• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?

|

ಕರ್ನಾಟಕ ಸರ್ಕಾರ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹೊಸ ಕಠಿಣ ಮಾರ್ಗಸೂಚಿಯನ್ನು ಏಪ್ರಿಲ್ 20ರಂದು ರಾತ್ರಿ ಪ್ರಕಟಿಸಲಾಗಿದೆ. ಏಪ್ರಿಲ್ 21ರಿಂದ ಮೇ 4 ರ ತನಕ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸುವುದಾಗಿ ಘೋಷಣೆ ಮಾಡಲಾಗಿದ್ದು, ಈ ಕುರಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

   ಸರ್ಕಾರದ ಹೊಸ ಕಟ್ಟು ನಿಟ್ಟಿನ ಕ್ರಮ ! | Oneindia Kannada

   ನೈಟ್ ಕರ್ಫ್ಯೂ ರಾತ್ರಿ 9 ರಿಂದ 6 ತನಕ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ರಾತ್ರಿ 9 ರಿಂದ ಬೆಳಗ್ಗೆ 6 ರ ತನಕ ಇರಲಿದೆ(ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ)

   ರಾತ್ರಿ ಕರ್ಫ್ಯೂ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.

   ಏನಿರುತ್ತೆ? ಏನಿರಲ್ಲ?

   * ರಾತ್ರಿ ಕರ್ಫ್ಯೂ ಅವಧಿಯಲ್ಲಿ ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು/ ಸರಕು ಸಾಗಾಣಿಕೆ ವಾಹನಗಳು/ ಹೋಂ ಡೆಲಿವರಿ/ ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

   * ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಣೆ ಮಾಡುವ ಎಲ್ಲಾ ಕಾರ್ಖಾನೆ/ ಕಂಪನಿ/ ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಣೆ ಮಾಡಲು ಅನುಮತಿಸಿದೆ.

   * ರಾತ್ರಿ ವೇಳೆಯಲ್ಲಿ ಬಸ್, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ ಆಧಾರದ ಮೇಲೆ ಆಟೋ/ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿ ನೀಡಿದೆ.

   ಕೊವಿಡ್ 19 ಸೋಂಕಿತರಿಗೆ ಬೆಡ್, ಆಕ್ಸಿಜನ್ ರೆಮ್ಕೊವಿಡ್ 19 ಸೋಂಕಿತರಿಗೆ ಬೆಡ್, ಆಕ್ಸಿಜನ್ ರೆಮ್

   * ಸಿನಿಮಾ ಹಾಲ್, ಜಿಮ್, ಕ್ರೀಡಾಂಗಣ, ಆಡಿಟೋರಿಯಂ, ಈಜುಕೊಳ ಎಲ್ಲವೂ ಬಂದ್

   * ಹೋಟೆಲ್, ರೆಸ್ಟೋರೆಂಟ್ ಬಂದ್ ಆಗಿರಲಿದ್ದು, ಟೇಕ್ ಅವೇ, ಪಾರ್ಸೆಲ್ ವ್ಯವಸ್ಥೆಗೆ ಅನುಮತಿ ಇರಲಿದೆ.

   * ಕೈಗಾರಿಕೆ, ವ್ಯವಸ್ಥಾಯ, ದಿನಸಿ ಮಳಿಗೆಗೆ ಅನುಮತಿ, ತರಕಾರಿ ಮಾರುಕಟ್ಟೆ ತೆರೆದ ಪ್ರದೇಶದಲ್ಲಿ ಏ.23ರಿಂದ ಮಾರಾಟ ವ್ಯವಸ್ಥೆ ಮಾಡಲಾಗುತ್ತದೆ.

   * ಮದ್ಯ ಮಳಿಗೆಯಲ್ಲಿ ಪಾರ್ಸೆಲ್ ವ್ಯವಸ್ಥೆ, ಬಾರ್, ರೆಸ್ಟೋರೆಂಟ್ ಬಂದ್, ಟೇಕ್ ಅವೇಗೆ ಮಾತ್ರ ಅನುಮತಿ
   * ಖಾಸಗಿ ಸಂಸ್ಥೆ, ಐಟಿ-ಬಿಟಿ ವರ್ಕ್ ಫ್ರಂ ಹೋಂಗೆ ಅನುಮತಿ, ಸರ್ಕಾರಿ ಕಚೇರಿ ಶೇ50ರಷ್ಟು ಹಾಜರಾತಿಗೆ ಅನುಮತಿ
   ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತು ಪೂರೈಕೆ ಸಾಗಾಟಕ್ಕೆ ಅನುಮತಿ

   * ದೇವಸ್ಥಾನಗಳಲ್ಲಿ ಅರ್ಚಕರು ನಿತ್ಯಪೂಜೆ ಸಲ್ಲಿಸಲು ಹೋಗಬಹುದು, ಯಾವುದೇ ಧಾರ್ಮಿಕ ಕೇಂದ್ರಗಳು ತೆರೆಯುವಂತಿಲ್ಲ.
   * ಕರ್ಫ್ಯೂ ಅವಧಿಯಲ್ಲಿ ಶಾಲೆ, ಕಾಲೇಜು, ವಿದ್ಯಾಸಂಸ್ಥೆಗಳು ಬಂದ್ ಆಗಿರಲಿವೆ.

   English summary
   Karnataka government new guidelines on Corona Curfew issued w.e.f April 21 till May 4, 2021. Know Whats open and What remain closed
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X