ಪತ್ನಿ ಜೊತೆ ವಿಧಾನಸಭೆ ಪ್ರವೇಶಿಸಿ ಇತಿಹಾಸ ನಿರ್ಮಿಸಲಿರುವ ಕುಮಾರಸ್ವಾಮಿ!
Recommended Video

ಬೆಂಗಳೂರು, ನವೆಂಬರ್ 7: ಪತ್ನಿಯೊಂದಿಗೆ ವಿಧಾನಸಭೆ ಪ್ರವೇಶಿಸಿ, ಈ ಸಾಧನೆ ಮಾಡಿದ ಕರ್ನಾಟಕದ ಮೊದಲ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಎಚ್ ಡಿ ಕುಮಾರಸ್ವಾಮಿ ಪಾತ್ರರಾಗಲಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ನ.03 ರಂದು ನಡೆದಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಅವರನ್ನು ಸುಮಾರು 1.09 ಲಕ್ಷ ಮತಗಳ ಅಂತರದಿಂದ ಸೋಲಿಸುವ ಮೂಲಕ ರಾಮನಗರದ ಮೊದಲ ಮಹಿಳಾ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಇದೀಗ ಮುಖ್ಯಮಂತ್ರಿಗಳ ಪತ್ನಿಯಾಗಿ ವಿಧಾನಸಭೆಗೆ ಪ್ರವೇಶಿಸಲಿರುವ ಅನಿತಾ ಕುಮಾರಸ್ವಾಮಿ ಹೊಸ ದಾಖಲೆ ಬರೆಯಲಿದ್ದಾರೆ.

ಇತಿಹಾಸ ನಿರ್ಮಿಸಲಿರುವ ದಂಪತಿ
ಇದಕ್ಕೂ ಮುನ್ನ ರಾಮನಗರ ಮತ್ತು ಮಧುಗಿರಿ ಶಾಸಕರಾಗಿ ಎಚ್ ಡಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ವಿಧಾನಸಭೆ ಪ್ರವೇಶಿಸಿದ್ದರಾದರೂ ಆಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರಲಿಲ್ಲ. ಆದರೆ ಈಗ ರಾಮನಗರದಲ್ಲಿ ಜಯ ಸಾಧಿಸುವ ಮೂಲಕ ಪತಿಯೊಂದಿಗೆ ಅನಿತಾ ಅವರು ವಿಧಾನಸಭೆ ಪ್ರವೇಶಿಸಲಿದ್ದಾರೆ!

ಅತ್ಯಪರೂಪದ ಕ್ಷಣ
"ಇದೊಂದು ಅತ್ಯಪರೂಪದ ಕ್ಷಣ. ಮುಖ್ಯಮಂತ್ರಿಗಳು ತಮ್ಮ ಪತ್ನಿಯೊಂದಿಗೆ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ! ಹೀಗೆ ಮುಖ್ಯಮಂತ್ರಿ ಮತ್ತು ಅವರ ಶಾಸಕಿ ಪತ್ನಿ ಇಬ್ಬರೂ ಒಟ್ಟಿಗೇ ವಿಧಾನಸಭೆಯಲ್ಲಿ ಇರುವ ಪ್ರಕರಣ ತೀರಾ ವಿರಳವಾಗಿದೆ" ಎಂದು ಜೆಡಿಎಸ್ ಶಾಸಕ ಕೆ ಗೋಪಾಲಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಐದು ಕ್ಷೇತ್ರಗಳಲ್ಲಿ ಚುನಾವಣೆ
ಲೋಕಸಭಾ ಕ್ಷೇತ್ರಗಳಾದ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಈ ಮೂರು ಕ್ಷೇತ್ರಗಳಿಗೆ ಮತ್ತು ವಿಧಾನಸಭಾ ಕ್ಷೇತ್ರಗಳಾದ ರಾಮನಗರ ಮತ್ತು ಜಮಖಂಡಿ ಕ್ಷೇತ್ರಗಳಿಗೆ ನ.3 ರಂದು ಉಪಚುನಾವಣೆ ನಡೆದಿತ್ತು. ನ.6 ರಂದು ಹೊರಬಿದ್ದ ಫಲಿತಾಂಶದಲ್ಲಿ ಒಟ್ಟು ಐದು ಕ್ಷೇತ್ರಗಳಲ್ಲಿ ನಾಲ್ಕನ್ನು ಜೆಡಿಎಸ್-ಕಾಂಗ್ರೆಸ್ ಮೈತ್ರಿಪಕ್ಷ ಗೆದ್ದರೆ, ಕೇವಲ ಒಂದನ್ನಷ್ಟೇ ಗೆಲ್ಲಲು ಬಿಜೆಪಿ ಶಕ್ತವಾಯಿತು.

ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆಗಳಲ್ಲಿ ಗೆಲುವು ಸಾಧಿಸಿದ್ದರು. ನಂತರ ಚನ್ನಪಟ್ಟಣವನ್ನು ತಮ್ಮ ಬಳಿಯೇ ಉಳಿಸಿಕೊಂಡು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಲ್ ಚಂದ್ರಶೇಖರ್ ಅವರು ಚುನಾವಣೆಗೆ ಎರಡು ದಿನ ಬಾಕಿ ಉಳಿದಿರುವಾಗ ಕಾಂಗ್ರೆಸ್ ಪಕ್ಷ ಸೇರಿದ್ದರಿಂದ ಜೆಡಿಎಸ್ ಗೆಲುವು ಮತ್ತಷ್ಟು ಸುಲಭವಾಯಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications