KRS Dam: ದಾಖಲೆ ಬರೆದ ಕೆಆರ್ಎಸ್; ಪ್ರಮುಖ ಜಲಾಶಯಗಳ ನೀರಿನ ಮಟ್ಟ
ರಾಜ್ಯದಲ್ಲಿ ಚಳಿಗಾಲ ಆರಂಭವಾದರೂ ಡಿಸೆಂಬರ್ ಕೊನೆಯವರೆಗೂ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಮತ್ತು ಹಿಂಗಾರು ಮಳೆ ಉತ್ತಮವಾಗಿ ನಡೆದ ಕಾರಣ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು ಇನ್ನೂ ಹಲವು ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿದ್ದು ಬೇಸಿಗೆಯಲ್ಲಿ ರಾಜ್ಯದಲ್ಲಿ ಯಾವುದೇ ನೀರಿನ ಕೊರತೆ ಉಂಟಾಗುವುದಿಲ್ಲ ಎಂದು ನಿರೀಕ್ಷೆ ಮಾಡಲಾಗಿದೆ.
ಕೃಷ್ಣರಾಜಸಾಗರ (ಕೆಎಆರ್ ಎಸ್) ಜಲಾಶಯದಲ್ಲಿ ಈ ಬಾರ ನೀರಿನ ಸಂಗ್ರಹದ ವಿಚಾರದಲ್ಲಿ ದಾಖಲೆ ನಿರ್ಮಾಣವಾಗಿದೆ. ಸಂಕ್ರಾಂತಿ ಹಬ್ಬ ಕಳೆದರೂ ಜಲಾಶಯದಲ್ಲಿ ಗರಿಷ್ಠ ಮಟ್ಟಕ್ಕಿಂತ ಒಂದು ಅಡಿ ಮಾತ್ರ ನೀರು ಕಡಿಮೆಯಾಗಿದ್ದು ರೈತರಿಗೂ ನೀರಿನ ಸಮಸ್ಯೆ ಕಾಡುವುದಿಲ್ಲ ಮತ್ತು ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ಇರುವುದಿಲ್ಲ ಎಂದು ಹೇಳಲಾಗಿದೆ.

ಜಲಾಶಯಗಳ ನೀರಿನ ಮಟ್ಟ
ಗರಿಷ್ಠ 49.45 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ದಕ್ಷಿಣ ಕರ್ನಾಟಕದ ಪ್ರಮುಖ ಜಲಾಶಯ ಕೆಆರ್ ಎಸ್ ಜಲಾಶಯದಲ್ಲಿ ಗುರುವಾರ 47.65 ಟಿಎಂಸಿ ನೀರು ಸಂಗ್ರಹವಾಗಿದೆ. 124.80 ಅಡಿ ಗರಿಷ್ಠ ಮಟ್ಟ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದ್ದು ಗುರುವಾರ 123.07 ಅಡಿ ನೀರು ಸಂಗ್ರಹವಾಗಿದೆ.
ಆಲಮಟ್ಟಿ ಜಲಾಶಯದಲ್ಲಿ 519.60 ಮೀಟರ್ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿದ್ದು 516.70 ಮೀಟರ್ ಸಂಗ್ರಹವಾಗಿದೆ. ಬೇಸಿಗೆಯಲ್ಲಿ ರೈತರ ಬೆಳೆಗೆ ನೀರು ಸಿಗುವ ವಿಶ್ವಾಸದಲ್ಲಿದ್ದಾರೆ.
ಭರ್ತಿಯಾಗಿರುವ ವಾಣಿವಿಲಾಸ ಸಾಗರ
ಮಾರಿಕಣಿವೆ ಅಥವಾ ವಾಣಿ ವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಈ ಭಾಗದ ಜನರ ಸಂತಸ ಹೆಚ್ಚಿಸಿದೆ. 30.42 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಗುರುವಾರ 30.42 ಟಿಎಂಸಿ ನೀರು ಸಂಗ್ರಹವಾಗಿದೆ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 555.34 ಮೀಟರ್ / 110.52 ಟಿಎಂಸಿ
ಒಳಹರಿವು: 0
ಹೊರಹರಿವು: 5139 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 549.94 ಮೀಟರ್ / 107.25 ಟಿಎಂಸಿ
ಒಳಹರಿವು: 71 ಕ್ಯೂಸೆಕ್ಸ್
ಹೊರಹರಿವು: 993 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 590.03 ಮೀಟರ್ / 23.25 ಟಿಎಂಸಿ
ಒಳಹರಿವು: 0
ಹೊರಹರಿವು: 1447 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2280.37 ಅಡಿ / 17.263 ಟಿಎಂಸಿ
ಒಳಹರಿವು: 88 ಕ್ಯೂಸೆಕ್ಸ್
ಹೊರಹರಿವು: 436 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2903.67 ಅಡಿ / 22.150 ಟಿಎಂಸಿ
ಒಳಹರಿವು: 60 ಕ್ಯೂಸೆಕ್ಸ್
ಹೊರಹರಿವು: 570 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1622.38 ಅಡಿ / 68.26 ಟಿಎಂಸಿ
ಒಳಹರಿವು: 0
ಹೊರಹರಿವು: 12279 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2152 ಅಡಿ / 64.18 ಟಿಎಂಸಿ
ಒಳಹರಿವು: 229 ಕ್ಯೂಸೆಕ್ಸ್
ಹೊರಹರಿವು: 3978 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2153.76 ಅಡಿ / 35.34 ಟಿಎಂಸಿ
ಒಳಹರಿವು: 0
ಹೊರಹರಿವು: 3058 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2070.57 ಅಡಿ / 15.87 ಟಿಎಂಸಿ
ಒಳಹರಿವು: 0
ಹೊರಹರಿವು: 1801 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 516.70 ಮೀಟರ್ / 81.19 ಟಿಎಂಸಿ
ಒಳಹರಿವು: 0
ಹೊರಹರಿವು: 4050 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 491.30 ಮೀಟರ್ / 29.19 ಟಿಎಂಸಿ
ಒಳಹರಿವು: 2505 ಕ್ಯೂಸೆಕ್ಸ್
ಹೊರಹರಿವು: 6894 ಕ್ಯೂಸೆಕ್ಸ್
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2140 ಅಡಿ / 30.42 ಟಿಎಂಸಿ
ಒಳಹರಿವು: 693 ಕ್ಯೂಸೆಕ್ಸ್
ಹೊರಹರಿವು: 135 ಕ್ಯೂಸೆಕ್ಸ್












Click it and Unblock the Notifications