ರೆಸಾರ್ಟ್‌ಗಳಾದ ಕರ್ನಾಟಕದ ಜೈಲುಗಳು: ಅಪರಾಧಿಗಳಿಗೆ ವಿಶೇಷ ಸೌಕರ್ಯ...!
ಬೆಂಗಳೂರು, ನವೆಂಬರ್ 09: ಈ ಹಿಂದೆ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ್ದ ಬಗ್ಗೆ ಚರ್ಚೆ ಆಗಿತ್ತು. ಇದೀಗ ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ವಿಶೇಷ ಆತಿಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ರಾಜ್ಯ ಸರ್ಕಾರ, ಗೃಹ ಇಲಾಖೆ ಮತ್ತು ಜೈಲು ಆಡಳಿತ ವಿರುದ್ಧ ವಿಪಕ್ಷಗಳು ಸೇರಿದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ಬಿಜೆಪಿ ಕರ್ನಾಟಕ ಎಕ್ಸ್ ಪೋಸ್ಟ್ ಮೂಲಕ ತರಾಟೆಗೆ ತೆಗೆದುಕೊಂಡಿದೆ. ಜೈಲುಗಳ ಕರ್ಮಕಾಂಡಕ್ಕೆ ಕೊನೆಯೇ ಇಲ್ಲದಂತಾಗಿದೆ. ಒಂದು ಕಡೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ, ಅತ್ಯಾಚಾರ, ಕೊಲೆ, ದರೋಡೆ ಪ್ರಕರಣಗಳು ಸರಣಿ ರೂಪದಲ್ಲಿ ಘಟಿಸುತ್ತಲೇ ಇದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಅಂಕುಶ ಹಾಕುವ ಬದ್ಧತೆ ಈ ಸರ್ಕಾರಕ್ಕೆ ಇದ್ದಂತಿಲ್ಲ.

ದುಷ್ಕರ್ಮಿಗಳು, ದೇಶದ್ರೋಹಿಗಳು ಕ್ರಿಮಿನಲ್ ಕೃತ್ಯಗಳನ್ನು ಎಸಗಲು ಯಾರಿಗೂ ಹೆದರುತ್ತಿಲ್ಲ. ಏಕೆಂದರೆ ಅಪರಾಧ ಎಸಗಿ ಬಂಧನವಾದರೆ ಜೈಲುಗಳಲ್ಲಿ ರಾಜಾತಿಥ್ಯ ಸಿಗುತ್ತದೆ ಎಂಬ ಖಾತ್ರಿ ಅವರಿಗಿದೆ. ಪರಪ್ಪನ ಅಗ್ರಹಾರದಲ್ಲಿ ದೇಶವಿದ್ರೋಹಿ ಉಗ್ರಗಾಮಿಗಳಿಗೆ, ರೇಪಿಸ್ಟ್, ಸ್ಮಗ್ಲರ್ಸ್, ಕೊಲೆಗೆಡುಕರಿಗೆ ವಿಶೇಷ ಸವಲತ್ತು ದೊರೆಯುತ್ತಿದೆ ಎಂದು ಆರೋಪಿಸಿದೆ.
ಕ್ರಿಮಿನಲ್ ಗಳಿಗೆ ಕರ್ನಾಟಕ ಸ್ವರ್ಗ
"ಕರ್ನಾಟಕ ಕ್ರಿಮಿನಲ್ ಗಳಿಗೆ, ಉಗ್ರರಿಗೆ ಸ್ವರ್ಗ" ಎಂಬುದನ್ನು ಪರಪ್ಪನ ಅಗ್ರಹಾರದ ಜೈಲು ಸಾಕ್ಷೀಕರಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ನೈತಿಕತೆ ಇಲ್ಲದ ನಾಚಿಕೆಗೇಡಿತನದ ದುರಾಡಳಿತದ ಪ್ರತಿಫಲನ ಪರಪ್ಪನ ಅಗ್ರಹಾರದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಯಂತವರಿಗೆ, ಉಗ್ರ ಸಂಘಟನೆ ISISಗೆ ಉಗ್ರ ಮನಸ್ಥಿತಿಯ ಯುವಕರನ್ನು ನೇಮಕ ಮಾಡುತ್ತಿದ್ದ ಜುಹಾದ್ ಹಮೀದ್ ಶಕೀಲ್ ಮನ್ನಾನಿಗೆ ಸಕಲ ಸವಲತ್ತು ನೀಡುವುದು. ಐಷಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದು ಅತ್ಯಂತ ನಾಚಿಕೆಗೇಡಿನ ಕ್ರಮ. ಇದು ಜೈಲು ವ್ಯವಸ್ಥೆ ಹಾಗೂ ಅಧಿಕಾರಿಗಳ ದೇಶದ್ರೋಹದ ಕೃತ್ಯವಾಗಿದೆ.
ಕೂಡಲೇ ರಾಷ್ಟ್ರೀಯ ತನಿಖಾ ದಳ ಇದಕ್ಕೆ ಕಾರಣರಾದ ಜೈಲು ಸಿಬ್ಬಂದಿ, ಅಧಿಕಾರಿಗಳನ್ನು ಬಂಧಿಸಿ ದೇಶದ್ರೋಹಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಳ್ಳಲಿ ಎಂದು ಒತ್ತಾಯಿಸುವೆ. ಆತ್ಮಗೌರವ ಇದ್ದರೆ ಗೃಹಸಚಿವರು ಈ ಕೂಡಲೇ ರಾಜಿನಾಮೆ ನೀಡಲಿ. ಬದ್ಧತೆ ನೈತಿಕತೆ ಇದ್ದರೆ ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿ ಹೊರಲಿ, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ದಾವೆ ಹೂಡಲಿ ಎಂದು ರಾಜ್ಯ ಬಿಜೆಪಿ ಒತ್ತಾಯಿಸುವೆ.
ಸುರಕ್ಷಿತವಲ್ಲದ ಕರ್ನಾಟಕದಲ್ಲಿ ಸಭ್ಯ ನಾಗರೀಕರು, ಮುಗ್ಧ ಜನತೆ ಬದುಕುವುದೇಗೆ ಎಂಬ ವಾತಾವರಣ ಸೃಷ್ಟಿಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕಾಂಗ್ರೆಸ್ ಸರ್ಕಾರ ತೊಲಗುವವರೆಗೆ ಅಭಿವೃದ್ಧಿಯೂ ಇಲ್ಲ, ಜನರಿಗೆ ಸುರಕ್ಷತೆಯೂ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ತೊಲಗಲಿ, ಕರ್ನಾಟಕ ಉಳಿಯಲಿ ಎಂದು ಬಿಜೆಪಿ ಗುಡುಗಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications