KSRTC ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ & ಗೋಲ್ಡನ್ ಸ್ಟಾರ್ ಪ್ರಶಸ್ತಿ-2024ಗೆ ಭಾಜನ

ಬೆಂಗಳೂರು, ಸೆಪ್ಟಂಬರ್ 20: ಸಾರಿಗೆ ಸೇವೆಯಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಾ ಪ್ರಯಾಣಿಕರಿಗೆ ಅತ್ಯುತ್ತಮ ಪ್ರಯಾಣದ ಅನುಭವ ನೀಡುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ಹಿಂದೆಯು ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದ ಸಾರಿಗೆ ನಿಗಮ ಇದೀಗ ಮತ್ತೆ ಎರಡು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನಿಗಮಕ್ಕೆ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ನಿಗಮದ ಪ್ರತಿಷ್ಠಿತ ಬ್ಯ್ರಾಂಡಿಂಗ್ ಉಪಕ್ರಮಗಳಿಗಾಗಿ ಗೋಲ್ಡನ್ ಸ್ಟಾರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Karnataka KSRTC got Awards of HRM Congress and Golden Star Award 2024

ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಹೋಟೆಲ್‌ವೊಂದರಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ KSRTC ಗೆ ಕೊಲ್ಕತ್ತದ EIILM ಪ್ರೊಫೆಸರ್ ಡಾ. ರಾಮಪ್ರಸಾದ್ ಬ್ಯಾನರ್ಜಿ, SASIA ಹಿರಿಯ ಉಪಾಧ್ಯಕ್ಷ ಮತ್ತು ಬಿಸಿನೆಸ್ ಮುಖ್ಯಸ್ಥ ಸಂಜಯ್ ರಾಮದಾಸ್ ಕಾಮತ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಯನಿರ್ವಾಹಕ ಅಭಿಯಂತರ ಸೋಮಶೇಖರ್, ಕಾನೂನು ಅಧಿಕಾರಿ ನರಸಿಂಹ ವರ್ಮ.ವಿ, ವಿಭಾಗೀಯ ಸಂಚಾರ ಅಧಿಕಾರಿ ಸತೀಶ್ ಕುಮಾರ್.ಎನ್, ಭದ್ರತಾ ಮತ್ತು ಜಾಗೃತಾಧಿಕಾರಿ ಚಂದ್ರೇಗೌಡ ಎ.ಜಿ ಇವರು ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

KSRTC ಇತ್ತೀಚೆಗೆ ಪಡೆದ 16 ಪ್ರಶಸ್ತಿಗಳ ಮಾಹಿತಿ

ಕೆಲವು ತಿಂಗಳ ಹಿಂದೆ ಕೆಎಸ್‌ಆರ್‌ಟಿಸಿಗೆ ರಾಷ್ಟ್ರದ ಮಟ್ಟದ 8 ವೀಡಿಯಾ (ViDEA) ಪ್ರಶಸ್ತಿಗಳು, 5 ಎಮ್ಕ್ಯೂಬ್ - (mCUBE) ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳು ಲಭಿಸಿವೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗಕ್ಕೆ (KSRTC) ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ 'ಪ್ರಾಡಕ್ಟ್ ಪ್ಲೇಸ್ಮೆಂಟ್‌ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್ ಗಾಗಿ ಪ್ರಶಸ್ತಿ ಬಂದಿದೆ. ಇದರೊಂದಿಗೆ ಅಶ್ವಮೇಧ ಬ್ರಾಂಡಿಂಗ್ ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್), ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರ ವಿಭಾಗ, ಅಶ್ವಮೇಧ ಬ್ರಾಂಡಿಂಗ್ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರ, ಪಲ್ಲಕ್ಕಿ ಬ್ರಾಂಡಿಂಗ್ ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್‌ಗಾಗಿ ಪ್ರಶಸ್ತಿಗಳು ಬಂದಿವೆ.

ಇನ್ನೂ ಅಂಬಾರಿ ಉತ್ಸವದ ಬ್ರಾಂಡಿಂಗ್ ಇನ್ಸ್ಟಾಗ್ರಾಮ್ ಅಭಿಮಾನದಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್ ವಿಭಾಗದಲ್ಲಿ, ಅಶ್ವಮೇಧ ಬ್ರಾಂಡಿಂಗ್ ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ ಹಾಗೂ ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟರ್ಪ್ರೈಸ್ ವಿಭಾಗದಲ್ಲಿ 8 ವೀಡಿಯಾ ಪ್ರಶಸ್ತಿ ಲಭಿಸಿವೆ.

ಎಮ್ಕ್ಯೂಬ್ ಪ್ರಶಸ್ತಿಗಳು, KSRTCಯ ಬ್ರಾಂಡಿಂಗ್ ಗಾಗಿ, ಬ್ರಾಂಡಿಂಗ್ ಕಡಿಮೆ ಬಜೆಟ್ ಮಾರ್ಕೆಟಿಂಗ್, ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಅಭಿಮಾನ, ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್ ಹಾಗೂ ಬ್ರಾಂಡಿಂಗ್ ಗಾಗಿ ಶ್ರೇಷ್ಠ ಆನ್ಲೈನ್ ಪಿಆರ್ ಕ್ಯಾಂಪೇನ್‌ಗಾಗಿ 5 ಎಮ್ಕ್ಯೂಬ್ ಪ್ರಶಸ್ತಿಗಳು ಬಂದಿವೆ.

ಇದರೊಂದಿಗೆ ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಜಾರಿಗೆ ತಂದ ಉಪಕ್ರಮ ಸಾರಿಗೆ ಸಂಜೀವಿನಿಗೆ 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿ ಹಾಗೂ 1 ಸ್ಕೋಚ್ ಪ್ರಶಸ್ತಿಯನ್ನು ಅಧಿಕಾರಿಗಳು ಸ್ವೀಕರಿಸಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+