ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡೀಸೆಲ್ ಜನರೇಟರ್‌ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ ಅಳವಡಿಕೆ ಕಡ್ಡಾಯ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಮಾಲಿನ್ಯವನ್ನು ಕಡಿಮೆ ಮಾಡಲು 125 ಕೆವಿಎ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯವಿರುವ ಡೀಸೆಲ್ ಜನರೇಟರ್ (ಡಿಜಿ) ಸ್ಥಾಪಿಸಿಕೊಳ್ಳುವಂತೆ ಬಳಕೆದಾರರಿಗೆ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದ ಪ್ರಕಾರ, ವಾಯು ಮಾಲಿನ್ಯದ ಪ್ರಮುಖ ಮೂಲಗಳು ವಾಹನಗಳು, ಡಿಜಿ ಸೆಟ್‌ಗಳು, ನಿರ್ಮಾಣ ಧೂಳು ಮತ್ತು ಇತರೆ ವಸ್ತುಗಳಾಗಿವೆ. ಈ ಹಿನ್ನೆಲೆ ವಿವಿಧ ರಾಜ್ಯಗಳಿಂದ ಹೆಚ್ಚುತ್ತಿರುವ ಮಾಲಿನ್ಯ ಮಟ್ಟವನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ಎಲ್ಲಾ ರಾಜ್ಯ ಸರ್ಕಾರಿ ಸಂಸ್ಥೆಗಳ ನಿರ್ದೇಶನಗಳನ್ನು ಅನುಸರಿಸಿ ಈ ಆದೇಶವನ್ನು ಹೊರಡಿಸಲಾಗಿದೆ.

ಗಾಳಿ ಶುದ್ಧೀಕರಣ ಯಂತ್ರ ಖರೀದಿಯಿಂದ ಹಿಂದೆ ಸರಿದ ಬಿಬಿಎಂಪಿ ಗಾಳಿ ಶುದ್ಧೀಕರಣ ಯಂತ್ರ ಖರೀದಿಯಿಂದ ಹಿಂದೆ ಸರಿದ ಬಿಬಿಎಂಪಿ

Karnataka: KSPCB directed users of diesel generator to install emission control devices

ಸಾಧನ ಮತ್ತು ಡಿಜಿ ಸೆಟ್ ಅನ್ನು ಕೇಂದ್ರ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ಭಾರತ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್, ಇಂಟರ್‌ನ್ಯಾಷನಲ್ ಸೆಂಟರ್ ಫಾರ್ ಆಟೋಮೋಟಿವ್ ಟೆಕ್ನಾಲಜಿ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದಿಂದ ಐಎಸ್‌ಒ ಗುರುತಿಸಿ ಅನುಮೋದಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Recommended Video

ಈ ಸ್ಟಾರ್ ಆಟಗಾರನ ಭವಿಷ್ಯದ ಜೊತೆ ವಿರಾಟ್ ಚೆಲ್ಲಾಟವಾಡ್ತಿರೋದು ಯಾಕೆ? | Oneindia Kannada

ಡೀಸೆಲ್ ಜನರೇಟರ್ ಸೆಟ್‌ಗಳನ್ನು ಮರುಪರಿಶೀಲನೆ:
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಸರ್ಕಾರವು ಬಳಕೆದಾರರನ್ನು ಗ್ಯಾಸ್ ಆಧಾರಿತ ಜನರೇಟರ್‌ಗಳಿಗೆ ಬದಲಾಯಿಸಲು ಅಥವಾ ಅಸ್ತಿತ್ವದಲ್ಲಿರುವ ಡೀಸೆಲ್ ಜನರೇಟರ್ ಸೆಟ್‌ಗಳನ್ನು ಮರುಪರಿಶೀಲಿಸಲು ಪ್ರೋತ್ಸಾಹಿಸುತ್ತಿದೆ.
ಕಳೆದ ಸೆಪ್ಟೆಂಬರ್ 17ರ 2021ರಂದೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದ್ದು, ಮುಂದಿನ 120 ದಿನಗಳಲ್ಲಿ ಆದೇಶ ಜಾರಿಗೆ ಬರಬೇಕು ಎಂದು KSPCB ಕಾರ್ಯದರ್ಶಿ ತಿಳಿಸಿದ್ದಾರೆ. ಕೆಎಸ್‌ಪಿಸಿಬಿ ಅಧಿಕಾರಿಯೊಬ್ಬರು, "ಈಗ, ಡಿಜಿ ಸೆಟ್‌ಗಳನ್ನು ಸ್ಥಾಪಿಸಿರುವ ಸ್ಥಳಗಳನ್ನು ಪರೀಕ್ಷಿಸುವ ಕಸರತ್ತು ಈಗಾಗಲೇ ಆರಂಭವಾಗಿದೆ. ಆದಾಗ್ಯೂ, ಅನೇಕ ಅಪಾರ್ಟ್ಮೆಂಟ್ ಸಂಕೀರ್ಣಗಳು ಮತ್ತು ಕೈಗಾರಿಕೆಗಳು ತಮ್ಮ ಆತಂಕವನ್ನು ವ್ಯಕ್ತಪಡಿಸಿದರೂ, ಮಂಡಳಿಯು ಅವರಿಗೆ ನೋಟಿಸ್ ನೀಡಲು ಚಿಂತನೆ ನಡೆಸಿದೆ," ಎಂದು ಹೇಳಿದ್ದಾರೆ.

English summary
The Karnataka State Pollution Control Board (KSPCB) has directed users of diesel generator to install emission control devices to reduce pollution. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X