Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್

ಬೆಂಗಳೂರು: ಜಾಗತಿಕವಾಗಿ ಕರ್ನಾಟಕ ಇಂದಿನ ಸರ್ಕಾರಿ ಶಾಲಾ ಮಕ್ಕಳನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಸಂಬಂಧ 2026-27 ನೇ ಸಾಲಿನಲ್ಲಿ ರಾಜ್ಯದ 15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ನೀತಿ ಆರಂಭಿಸಲಾಗುತ್ತದೆ. ಎಲ್ಲ ಸರ್ಕಾರಿ ಶಾಲೆಗಳ ಪ್ರಾಥಮಿಕ ಶಾಲಾ ಶಿಕ್ಷಕರು ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದಲ್ಲಿ ತರಗತಿ ನಡೆಸಲಿದ್ದಾರೆ.

ಇತ್ತೀಚೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆ ಅಂಕಗಳನ್ನು ಕೈ ಬಿಟ್ಟ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲಾಗಿತ್ತು. ಮಕ್ಕಳ ಹಿತ ದೃಷ್ಟಿಯಿಂದ ದ್ವಿಭಾಷಾ ನೀತಿ ಜಾರಿ ಕುರಿತು ಹೇಳಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವದ್ದು ಏಕಪಕ್ಷೀಯ ನಿರ್ಧಾರವೆಂಬ ಟೀಕೆಗಳು ಕೇಳಿ ಬಂದಿದ್ದವು. ಇದರ ನಡುವೆ ಸರ್ಕಾರ ಪ್ರಸ್ತಕ ಶೈಕ್ಷಣಿಕ ವರ್ಷದಿಂದಲೇ ಹದಿನೈದು ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಆರಂಭಿಸಲು ಶಿಕ್ಷಣ ಇಲಾಖೆ ಪ್ಲ್ಯಾನ್ ಮಾಡಿಕೊಂಡಿದೆ. ಈ ಸಂಬಂಧ ಸರ್ಕಾರಿ ಪ್ರಾಥಮಿಕ ಶಿಕ್ಷಕರಿಗೆ ಇಂಗ್ಲಿಷ್ ತರಬೇತಿ ನೀಡುತ್ತಿದೆ.

Bilingual Education

ದ್ವಿಭಾಷಾ ಮಾಧ್ಯಮ ಪ್ರಯುಕ್ತ 2026-27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಉದ್ದೇಶಿತ ಸರ್ಕಾರಿ ಶಾಲೆಗಳಲ್ಲಿ ಬೋಧಿಸುತ್ತಿರುವ 1,55, 950 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್‌ ಮೀಡಿಯಂ ಟೀಚರ್ಸ್‌ ಟ್ರೈನಿಂಗ್‌ (EMTT ) ಅನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ವತಿಯಿಂದ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಡಯಟ್‌ಗಳಲ್ಲಿ ಈ ತರಬೇತಿ ನಡೆಯುತ್ತಿದೆ.

3 ಹಂತಗಳಲ್ಲಿ ಶಿಕ್ಷಕರಿಗೆ ತರಬೇತಿ

ಮಕ್ಕಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ನಲ್ಲಿ ಪಾಠ ಮಾಡುವುದನ್ನು ಹೇಳಿಕೊಡಲು ಅವರಿಗೆ ಇಂಗ್ಲಿಷ್‌ ತರಬೇತಿ ನೀಡಲಾಗುತ್ತಿದೆ. ನುರಿತ ಪರಿಣಿತರಿಂದ ಶಿಕ್ಷಕರಿಗೆ ಈಗಾಗಲೇ ತರಬೇತಿ ಆರಂಭಿಸಲಾಗಿದೆ. ಒಟ್ಟು ಮೂರು ಹಂತಗಳಲ್ಲಿ ತರಬೇತಿ ನೀಡಲಾಗುತ್ತಿದೆ.

ಮೊದಲಿಗೆ ಪ್ರತಿ ಜಿಲ್ಲೆಯಿಂದ ರಾಜ್ಯದ ಒಬ್ಬರು ಡಯಟ್ ನೂಡಲ್ ಅಧಿಕಾರಿಗಳಂತೆ ರಾಜ್ಯದ ಒಟ್ಟು 385 ಎಂಆರ್‍‌ಪಿಗಳಿಗೆ ಬೆಂಗಳೂರಿನ ಪ್ರತಿಷ್ಠಿತ ಪ್ರಾದೇಶಿಕ ಇಂಗ್ಲಿಷ್ ಸಂಸ್ಥೆ ದಕ್ಷಿಣ ಭಾರತ ಆರ್‍‌ಐಇಎಸ್‌ಐ ಅವರಿಂದ ತರಬೇತಿ ಕೊಡಿಸಲಾಗುತ್ತಿದೆ.

ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ

ಇನ್ನು ಎರಡನೇ ಹಂತದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಂತೆ ಪ್ರತಿ ತಾಲೂಕುಗಳಿಂದ ತಲಾ 15 ಸಂಪನ್ಮೂಲ ವ್ಯಕ್ತಿಗಳಿಂದ ಒಟ್ಟು ರಾಜ್ಯದ 3060 ಎಂಆರ್‍‌ಪಿಗಳಿಗೆ ಜಿಲ್ಲಾ ಹಂತದಲ್ಲಿ ತರಬೇತಿ ಕೊಡಿಸುವ ಕಾರ್ಯಕ್ರಮ ಚಾಲ್ತಿಯಲ್ಲಿದೆ.

ಮೂರನೇ ಹಂತದಲ್ಲಿ ದ್ವಿಭಾಷಾ ಮಾಧ್ಯಮ ಜಾರಿಗೆ ತರುವ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಇಂಗ್ಲಿಷ್ ಮಾಧ್ಯಮದಲ್ಲಿಯೂ ಬೋಧಿಸಲು ಸರ್ಕಾರಿ ಶಾಲಾ ಶಿಕ್ಷಕರು ಸಜ್ಜಾಗುತ್ತಿದ್ದಾರೆ. ಇದು ಮಕ್ಕಳ ಭವ್ಯ ಭವಿಷ್ಯ ಹಾಗೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳ ಸುಧಾರಣೆಗೆ, ಶಿಕ್ಷಣ ವ್ಯವಸ್ಥೆಯಲ್ಲಿನ ಮಹತ್ತರ ಬದಲಾವಣೆಗೆ ಕಾರಣವಾಗಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+