ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್-19 ನಿರ್ವಹಣೆಯಲ್ಲಿ ಕರ್ನಾಟಕ ಅತ್ಯುತ್ತಮ ಎನಿಸಲು ಏನು ಕಾರಣ?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 3: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ದಿ ಇಂಡಿಯಾ ಟುಡೇ ಗ್ರೂಪ್ ನಿಂದ ನೀಡಲಾಗುತ್ತಿರುವ 'ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ' (Best State Combating Covid-19) ವಿಭಾಗದ ಇಂಡಿಯಾ ಟುಡೇ ಹೆಲ್ತ್ ಗಿರಿ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದೆ. ಈ ಪ್ರಯುಕ್ತ ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸೋಂಕು ಪತ್ತೆ, ಕೋವಿಡ್ ಲಸಿಕೆ ಅಭಿಯಾನ, ಪೋಸ್ಟ್ ಕೋವಿಡ್ ತಪಾಸಣೆಯಲ್ಲಿ ತ್ವರಿತಗತಿಯಲ್ಲಿ ಕ್ರಮ ಅನುಸರಿಸಿದ್ದು ಕರ್ನಾಟಕಕ್ಕೆ ಲಭಿಸಲು ಕಾರಣ ಎಂದು ಸಚಿವರು ಹೇಳಿದರು.

ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್ ಲಸಿಕೆ ನೀಡಿರುವುದು, ಪೋಸ್ಟ್ ಕೋವಿಡ್ ತಪಾಸಣೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿಯ ಗೌರವ ಲಭ್ಯವಾಗಿದೆ.

ಪ್ರಶಸ್ತಿ ಆಯ್ಕೆಯ ಅಂತಿಮ ಹಂತದಲ್ಲಿ ಐದು ರಾಜ್ಯಗಳ ಹೆಸರಿದ್ದು, ಅತ್ಯುತ್ತಮ ನಿಯಂತ್ರಣ ಕ್ರಮಗಳಿಂದ ಸಾಧನೆ ತೋರಿದ ಕರ್ನಾಟಕಕ್ಕೆ ಪ್ರಶಸ್ತಿ ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವೀಯ ಅವರು, ಸಚಿವ ಡಾ.ಕೆ.ಸುಧಾಕರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

ಅಭಿಪ್ರಾಯ ಹಂಚಿಕೊಂಡ ಸಚಿವ ಡಾ.ಕೆ.ಸುಧಾಕರ್

ಅಭಿಪ್ರಾಯ ಹಂಚಿಕೊಂಡ ಸಚಿವ ಡಾ.ಕೆ.ಸುಧಾಕರ್

ಈ ಕುರಿತು ಅಭಿಪ್ರಾಯ ಹಂಚಿಕೊಂಡ ಸಚಿವ ಡಾ.ಕೆ.ಸುಧಾಕರ್, ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ, ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯ, ದಾಖಲೆಯಂತೆ ಲಸಿಕೆ ನೀಡಿರುವುದು, ಪರೀಕ್ಷೆ ಹೆಚ್ಚಿಸಿ ಸಂಪರ್ಕಿತರನ್ನು ಪತ್ತೆ ಮಾಡಿ ಚಿಕಿತ್ಸೆ ನೀಡಿರುವುದು ಮೊದಲಾದ ಕ್ರಮಗಳಿಂದಾಗಿ ಕೋವಿಡ್ ನಿಯಂತ್ರಣಕ್ಕೆ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕೂಡ ರಾಜ್ಯ ಸರ್ಕಾರದ ದಿಟ್ಟ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಪ್ರಶಸ್ತಿಯಿಂದಾಗಿ ಇನ್ನಷ್ಟು ಕೆಲಸ ಮಾಡಲು ಉತ್ತೇಜನ ದೊರೆತಿದೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು ಕಠಿಣ ಹಾಗೂ ತ್ವರಿತ ಕ್ರಮಗಳನ್ನು ವಹಿಸಿದೆ. ಇನ್ನಷ್ಟು ಕ್ರಮಗಳ ಮೂಲಕ ಕೊರೊನಾವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಹೊಸ ಹುರುಪು ದೊರೆತಿದೆ. ಇದಕ್ಕಾಗಿ ದಿ ಇಂಡಿಯಾ ಟುಡೇ ಗ್ರೂಪ್ ಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಆರೋಗ್ಯ ಕರ್ನಾಟಕ ಸರ್ಕಾರದ ಗುರಿ: ಸಚಿವ ಡಾ.ಸುಧಾಕರ್

ಆರೋಗ್ಯ ಕರ್ನಾಟಕ ಸರ್ಕಾರದ ಗುರಿ: ಸಚಿವ ಡಾ.ಸುಧಾಕರ್

ಕೋವಿಡ್ ಬಂದಂತಹ ಸಂದರ್ಭದಲ್ಲಿ ಲಸಿಕೆ ಬರುವುದಿಲ್ಲ. ಈ ಸರ್ಕಾರ ಮಾರ್ಗಸೂಚಿಗಳನ್ನಾಗಲಿ ಅಥವಾ ಸರಿಯಾದ ರೀತಿಯಲ್ಲಿ ನಿಯಂತ್ರಣ ಮಾಡುತ್ತಿಲ್ಲ ಎಂದು ಪ್ರಾರಂಭದಿಂದ ಟೀಕೆಗಳನ್ನು ಮಾಡಲಾಗುತ್ತಿತ್ತು. ಲಸಿಕೆ ಬಂದಂತಹ ಸಂದರ್ಭದಲ್ಲಿ ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದೂ ಸಹ ಟೀಕಿಸಲಾಗಿತ್ತು. ಈ ಲಸಿಕೆಯ ಬಗ್ಗೆ ಸಾಕಷ್ಟು ತಪ್ಪು ಸಂದೇಶ ಹಾಗೂ ಮಾಹಿತಿಗಳು ಹೋದವು. ಇದರಿಂದ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿದದ್ದು ಉಂಟು, ಆರೋಗ್ಯ ಕರ್ನಾಟಕ ಕಟ್ಟಬೇಕು ಎಂಬುದು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸರ್ಕಾರದ ಗುರಿಯಾಗಿದೆ ಎಂದರು.

ದೇಶಿ ನಿರ್ಮಿತ ಕೋವಿಶಿಲ್ಡ್ ಹಾಗೂ ಕೋವ್ಯಾಕ್ಸಿನ್

ದೇಶಿ ನಿರ್ಮಿತ ಕೋವಿಶಿಲ್ಡ್ ಹಾಗೂ ಕೋವ್ಯಾಕ್ಸಿನ್

ನಮ್ಮ ದೇಶಿಯ ಲಸಿಕೆಯನ್ನು ದೇಶದ ಕಂಪನಿಗಳೇ ಕೋವಿಶಿಲ್ಡ್ ಹಾಗೂ ಕೋವ್ಯಾಕ್ಸಿನ್ ಅನ್ನು ತಯಾರಿಸಿದವು. ಡಿಸೆಂಬರ್ ವೇಳೆಗೆ ಲಸಿಕೆಯನ್ನು ಹೊರತಂದು ವಿಶ್ವದ ಇತರೆ ಲಸಿಕೆಗಳ ಜೊತೆಗೆ ಸರಿಸಮಾನವಾಗಿ ಹೊರಬಂದಿರುವುದು ಐತಿಹಾಸಿಕವಾದದ್ದು. ಇದು ಆತ್ಮನಿರ್ಬರ ಭಾರತದ ಮೂಲಕ ಮೋದಿ ಅವರ ಕನಸು ನನಸಾಗಿದೆ ಎಂದರು.

ಕೋವಿಡ್ 3ನೇ ಅಲೆಯ ಪ್ರಮಾಣ ಕಡಿಮೆ ಪ್ರಮಾಣದಲ್ಲಿಯೇ ಇದೆ. ಹೀಗಾಗಿ ಭಯ ಪಡುವ ಅಗತ್ಯವಿಲ್ಲ. ಒಂದುವೇಳೆ 3ನೇ ಅಲೆ ಬಂದರೂ ಅದನ್ನು ನಿಯಂತ್ರಿಸುವ ಕಾರ್ಯ ಮಾಡಲಾಗುವುದು. ಈಗಾಗಲೇ ಮಕ್ಕಳಿಗೆ ಲಸಿಕೆ ನೀಡಲು ಟ್ರಯಲ್ ನಡೆಯುತ್ತಿದೆ‌. ಶೀಘ್ರವಾಗಿ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ ಎಂದರು.

ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ

ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ

ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಇದ್ದರೆ ಅದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಂದಂತಹ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಾಗಿದೆ. ಇದರಿಂದ ಬಡಜನರಿಗೆ ಲಕ್ಷಾಂತರ ರೂ ಉಳಿತಾಯವಾಗಲಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ನಡೆಸುತ್ತಿದ್ದಾರೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ರಕ್ತದಾನ ಮಾಡುವ ದಾನಿಗಳು ಕಡಿಮೆಯಾಗಿದ್ದು, ಕೋವಿಡ್ ಮಾತ್ರ ಕಡಿಮೆಯಾಗಿಲ್ಲ. ರಕ್ತದ ಅವಶ್ಯಕತೆ ಹಾಗೆ ಇದೆ. ನಮ್ಮಲ್ಲಿನ ಸಂಶೋಧನಕಾರರು ಎಲ್ಲವನ್ನೂ ಕಂಡುಹಿಡಿದಿದ್ದರೂ ಕೃತಕ ರಕ್ತವನ್ನು ತಯಾರು ಮಾಡುವುದನ್ನು ಸಾಧ್ಯವಾಗಿಲ್ಲ. ಹೀಗಾಗಿ ರಕ್ತಕ್ಕೆ ಪರ್ಯಾವಾಗಿ ಬೇರೆ ಇಲ್ಲ. ಅದು ರಕ್ತವೇ ಆಗಿದೆ. ಹೀಗಾಗಿ ರಕ್ತದಾನ ಒಂದು ಪುಣ್ಯವಾದ ಕಾರ್ಯವಾಗಿದೆ ಎಂದು ಹೇಳಿದರು.

Recommended Video

ತ್ರಿಪಾಟಿ ಹಿಡಿದ ಕ್ಯಾಚ್ ನಿಂದ Kl Rahul ಔಟ್ ಆಗ್ಲಿಲ್ಲ ಯಾಕೆ? | Oneindia Kannada

English summary
“Karnataka is the Best State Combating Covid-19”: Union Minister of Health and Family Welfare Mansukh Mandaviya gave the prestigious India Today Healthgiri Award to Karnataka for state’s extra-ordinary and successful efforts in Covid management.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X