KSRTC ನಿಗಮಕ್ಕೆ 9 ರಾಷ್ಟ್ರೀಯ ಪ್ರಶಸ್ತಿಗಳ ಗರಿ, ವಿಭಾಗವಾರು ಮಾಹಿತಿ
ಬೆಂಗಳೂರು,ಜನವರಿ 01: ನಾಡಿನ ಜನರಿಗೆ ಅತ್ಯುತ್ತಮ ಸಾರಿಗೆ ಸೇವೆ ನೀಡುತ್ತಿರುವ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ (KSRTC) ಮತ್ತಷ್ಟು ರಾಷ್ಟ್ರಮಟ್ಟದ ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ. ದಕ್ಷತೆ, ಸಮರ್ಪಕ ಸೇವೆ, ಹೊಸ ಉಪಕ್ರಮ ಪರಿಚಯದಿಂದಾಗಿ ರಾಜ್ಯ ಸಾರಿಗೆ ನಿಗಮವು ವಿವಿಧ ವಿಭಾಗಗಳಲ್ಲಿ ಒಟ್ಟು 09 ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಭಾಜನವಾಗಿದೆ. ಈ ಪ್ರಶಸ್ತಿಗಳನ್ನು ವಿವಿಧ ಮಹಾನಗರಗಳಲ್ಲಿ ಪ್ರದಾನ ಮಾಡಲಾಯಿತು ಎಂದು ನಿಗಮವು ಬುಧವಾರ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ( KSRTC) ಗೆ 9 ರಾಷ್ಟ್ರದ ಮಟ್ಟದ ಪ್ರಶಸ್ತಿಗಳ ಪೈಕಿ 6 AdWorld Showdown ಚಿನ್ನದ ಪ್ರಶಸ್ತಿ, 2 Grow Care India ಹಾಗೂ 1 PRSI ರಾಷ್ಟ್ರೀಯ ಪ್ರಶಸ್ತಿ-2024 ಅನ್ನು ನವದೆಹಲಿ, ಗೋವಾದ ಮತ್ತು ರಾಯಪುರದಲ್ಲಿ ಪ್ರದಾನ ಮಾಡಲಾಯಿತು. ಯಾವ ಯಾವ ವಿಭಾಗದಲ್ಲಿ ಪ್ರಶಸ್ತಿಗಳು ಲಭಿಸಿವೆ ಎಂಬ ಮಾಹಿತಿ ಇಲ್ಲಿದೆ.

AdWorld Showdown ಪ್ರಶಸ್ತಿಗಳ ವಿವರ
* ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯದಿಂದ ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ ವಿಭಾಗದಲ್ಲಿ ಪ್ರಶಸ್ತಿ.
* ಅಂಬಾರಿ ಉತ್ಸವ ಬಸ್ ಗಳಿಂದ ಅತ್ಯುತ್ತಮ ಬ್ರಾಂಡ್ ಅನುಭವ ವಿಭಾಗದಲ್ಲಿ ಪ್ರಶಸ್ತಿ ಬಂದಿದೆ.
* ಅಶ್ವಮೇಧ ಕ್ಲಾಸಿಕ್ ಬಸ್ಸುಗಳು: ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ
* ಪಲ್ಲಕ್ಕಿ ಬಸ್ಸುಗಳ: ಅತ್ಯುತ್ತಮ ಗ್ರಾಹಕ ಸ್ವೀಕೃತಿ
* ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್: ಅತ್ಯುತ್ತಮ ಸಾರ್ವಜನಿಕ ಸಂಪರ್ಕ
* ಅಶ್ವಮೇಧ ಕ್ಲಾಸಿಕ್ ಬಸ್ಸುಗಳು: ವರ್ಷದ ಅತ್ಯುತ್ತಮ ಬ್ರ್ಯಾಂಡ್
ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ಪ್ರಶಸ್ತಿಗಳಿಗೂ ನಿಗಮ ಭಾಜನವಾಗಿದೆ. ಅದೇ ರೀತಿ PRSI ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ನಿಗಮಕ್ಕೆ ನೀಡಿ ಗೌರವಿಸಲಾಯಿತು.
ನಿಗಮಕ್ಕೆ AdWorld ಪ್ರಶಸ್ತಿಗಳನ್ನು ನವದೆಹಲಿಯಲ್ಲಿ, ಗ್ರೋ ಕೇರ್ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿ.ಆರ್.ಎಸ್.ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು.

KSRTCಗೆ ಚಾಂಪಿಯನ್ ಶಿಪ್ ಪ್ರಶಸ್ತಿ
ಕಳೆದ ತಿಂಗಳು 2024ರ ಡಿಸೆಂಬರ್ ನಲ್ಲಿ ಕರ್ನಾಟಕ KSRTC ನಿಗಮಕ್ಕೆ ASRTU Sports Meet ನಲ್ಲಿ ಚಾಂಪಿಯನ್ ಶಿಪ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟವು (ಎಎಸ್ ಆರ್ ಟಿ ಯು) ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ಡಿಸೆಂಬರ್ 6,7 ಮತ್ತು 8 ರಂದು ವಿಶಾಖಪಟ್ಟಣಂ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕ್ರೀಡಾಪಟುಗಳು ಭಾಗವಹಿಸಿದ್ದರು.
ಈ ಕ್ರೀಡಾಕೂಟದಲ್ಲಿ 04 ಚಿನ್ನ, 06 ಬೆಳ್ಳಿ, 07 ಕಂಚು ಒಟ್ಟು 17 ಪದಕಗಳನ್ನು ಗೆಲ್ಲುವ ಮೂಲಕ 2024 ರ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಅನ್ನು ನಿಗಮ ತನ್ನದಾಗಿಸಿಕೊಂಡಿತು. ಈ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದೇಶದ 19 ರಾಜ್ಯಗಳ ರಸ್ತೆ ಸಾರಿಗೆ ನಿಗಮಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 41 ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications