ಕರ್ನಾಟಕದಲ್ಲಿ 500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ನಿರ್ಧಾರ ತೆಗೆದುಕೊಂಡ ರಾಜ್ಯ ಸರ್ಕಾರ

ಬೆಂಗಳೂರು, ಆಗಸ್ಟ್‌ 21: ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ (ADB) ಸಹಯೋಗದೊಂದಿಗೆ 1,750 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಈ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಹಿ ಹಾಕಿದರು.

ಈ ವೇಳೆ ಡಿಸಿಎಂ ಡಾ.ಜಿ.ಪರಮೇಶ್ವರ್, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಎಡಿಬಿ ಉಪ ಕಾರ್ಯದರ್ಶಿ ಸೌರಭ್ ಸಿಂಗ್, ಎಡಿಎ ರಾಷ್ಟ್ರೀಯ ನಿರ್ದೇಶಕಿ ಮಿಯೋ ಓಕಾ, ಪ್ರಧಾನ ಪೋರ್ಟ್‌ಫೋಲಿಯೊ ನಿರ್ವಹಣಾ ತಜ್ಞ ಕೈ ವೇಯ್ ಯಿಯೋ, ಪ್ರಧಾನ ಯೋಜನಾ ಅಧಿಕಾರಿ (ಶಿಕ್ಷಣ) ಪೂನಂ ಎಸ್.ಭಾಂಬ್ರಿ, ಪ್ರಧಾನ ಸಂವಹನ ಅಧಿಕಾರಿ ರಾಜೇಶ್ ಕುಮಾರ್ ಡಿಯೋಲ್, ಕಾರ್ಯನಿರ್ವಾಹಕ ಸಹಾಯಕಿ ಪೂರ್ಣಿಮಾ ಪ್ರಸಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Karnataka KPS Schools to Get 2 500 Crore Boost ADB Funds 500 Schools from 2026 Know details

ರಾಜ್ಯ ಸರ್ಕಾರದಿಂದ ಭರಿಸಲಾಗುವ ಮೊತ್ತದ ವಿವರ

'ಈ ಯೋಜನೆಯಡಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ 1,750 ಕೋಟಿ ರೂಪಾಯಿ ನೆರವು ನೀಡಲಿದ್ದು, ಕರ್ನಾಟಕ ಸರ್ಕಾರ ₹750 ಕೋಟಿ ಭರಿಸಲಿದೆ. ಒಟ್ಟು 2,500 ಕೋಟಿ ಮೊತ್ತದ ಯೋಜನೆ ಇದಾಗಿದೆ. 2026ರಿಂದ 2030 ರವರೆಗೆ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಪ್ರತಿ ಕೆಪಿಎಸ್ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ. ಇದು ಕೇವಲ ಶಾಲೆಗಳ ಅಭಿವೃದ್ಧಿಯ ಯೋಜನೆಯಲ್ಲ, ಬದಲಿಗೆ ಮುಂದಿನ 50 ವರ್ಷಗಳ ಕರ್ನಾಟಕದ ಭವಿಷ್ಯ ನಿರ್ಮಿಸುವ ಯೋಜನೆಯಾಗಿದೆ,' ಎಂದು ತಿಳಿಸಿದರು.

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಎಂಟು ಗ್ಯಾರಂಟಿ

'ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ, ದ್ವಿಭಾಷಾ ಬೋಧನೆ, ಕಂಪ್ಯೂಟರ್ ಹಾಗೂ ಕೃತಕ ಬುದ್ಧಿಮತ್ತೆ (AI) ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿಪರ ಮಾರ್ಗದರ್ಶನಕ್ಕೆ ಆದ್ಯತೆ, ಸಂಗೀತ, ಸಾಹಿತ್ಯ ಮತ್ತು ಕ್ರೀಡೆಯಲ್ಲಿ ಪ್ರತಿಭೆ ಬೆಳೆಸುವುದು, ಪಠ್ಯೇತರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು ಹಾಗೂ ವಿದ್ಯಾರ್ಥಿಗಳ ನಿರಂತರ ಪ್ರಗತಿ ಮೇಲ್ವಿಚಾರಣೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ,' ಎಂದು ಹೇಳಿದರು.

'ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರ ಸಭೆ ನಡೆಸುವ ಮೂಲಕ ಶಾಲೆ-ಪೋಷಕರ ಸಂಪರ್ಕ ಬಲಪಡಿಸುವಿಕೆ. 6ನೇ ತರಗತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಹಾಗೂ ವೃತ್ತಿಪರ ಮಾರ್ಗದರ್ಶನ ನೀಡಲು ಯೋಜಿಸಲಾಗಿದೆ,' ಎಂದರು. ಶಿಕ್ಷಕರ ಸಾಮರ್ಥ್ಯ ವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸುವುದರ ಜೊತೆಗೆ 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗೆ ವಿಶೇಷ ಗಮನ ನೀಡಲಾಗುತ್ತದೆ.

ಗ್ರಾಮೀಣ ಮಕ್ಕಳಿಗೆ ಜಾಗತಿಕ ಅವಕಾಶ

21ನೇ ಶತಮಾನದ ಕೌಶಲ್ಯಗಳನ್ನು ಶಿಕ್ಷಣದ ಭಾಗವನ್ನಾಗಿ ಮಾಡಿ, ಗ್ರಾಮೀಣ ಭಾಗದ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ಹೊಂದುವಂತೆ ರೂಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಡಿಜಿಟಲ್ ಕಲಿಕೆ, ಕೌಶಲ್ಯಾಭಿವೃದ್ಧಿ, ವೃತ್ತಿ ಮಾರ್ಗದರ್ಶನ ಹಾಗೂ ಉತ್ತಮ ಶೈಕ್ಷಣಿಕ ಫಲಿತಾಂಶಗಳಿಗೆ ಒತ್ತು ನೀಡಲಾಗುತ್ತದೆ ಎಂದು ಹೇಳಿದರು.

ಒಟ್ಟಿನಲ್ಲಿ ಹೇಳುವುದಾದರೆ ಸರ್ಕಾರ ಹಾಗೂ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನ ಈ ಜಂಟಿ ಉದ್ಯಮವು ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಲಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕೌಶಲ್ಯ, ತಂತ್ರಜ್ಞಾನ ಆಧಾರಿತ ಶಿಕ್ಷಣ ಮತ್ತು ಉಚಿತ ಸಾರಿಗೆ ಸೌಲಭ್ಯ ಕಲ್ಪಿಸುವ ಈ ಯೋಜನೆ ಕರ್ನಾಟಕದ ಮುಂದಿನ ಪೀಳಿಗೆಯನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸಂಪೂರ್ಣವಾಗಿ ಸಜ್ಜುಗೊಳಿಸಲಿದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+