಎಂದ ಬಿ ಶ್ರೀರಾಮುಲುಆಯುಷ್ ವೈದ್ಯರ ಸಮಸ್ಯೆಗಳ ಪರಿಹಾರಕ್ಕೆ ಅಸ್ತು ಎಂದ ಬಿ ಶ್ರೀರಾಮುಲು

   ಈಗಾಗಲೇ ಇಂಥ ಯೋಜನೆ ಜಾರಿಗೊಳಿಸಿರುವ ದೇಶಗಳಲ್ಲಿ ಅಳವಡಿಸಿಕೊಂಡಿರುವ ಪದ್ಧತಿ, ಯೋಜನೆ ಜಾರಿಗೆ ರಾಜ್ಯದಲ್ಲಿ ಎದುರಾಗುವ ಸವಾಲು, ಅಡ್ಡಿ- ಆತಂಕಗಳು, ಯೋಜನೆಯ ಸ್ವರೂಪ, ಮನೆ ಮನೆ ಸಮೀಕ್ಷೆಗೆ ಅಳವಡಿಸಿಕೊಳ್ಳಬೇಕಿರುವ ಅಂಶಗಳು, ಅಗತ್ಯವಿರುವ ಮಾನವ ಸಂಪನ್ಮೂಲ, ಆರೋಗ್ಯ ಇಲಾಖೆಯ ನಾನಾ ವಿಭಾಗಗಳು ಈಗಾಗಲೇ ಹೊಂದಿರುವ ಮಾಹಿತಿ, ಖಾಸಗಿ ವಲಯದ ನೆರವು ಪಡೆಯುವುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ತಜ್ಞರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

   ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು

   ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು

   ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು. ಆ ಮೂಲಕ ಸದೃಢ, ಆರೋಗ್ಯವಂತ ಕರ್ನಾಟಕ ರೂಪಿಸಬೇಕು ಎಂಬುದು ನಮ್ಮ ಕನಸು. ಅದಕ್ಕಾಗಿ ಹೆಲ್ತ್ ರಿಜಿಸ್ಟರ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಇದನ್ನು ಸಾಕಾರಗೊಳಿಸಲು ತಜ್ಞರು ಕೈಜೋಡಿಸಬೇಕು. ಆ ನಿಟ್ಟಿನಲ್ಲಿ ಮೊದಲ ಸಭೆ ನಡೆಸಲಾಗಿದೆ. ಸಭೆಯಲ್ಲಿ ರಾಜ್ಯದ ಆರೋಗ್ಯಕ್ಷೇತ್ರದಲ್ಲಿ ಸೇವೆಸಲ್ಲಿಸಿರುವ ಪರಿಣಿತರು ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಯೋಜನೆ ರೂಪುರೇಷೆ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಸುಧಾಕರ್ ತಿಳಿಸಿದರು.

   ಪ್ರತಿ ಪೈಸೆಯ ಪ್ರಯೋಜನ ಸಿಗಬೇಕು

   ಪ್ರತಿ ಪೈಸೆಯ ಪ್ರಯೋಜನ ಸಿಗಬೇಕು

   ರಾಜ್ಯದ ಮೂಲೆ ಮೂಲೆಯಲ್ಲಿರುವ ಪ್ರತಿಯೊಬ್ಬರಿಗೂ ಸರ್ಕಾರ ವೆಚ್ಚ ಮಾಡುವ ಪ್ರತಿ ಪೈಸೆಯ ಪ್ರಯೋಜನ ಸಿಗಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯೋಜನೆ ವಿವರ ತಿಳಿದು ಮುಂದುವರಿಯಲು ಸೂಚನೆ ನೀಡಿದ್ದಾರೆ. ದೇಶದಲ್ಲೇ ಮೊದಲ ಸಲ ಇಂಥದ್ದೊಂದು ಪ್ರಯತ್ನಕ್ಕೆ ಕೈಹಾಕಿದ್ದೇವೆ. ನಮಗೆ ಇದೊಂದು ದೊಡ್ಡ ಸವಾಲು, ಅಸಾಧಾರಣ ಪ್ರಯತ್ನ ಎಂಬ ಅಂಶವೂ ಗಮನದಲ್ಲಿದೆ. ಇದು ಗಣತಿ ಮಾದರಿಯ ಮನೆ ಮನೆಗೂ ತೆರಳಿ ಮಾಹಿತಿ ಪಡೆಯಬೇಕಿರುವ ಕಾರ್ಯಕ್ರಮ. ಪ್ರಾಯೋಗಿಕವಾಗಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಅವರು ವಿವರಿಸಿದರು.

   ಸಾರ್ವಜನಿಕ ಮಾಹಿತಿ ಪಡೆಯುವ ಸವಾಲು

   ಸಾರ್ವಜನಿಕ ಮಾಹಿತಿ ಪಡೆಯುವ ಸವಾಲು

   ಹೆಲ್ತ್ ರಿಜಿಸ್ಟರ್ ಯೋಜನೆಗೆ ಮೊದಲ ಹಂತದಲ್ಲಿ ಸಾರ್ವಜನಿಕ ಮಾಹಿತಿ ಪಡೆಯುವುದು ದೊಡ್ಡ ಸವಾಲು. ಇದನ್ನು ನಿಭಾಯಿಸಲು ಖಾಸಗಿ ರಂಗದ ತಜ್ಞರು ಜತೆಗೆ ತಾಂತ್ರಿಕತೆಯ ನೆರವು ಅಗತ್ಯ. ಇವತ್ತಿನ ಸಂದರ್ಭದಲ್ಲಿ ಅನುದಾನ ಒದಗಿಸುವುದು ಕೂಡ ತ್ರಾಸದಾಯಕ ಸಂಗತಿ. ಅದಕ್ಕಾಗಿ ಕೈಗಾರಿಕೆಗಳವರ ನೆರವು ಪಡೆಯಬೇಕಾಗುತ್ತದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆಯ ರೂಪು ರೇಷೆ ಇತ್ಯರ್ಥಪಡಿಸಲಾಗುತ್ತದೆ. ಒಮ್ಮೆ ನಮಗೆ ರಾಜ್ಯದ ಆರೂವರೆ ಕೋಟಿ ಜನರ ಮಾಹಿತಿ ಸಿಕ್ಕರೆ ಲಿಂಗ, ಪ್ರದೇಶ, ವಯೋಮಾನ ಆದಿಯಾಗಿ ಅನೇಕ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಯೋಜನೆಗಳನ್ನು ವಿನ್ಯಾಸಗೊಳಿಸಬಹುದು. ಕೊರೋನಾ ನಂತರದ ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಮುನ್ನೆಲೆಗೆ ಬರವುದು ಅನಿವಾರ್ಯ ಎಂದರು.

   ಇಸ್ರೇಲ್‍ನಲ್ಲಿ ಯಶಸ್ವಿಯಾಗಿದೆ

   ಇಸ್ರೇಲ್‍ನಲ್ಲಿ ಯಶಸ್ವಿಯಾಗಿದೆ

   ಈಗಾಗಲೇ ಇಸ್ರೇಲ್‍ನಲ್ಲಿ ಜಾರಿಗೊಳಿಸಿರುವ ಇಂಥದ್ದೇ ಕಾರ್ಯಕ್ರಮ ಯಶಸ್ವಿಯಾಗಿದ್ದು ಪರಿಣಾಮಕಾರಿ ಆರೋಗ್ಯ ಸೇವೆ ನೀಡುತ್ತಿದೆ. ಅದನ್ನು ಮಾದರಿಯಾಗಿ ಇಟ್ಟುಕೊಳ್ಳಬಹುದು. ನಮ್ಮಲ್ಲಿ ಈಗಾಗಲೇ ಲಭ್ಯವಿರುವ ದತ್ತಾಂಶವನ್ನು ಮೊದಲು ಬಳಕೆ ಮಾಡಿಕೊಳ್ಳಬಹುದು, ಅದರ ಜತೆಗೆ ಖಾಸಗಿ ಆಸ್ಪತ್ರೆಗಳಿಂದ ಮಾಹಿತಿ ಪಡೆಯಲು ಯಾವ ಕ್ರಮ ಅಳವಡಿಸಿಕೊಳ್ಳಬೇಕು ಎಂಬುದನ್ನು ತಜ್ಞರು ವಿವರಿಸಿದರು. ಸರ್ಕಾರ ಕೈಗೊಂಡಿರುವ ಈ ಯೋಜನೆಯನ್ನು ಎಲ್ಲ ತಜ್ಞರು ಮುಕ್ತಕಂಠದಿಂದ ಶ್ಲಾಘಿಸಿ, ಎಂದೊ ಆಗಬೇಕಿದ್ದ ಈ ಕೆಲಸ ಕೊರೋನಾ ವಿರುದ್ಧದ ಹೋರಾಟ ನಡೆಸಿರುವ ಈಗಲಾದರೂ ಕೈಗೊಳ್ಳಲು ನಿರ್ಧರಿಸಿ ಸಚಿವ ಸುಧಾಕರ್ ಚಾಲನೆ ನೀಡಿರುವುದು ಅಭಿನಂದನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

   ಸಭೆಯಲ್ಲಿ ಪಾಲ್ಗೊಂಡಿದ್ದ ತಜ್ಞರು

   ಸಭೆಯಲ್ಲಿ ಪಾಲ್ಗೊಂಡಿದ್ದ ತಜ್ಞರು

   ಸಭೆಯಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಡಾ. ಸಚ್ಚಿದಾನಂದ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಗಿರೀಶ್, ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಡಾ. ಪ್ರಕಾಶ್ ಅವರಲ್ಲದೆ, ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ. ಪ್ರಭುದೇವ್, ಸಾರ್ವಜನಿಕ ಆರೋಗ್ಯ ವಿಭಾಗದ ತಜ್ಞರಾದ ಡಾ. ಎಂ.ಕೆ. ಸುದರ್ಶನ್, ಹೆಸರಾಂತ ತಜ್ಞರುಗಳಾದ ಡಾ. ವಿವೇಕ್ ಜವಳಿ, ಡಾ. ಶರಣ್ ಪಾಟೀಲ್, ಡಾ. ರಾಮಚಂದ್ರ, ಡಾ. ಸತೀಶ್‍ಬಾಬು, ಡಾ. ಸವಿತಾ, ಡಾ. ಅರವಿಂದ ಶೆಣೈ, ಡಾ. ದಿವಾಕರ್, ಡಾ. ಆಂಜಿನಪ್ಪ, ಡಾ. ಗಂಗಾಧರ್, ಡಾ. ಕಿರಣ್ ಮತ್ತಿತರರು ಪಾಲ್ಗೊಂಡಿದ್ದರು.

   ತಜ್ಞರು ಪ್ರತಿಕ್ರಿಯೆಗಳು

   ತಜ್ಞರು ಪ್ರತಿಕ್ರಿಯೆಗಳು

   ಡಾ. ಕೆ. ಸುಧಾಕರ್ ಪ್ರತಿಕ್ರಿಯೆ: "ಹೆಲ್ತ್ ರಿಜಿಸ್ಟರ್ ಬಹು ವರ್ಷಗಳ ನನ್ನ ಕನಸಿನ ಕೂಸು. ಆರೂವರೆ ಕೋಟಿ ಕನ್ನಡಿಗರಿಗೂ ಅಂತಾರಾಷ್ಟ್ರೀಯ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಇದು ಸಹಕಾರಿಯಾಗಲಿದೆ. ಜನರು ಮುಕ್ತವಾಗಿ ಮಾಹಿತಿ ಹಂಚಿಕೊಳ್ಳುವ ಮೂಲಕ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಭಾಗಿಗಳಾಗಬೇಕು' - ಡಾ. ಕೆ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವರು

   ತಜ್ಞರು ಪ್ರತಿಕ್ರಿಯೆಗಳು
   "ತಾಂತ್ರಿಕತೆ ಮತ್ತು ತಜ್ಞರ ಸಹಯೋಗದೊಂದಿಗೆ ಇಸ್ರೇಲ್‍ನಲ್ಲಿ ಜಾರಿಗೊಳಿಸಿರುವ ಆರೋಗ್ಯ ವ್ಯವಸ್ಥೆ ಜಗತ್ತಿಗೆ ಮಾದರಿ. ಅಂಥದ್ದೇ ಸಾಹಸಕ್ಕೆ ಕರ್ನಾಟಕ ಸರ್ಕಾರ ಕೈ ಹಾಕಿರುವುದು ಮಹತ್ವದ ಬೆಳವಣಿಗೆ. ಸರ್ಕಾರದ ಈ ಪ್ರಯತ್ನವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಕೈಲಾದ ಎಲ್ಲ ಸಹಕಾರ ನೀಡಲಾಗುವುದು' - ಡಾ. ಶರಣ್ ಪಾಟೀಲ್, ಖ್ಯಾತ ಮೂಳೆ ತಜ್ಞರು

   "ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಈ ಮಹತ್ವಾಕಾಂಕ್ಷಿ ಯೋಜನೆಗೆ ಕೈಜೋಡಿಸಬೇಕಿದೆ. ಪ್ರತಿಯೊಬ್ಬರ ಆರೋಗ್ಯ ಮಾಹಿತಿ ಸಂಗ್ರಹ ಪೂರ್ಣಗೊಂಡರೆ ಆರೋಗ್ಯ ಸೇವೆಯಲ್ಲಿ ಅದ್ಬುತಗಳನ್ನು ಸೃಷ್ಟಿಸಬಹುದು' - ಡಾ. ವಿವೇಕ್ ಜವಳಿ, ಖ್ಯಾತ ಹೃದ್ರೊಗ ತಜ್ಞರು

   English summary
   Karnataka will soon have Statewide Health Register. The pilot project will be implemented in Chikkaballapura said Medical education minister Dr Sudhakar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X