ಕರ್ನಾಟಕ ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಜನವರಿ 1ರಿಂದ ಅಂತರ್‌ನಿಗಮ ವರ್ಗಾವಣೆ ಪ್ರಕ್ರಿಯೆ ಶುರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ, ಈಗಾಗಲೇ ಅರ್ಹ ನೌಕರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ವರ್ಗಾವಣೆ ಬಯಸುವವರಿಗೆ ಹೊಸ ವರ್ಷ 2026ಕ್ಕೆ ಗುಡ್ ನ್ಯೂಸ್ ನೀಡಿದ್ದು, ಜನವರಿ 1ರಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರದ ಟಿಡಿ 45 ಟಿಸಿಎಸ್ 2020 ಅಡಿ 2021 ಮಾರ್ಚ್ 23 ಮತ್ತು 2025ರ ಜನವರಿಯಂದು 18ರಂದು ಹೊರಡಿಸಿದ ಆದೇಶದ ಅನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMT), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ನಿಗಮಗಳ ದರ್ಜೆ 3 ಮೇಲ್ವಿಚಾರಕರು ಹಾಗೂ ದರ್ಜೆ 4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರ ಸಾರಿಗೆ ನೌಕರರ ವರ್ಗಾವಣೆ ಎರಡು ಆದೇಶಗಳ ಮೂಲಕ ನಿರ್ದೇಶನಗಳನ್ನು ನೀಡಿತ್ತು. ಅದರನ್ವಯ 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಹೊಸ ವರ್ಷದ ಮೊದಲ ದಿನ ಜನವರಿ 01ರಿಂದಲೇ ಆರಂಭವಾಗುತ್ತಿದೆ. ಗುರುವಾರ ಬೆಳಗ್ಗೆ 11:00 ಗಂಟೆಯಿಂದ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಿ, ಜನವರಿ 31ರ ಸಂಜೆ 5:30 ರವರೆಗೆ ನಡೆಯಲಿದೆ.
ಅರ್ಹ ನೌಕರರು ಆನ್-ಲೈನ್ ಮೂಲಕ (ಅಧಿಕೃತ ಜಾಲತಾಣ www.ksrtc.org/transfer) ಸಾಮಾನ್ಯ ವರ್ಗಾವಣೆ, ಪತಿ-ಪತ್ನಿ/ ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು/ ತೀವ್ರತರಹದ ಅನಾರೋಗ್ಯ (ಹೆಚ್.ಐ.ವಿ, ಹೃದಯರೋಗ, ಕ್ಯಾನ್ಸರ್, ಸ್ಟೈನಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಬಂಧಿಸಿದ ಖಾಯಿಲೆಗಳು) ಹೊಂದಿರುವ ನೌಕರರು ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿಎಂಟಿಸಿ, ಬೆಸ್ಕಾಂ, ಆರ್‌ಟಿಓಗೆ ವಿವಿಧ ಪ್ರಶಸ್ತಿಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಾರ್ಯ ವೈಖರಿಗೆ ಈಗಾಗಲೇ ಹಲವು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರಿಯ ಪ್ರಶಸ್ತಿಗಳು ಲಭಿಸಿವೆ. ಇತ್ತೀಚೆಗೆ ನವದೆಹಲಿಯಲ್ಲಿ ಮೋಟಾರಿಂಗ್ ವರ್ಲ್ಡ್ ಮ್ಯಾಗಜಿನ್ ಆಫ್ ಡೆಲ್ಲಿ ಪ್ರೆಸ್ ಗ್ರೂಪ್ ವತಿಯಿಂದ 'ಮೋಟಾರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್-2025' ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತ್ತು. ಅದರಲ್ಲಿ ಕರ್ನಾಟಕ ರಾಜ್ಯವು ದ್ವಿಚಕ್ರ (ಬೈಕ್) ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಹಾಗೂ ವಿದ್ಯುದೀಕರಣದಲ್ಲಿ ಮೇಲುಗೈ ಸಾಧಿಸಿದ ಕಾರಣಕ್ಕಾಗಿ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ (RTO) ಬೆಳ್ಳಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ರಾಜ್ಯವು ನಾಲ್ಕು ಚಕ್ರದ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಹಾಗೂ ವಿದ್ಯುದೀಕರಣದಲ್ಲಿ ಶೇಕಡಾ 6ರಷ್ಟು ಸಾಧನೆ ಮಾಡಿದ್ದು ಈ ನವೀನ ಪರಿಸರ ವ್ಯವಸ್ಥೆಯನ್ನು ಒಳಗೊಂಡಿರುವ ಕಾರಣ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಗೆ(RTO) ಮತ್ತೊಂದು ಬೆಳ್ಳಿ ಪ್ರಶಸ್ತಿ ಲಭಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಬೆಂಗಳೂರು ನಗರದಲ್ಲಿ ಒಟ್ಟು 1,568 ಕ್ಕೂ ಹೆಚ್ಚು ವಿದ್ಯುತ್ ಚಾಲಿತ ಬಸ್ಸುಗಳನ್ನು ಸಂಯೋಜಿತ ಬಹು ಮಾದರಿ ಯೋಜನೆಯೊಂದಿಗೆ ಒಪಂದದ ಆಧಾರಿತ ಸಂಗ್ರಹಣೆ ಹೊಂದಿರುವ ಹಿನ್ನೆಲೆಯಲ್ಲಿ ಬಿಎಂಟಿಸಿಗೆ ಬೆಳ್ಳಿ ಪ್ರಶಸ್ತಿ ದೊರೆತಿದೆ.
ಇನ್ನೂ ಕರ್ನಾಟಕ ಇಂಧನ ಇಲಾಖೆಯ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (BESCOM) ವಿದ್ಯುತ್ ಚಾಲಿತ ವಾಹನಗಳಿಗೆ ಅನುಕೂಲಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ 6,000ಕ್ಕೂ ಅಧಿಕ ವಿದ್ಯುತ್ ಚಾರ್ಜಿಂಗ್ ಕೇಂದ್ರ ರಾಜ್ಯದಲ್ಲಿ ಸ್ಥಾಪಿಸಿದೆ. ಇದರಲ್ಲಿನ ಸಾಧನೆ ಗುರುತಿಸಿ ಬೆಸ್ಕಾಂಗೆ ಚಿನ್ನ ಪ್ರಶಸ್ತಿ ನೀಡಲಾಯಿತು. ಆಯಾ ನಿಗಮ, ಸಂಸ್ಥೆಗಳ ಅಧಿಕಾರಿಗಳು ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications