KSRTC: ಹೈಟೆಕ್ 5 ಹೊಸ 'ವೋಲ್ವೋ ಐರಾವತ ಕ್ಲಬ್ ಕ್ಲಾಸ್' ಬಸ್‌ಗಳಿಗೆ ಚಾಲನೆ: ಈ ಮಾರ್ಗಗಳಲ್ಲಿ ಸಂಚಾರ, ವಿವರ

ಬೆಂಗಳೂರು, ಜುಲೈ 25: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಮಾರ್ಗಗಳಲ್ಲಿ ಹೊಸ 05 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 (KSRTC Airavata Bus) ವಾಹನಗಳ ಕಾರ್ಯಾಚರಣೆಗೆ ಸಾರಿಗೆ ಸಚಿವರ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದ್ದಾರೆ. ಯಾವೆಲ್ಲ ಮಾರ್ಗಗಳಲ್ಲಿ ಈ ಬಸ್‌ಗಳು ಸಂಚರಿಸಲಿವೆ, ಇವುಗಳು ವಿಶೇಷತೆ ಏನು, ಪ್ರಯಾಣದ ಅನುಭವ, ಟಿಕೆಟ್ ದರ ವಿವರ ಇಲ್ಲಿದೆ.

ಸಾರಿಗೆ ಸಚಿವರು 2024 ಡಿಸೆಂಬರ್ ನಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು 20 ಐರಾವತ ಕ್ಲಬ್ ಕ್ಲಸ್ 2.0 ವಾಹನಗಳಿಗೆ ಚಾಲನೆ ನೀಡಿದ್ದರು. ಅದರ ಮುಂದುವರೆದ ಭಾಗವಾಗಿ ಇಂದು ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನ ಮತ್ತು ಅತ್ಯಧುನಿಕ ವ್ಯವಸ್ಥೆ ಹೊಂದಿರುವ 05 ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರದ ಕಾರ್ಯಕ್ರಮದಲ್ಲಿ ತಿಳಿಸಿದರು.

Karnataka KSRTC Launches 5 New Volvo Iravata Club Class 2 0 Buses on This 3 Key Routes

15 ಮೀಟರ್ ಉದ್ದದ ಈ ಬಸ್‌ಗಳ ವಿಶೇಷತೆಗಳು

* 51 ಆಸನಗಳು 2x2 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ.

* ಇದು ಶಕ್ತಿಯುತ ಹಾಲೋಜನ್ ಹೆಡ್ಲೈಟ್ಗಳು ಮತ್ತು ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು (DRL) ಹೊಂದಿದೆ.

* ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್ಟೀರಿಯರ್ಸ್ ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.

* ಉತ್ತಮ ವಿನ್ಯಾಸವು, ಅತ್ಯುತ್ತಮ ಇಂಧನ ದಕ್ಷತೆ ಒಳಗೊಂಡಿದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.

* ಒಟ್ಟು ಬಸ್ ಉದ್ದದಲ್ಲಿ ಶೇ. 3.5ರಷ್ಟು ಹೆಚ್ಚಿದೆ. ಬಸ್ ಎತ್ತರದಲ್ಲಿ ಶೇ. 5.6 ರಷ್ಟು ಏರಿಕೆಯಿಂದ ಹೆಚ್ಚಿನ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ. ಪ್ರಯಾಣಿಕರ ಆಸನಗಳ ನಡುವೆ ಹೆಚ್ಚು ಸ್ಥಳವಿದೆ.

Karnataka KSRTC Launches 5 New Volvo Iravata Club Class 2 0 Buses on This 3 Key Routes

* ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು ಶೇಕಡ 9.5ರಷ್ಟು ಅಗಲವಾಗಿದೆ.

* ಹಳೆಯ ಬಸ್‌ಗಳಿಗಿಂತ 20ರಷ್ಟು ಹೊಂದಿರುವುದರಿಂದ ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ದೊಡ್ಡ ಲಗೇಜ್ ಸ್ಥಳ, ಇದರಿಂದಾಗಿ ಇಷ್ಟು ದೊಡ್ಡ ಲಗೇಜ್ ಸ್ಥಳವನ್ನು ಹೊಂದಿರುವ ಮೊದಲ ಬಸ್ ಇದಾಗಿದೆ.

* ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳು ಇವೆ. ಯುಎಸ್‌ಪಿ ಮತ್ತು C-ಟೈಪ್ ಚಾರ್ಜಿಂಗ್ ಪಾಯಿಂಟ್ ಹೊಂದಿದೆ.

* ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಆದ ಅನುಕೂಲ ಒದಗಿಸುತ್ತದೆ.

* ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

* ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್‌ಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ ಗಳ ವ್ಯವಸ್ಥೆ ಇದೆ.

* ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಸ್ಥಾಪಿಸಲಾಗಿದೆ. ಬೆಂಕಿ ಅಪಘಾತಗಳ ಸಂದರ್ಭದಲ್ಲಿ ನೀರನ್ನು ಸಿಂಪಡಿಸಲು ಪ್ರಯಾಣಿಕರ ಆಸನಗಳ ಎರಡೂ ಬದಿಗಳಲ್ಲಿರುವ 30 ನೊಜಲ್‌ಗಳ ನೀರು ಪೈಪುಗಳನ್ನು ಅಳವಡಿಸಲಾಗಿದೆ.

* ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಲಾಗಿದೆ.

ಹೊಸ ಬಸ್‌ಗಳ ಮಾರ್ಗ ವಿವರ

* ಬೆಂಗಳೂರು -ತಿರುಪತಿ ಮಧ್ಯ 01 ಬಸ್

* ಮಂಗಳೂರು- ಬೆಂಗಳೂರು ನಡುವೆ 02 ಬಸ್

* ಮೈಸೂರು-ಮಂತ್ರಾಲಯ ಮಧ್ಯ 02 ಬಸ್ ಸಂಚಾರ ನಡೆಸಲಿವೆ.

KSRTC ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಅವರು ಈ ಬಗ್ಗೆ ಮಾತನಾಡಿ, ಸಾರಿಗೆ ಮತ್ತು ಮುಜರಾಯಿ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸುವಂತೆ ತಿಳಿಸಿದರು. ಹಣವನ್ನು ಸದುಪಯೋಗಪಡಿಸ ಕೊಳ್ಳಿ ಯಾರನ್ನು ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ, ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿ ಆದ ಸಿಬ್ಬಂದಿಗೆ ನೇಮಕಾತಿ ಪತ್ರ, ಹಾಗೂ ಮೃತಪಟ್ಟ ಸಂಸ್ಥೆ ಸಿಬ್ಬಂದಿ ಕುಟುಂಬಗಳಿಗೆ ಒಂದು ಕೋಟಿ ಹಾಗು ಇತರ ವಿಮೆ ಹಣ, ಆರ್ಥಿಕ ಸೌಕರ್ಯ ವಿತರಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+