Deepavali 2026 ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ರೂಲ್ಸ್; ಪಟಾಕಿಗೆ ಹೊಡೆಯುವ ಮುನ್ನ ಗಮನಿಸಿ

ಬೆಂಗಳೂರು; ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯವೇ ದೀಪಾವಳಿ ಸಡಗರ, ಸಂಭ್ರಮಾಚರಣೆಗೆ ಕಾಯುತ್ತಿದೆ. ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿದ್ದು, ಬಟ್ಟೆ ಅಂಗಡಿಗಳು ತುಂಬಿ ತುಳುಕುತ್ತಿವೆ. ಮಕ್ಕಳು, ಮಹಿಳೆಯರು ಎನ್ನದೇ ಈ ಹಬ್ಬಕ್ಕೆ ಪಟಾಕಿ ಹೊಡೆದು ಬೆಳಕಿನ ಹಬ್ಬವನ್ನು ಆಚರಿಸಿತ್ತಾರೆ. ಆದರೆ ಪಟಾಕಿಯಿಂದ ವಾಯು ಮತ್ತು ಶಬ್ದ ಮಾಲಿನ್ಯ ಉಂಟಾಗುವ ಕಾರಣಕ್ಕೆ ರಾಜ್ಯ ಸರ್ಕಾರ ಹಬ್ಬಕ್ಕೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಎಚ್ಚರಿಸಿದ್ದಾರೆ.

ರಾಜ್ಯಾದ್ಯಾಂತ ದಿನಾಂಕ ನವೆಂಬರ್ 08 ರಿಂದ 10ರವರೆಗೆ ಮೂರು ದಿನ ದೀಪಾವಳಿ ಆಚರಿಸಲಾಗುತ್ತಿದೆ. ಆ ವೇಳೆ ವಿವಿಧ ರೀತಿಯ ಪಟಾಕಿ ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮವಾಗುವ ಸಾಧ್ಯತೆ ಇರುತ್ತದೆ. ಅದ್ದರಿಂದ ಹಬ್ಬದ ದಿನಗಳಂದು ಪಟಾಕಿಗಳಿಂದಾಗುವ ಶಬ್ದ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಈ ಕೆಳಕಂಡಂತೆ ಕ್ರಮ ಜರುಗಿಸಲು ಸೂಚಿಸಲಾಗಿದೆ.

Karnataka Issues Diwali 2026 Guidelines

ಸರ್ಕಾರ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳು

* ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಪಾಲಿಸಬೇಕು.

* ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ಪಡೆ ಅಧಿಕಾರಿ, ಸ್ಥಳೀಯ ಸಂಸ್ಥೆಯ ಆರೋಗ್ಯಾಧಿಕಾರಿಗಳು, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆಸಕ್ತ ನಾಗರೀಕರು ಹಾಗು ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಿ, ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು.

ನಿಷೇಧಿತ ಪಟಾಕಿ ಸಂಗ್ರಹ, ಮಾರಿದರೆ ಕ್ರಿಮಿನಲ್ ಕೇಸ್

* ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕು.

* ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗು ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿನ್ನೆಯಿರುತ್ತದೆ ಹಾಗೂ ಕ್ಯೂ.ಆ‌ರ್.ಕೋಡ್ ಸಹಾ ಇರುತ್ತದೆ, ಸದರಿ ಚಿನ್ನೆಯ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು. ಸದರಿ ಚಿನ್ನ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.

* ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಬಳಿ ಪಟಾಕಿ ನಿಷೇಧ

* ಯಾವುದೇ ಸ್ಥಳೀಯ ಆಸ್ಪತ್ರೆ ಹಾಗು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ,ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆ ಹಾಗು ಪೊಲೀಸ್ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕಲ್ಲಿ ಜಾಗೃತಿ ಮೂಡಿಸಬೇಕು.

* ದೀಪಾವಳಿಯ ಸಮಯದಲ್ಲಿ ಉತ್ಪಾದನೆಯಾಗುವಂತಹ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸುವುದು.

* ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೆ ವಾಣಿಜ್ಯ ತೆರಿಗೆ ಇಲಾಖೆಯವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗು ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು. ಸಾಗಾಟ ಮಾಡುವ ವಾಹನ ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳುವುದು. ಇದಕ್ಕೆ ಅವಶ್ಯಕತೆಯಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಸಹಯೋಗ ಪಡೆದುಕೊಳ್ಳಬಹುದು.

* ಕೋರ್ಟ್ ಸೂಚನೆಯಂತೆ ಪಟಾಕಿಗಳನ್ನು ಸ್ಫೋಟಿಸಲು ನಿಗದಿಪಡಿಸಿರುವ ಸಮಯ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆವರೆಗೆ ಮಾತ್ರ ಅವಕಾಶ ನೀಡಿರುವುದರಿಂದ ಉಳಿದ ಸಮಯದಲ್ಲಿ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಎಲ್ಲ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+