ಕರ್ನಾಟಕದ ಏರ್‌ಪೋರ್ಟ್‌ಗಳ ಬಳಿ ಲಾಜಿಸ್ಟಿಕ್ ಕೇಂದ್ರ, ಪೈಲಟ್ ತರಬೇತಿ ಸಂಸ್ಥೆ ಸ್ಥಾಪನೆಗೆ ಆಹ್ವಾನ

ವಾಷಿಂಗ್ಟನ್ ಡಿಸಿ, ಸೆಪ್ಟಂಬರ್ 28: ಅಮೆರಿಕ ಪ್ರವಾಸದಲ್ಲಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಅವರು, ಮುಂಚೂಣಿ ವಿಮಾನ ತಯಾರಿಕಾ ಕಂಪನಿ 'ಬೋಯಿಂಗ್' ಗೆ ಕರ್ನಾಟಕ ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರಗಳ ಸ್ಥಾಪನೆಗೆ ಆಹ್ವಾನ ನೀಡಿದ್ದಾರೆ. ಪೈಲಟ್ ಹಾಗೂ ವಿಮಾನ ಸಿಬ್ಬಂದಿ ತರಬೇತಿ ಕ್ಷೇತ್ರದಲ್ಲಿ ರಾಜ್ಯದಲ್ಲಿರುವ ಹೂಡಿಕೆ ಅವಕಾಶಗಳ ಅವರು ಕಂಪನಿಗೆ ತಿಳಿಸಿದರು.

ಅಮೆರಿಕಾದಲ್ಲಿ ಸಚಿವರು ಬುಧವಾರ ವಿವಿಧ ಕಂಪನಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಯುಎಸ್- ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್ ಫೋರಂ (USISPF) ಜೊತೆ ನಡೆದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ನಿರ್ಮಾಣವಾಗಲಿರುವ ಆರೋಗ್ಯ ತಂತ್ರಜ್ಞಾನ ಪಾರ್ಕ್ ನಲ್ಲಿ ಹೂಡಿಕೆ ಮಾಡುವಂತೆ ಆಹ್ವಾನ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕಂಪನಿ ಸದಸ್ಯರ ಗಮನ ಸೆಳೆದಿದ್ದಾರೆ.

 Karnataka Invite Farigns Compies Logistic Center,Pilot Training Center Establishment Near Airports

ಕರ್ನಾಟಕದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪೂರಕವಾದ ನೀತಿಗಳನ್ನು ಅನುಸರಿಸುವ ಅಗತ್ಯವಿದೆ ಎಂಬ ಸಲಹೆ ಸಭೆಯಲ್ಲಿದ್ದವರಿಂದ ವ್ಯಕ್ತವಾಯಿತು.

"ಚೀನಾ + ಒನ್ ನೀತಿ" ಸದುಪಯೋಗದ ಚರ್ಚೆ

ಇದೇ ವೇಳೆ ಸಚಿವರ ನೇತೃತ್ವದ ನಿಯೋಗ ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಜೊತೆ ಮಹತ್ವದ ಮಾತುಕತೆ ನಡೆಸಿತು. ಜಾಗತಿಕ ಕಂಪನಿಗಳು ಅನುಸರಿಸುತ್ತಿರುವ "ಚೀನಾ + ಒನ್" ಕಾರ್ಯಾಚರಣೆ ತಂತ್ರದ ಸದುಪಯೋಗ ಪಡೆಯಲು ಕರ್ನಾಟಕಕ್ಕೆ ಇರುವ ಅನುಕೂಲತೆಗಳ ಕುರಿತು ಚರ್ಚೆ ನಡೆಸಿದರು.

ಐಎಂಎಫ್ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಮತ್ತಿತರರು ಪಾಲ್ಗೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಬೆಳವಣಿಗೆ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆಯನ್ನೂ ನಡೆಸಲಾಯಿತು. ಪ್ರಮುಖ ಎಂ ಎನ್ ಸಿ ಕಂಪನಿಗಳು ಚೀನಾದಲ್ಲಿ ತಾವು ಹೊಂದಿರುವ ತಯಾರಿಕಾ ಘಟಕದ ಜೊತೆಗೆ ಬೇರೆ ದೇಶದಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಯೋಜನೆಗಳನ್ನು (ಚೀನಾ + ಒನ್ ನೀತಿ) ಹಾಕಿಕೊಳ್ಳುತ್ತಿವೆ.

 Karnataka Invite Farigns Compies Logistic Center,Pilot Training Center Establishment Near Airports

ಬೆಂಗಳೂರಿಗೆ ಹೆಚ್ಚಿನ ಹೂಡಿಕೆ: ಚರ್ಚೆ

ಈ ನೀತಿಯಂತೆ ಭಾರತದಲ್ಲಿ ಯೋಜನೆಗೆ ಜಾರಿಗೆ ಜಾಗತಿಕ ಕಂಪನಿಗಳ ಗಮನ ಸೆಳೆಯಲಗಿದೆ. ಕರ್ನಾಟಕವು ಆಯಕಟ್ಟಿನ ಸ್ಥಳವಾಗಿದೆ. ಬೆಂಗಳೂರಿಗೆ ಹೆಚ್ಚಿನ ಹೂಡಿಕೆಯನ್ನು ಸೆಳೆಯುವ ನಿಟ್ಟಿನಲ್ಲಿ ನಗರದ ದಟ್ಟಣೆಯನ್ನು ತಗ್ಗಿಸುವ ಬಗ್ಗೆಯೂ ಸಭೆಯಲ್ಲಿ ಸಚಿವರ ವಿವಿಧ ಕಂಪನಿಗಳ ಜತೆ ಚರ್ಚಿಸಿದರು.

ಸಚಿವ ಪಾಟೀಲ ಅವರು ಕೌಶಲ್ಯಯುಕ್ತ ಕಾರ್ಮಿಕರ ಸಂಖ್ಯೆಯಲ್ಲಿ ಕೊರತೆ ಉಂಟಾಗದಂತಹ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಯುಎಸ್ಐಎಸ್ ಪಿಎಫ್ ಪ್ರತಿನಿಧಿಗಳನ್ನು ಉದ್ದೇಶಿಸಿ ಎಂಬಿ ಪಾಟೀಲ ಅವರು ಮಾತನಾಡಿ, ಇ-ಆಡಳಿತ ಮತ್ತು ಸ್ಥಳೀಯ ಸಂಸ್ಥೆ ಗಳ ಮುಂದಿರುವ ಕೆಲವು ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನದ ನೆರವು ಪಡೆಯಲು ಸಮರ್ಥ ಪಾಲುದಾರಿಕೆಗಾಗಿ ಶೋಧನೆ ನಡೆಸಲಾಗುವುದು ಎಂದರು.

ಇಂಡಸ್ಟ್ರಿ 4.0 ಸಂಬಂಧಿಸಿದ ಕೌಶಲಗಳ ಕಲಿಕೆಗೆ ಪೂರಕವಾಗಿ ತರಬೇತಿ ಪಠ್ಯಕ್ರಮಗಳನ್ನು ಸಿದ್ದಪಡಿಸುವ ಬಗ್ಗೆಯೂ ವಿಚಾರ ವಿನಿಮಯ ನಡೆಯಿತು.

ಜಿಇ ವೆರ್ನೋವ ಜೊತೆಗಿನ ಸಭೆಯಲ್ಲಿ ಕರ್ನಾಟಕದಲ್ಲಿ ಕಾಂಪೋನೆಂಟ್ ಗಳ ತಯಾರಿಕೆಗೆ ಇರುವ ಅವಕಾಶಗಳ ಬಗ್ಗೆ ಗಮನಹರಿಸಲಾಯಿತು. ಜೊತೆಗೆ, ಸೌರಶಕ್ತಿ, ಪವನ ಶಕ್ತಿ ಮತ್ತಿತರ ಪರ್ಯಾಯ ಇಂಧನಗಳ ಸಂಗ್ರಹ ವ್ಯವಸ್ಥೆ ಸ್ಥಾಪನೆ ಸಂಬಂಧ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಜಿಇ ಹೆಲ್ತ್ ಕೇರ್ ದೊಂದಿಗಿನ ಸಭೆಯಲ್ಲಿ ಮುಂಬರುವ ದಶಕದಲ್ಲಿ ಜೀವ ವಿಜ್ಞಾನಗಳ ಕ್ಷೇತ್ರದಲ್ಲಿ ಎಐ/ಎಂಎಲ್ ನಿರ್ಣಾಯಕ ಪಾತ್ರ ವಹಿಸಲಿರುವ ನಿರೀಕ್ಷೆಯಿರುವುದರಿಂದ ಅದಕ್ಕೆ ತಕ್ಕಂತೆ ಉದ್ಯೋಗಿಗಳ ಕೌಶಲವನ್ನು ಮೇಲ್ದರ್ಜೆಗೇರಿಸಲು ಸಹಭಾಗಿತ್ವಗಳನ್ನು ಸಾಧಿಸುವ ಬಗ್ಗೆ ಚರ್ಚಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+