ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022 ವಿಧಾನ ಪರಿಷತ್ತಿನಲ್ಲಿ ಅಂಗೀಕಾರ, ಏನಿದು?
ಬೆಂಗಳೂರು, ಸೆಪ್ಟೆಂಬರ್ 19: ವಿಧಾನ ಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022" ಅಂಗೀಕಾರವನ್ನು ಸೋಮವಾರದಂದು ಪಡೆಯಲಾಗಿದೆ. ಕಾನೂನು ಸಚಿವ ಮಾಧುಸ್ವಾಮಿ ವಿಧಾನಪರಿಷತ್ತಿ ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022 ಅನ್ನು ಮಂಡನೆಯನ್ನು ಮಾಡಿದರು. ಈ ವೇಳೆ ಬಗರ್ ಹುಕುಂ ಅರ್ಜಿ ಹಾಕಲು ಸಮಯಾವಧಿ ವಿಸ್ತರಣೆ ಮಾಡಿ ಬಿಲ್ ತರಲಾಗಿದೆ. ಅನಧಿಕೃತ ಸಾಗುವಳಿ ಭೂಮಿಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ ಎಂದು ಸದನಕ್ಕೆ ತಿಳಿಸಿದರು.
ಈ ವೇಳೆ ವಿಧಾನ ಪರಿಷತ್ತಿನ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಮಾತನಾಡಿ, 7,15,700 ಅಪ್ಲಿಕೇಶನ್ ಗಳು ಪೆಂಡಿಂಗ್ ಇವೆ. ಅಕ್ರಮ-ಸಕ್ರಮ ಮಾಡುವುದರ ಪರಿಣಾಮವನ್ನು ಬೆಂಗಳೂರಲ್ಲಿ ಅನುಭವಿಸಿದ್ದೇವೆ. ಅರಣ್ಯ ಕಾಯ್ದೆ ಬಂದ ನಂತರ ಲಕ್ಷಾಂತರ ಜನ ಸಾಗುವಳಿ ಮಾಡ್ತಿರುವವರ ಮೇಲೆ ತೂಗುಗತ್ತಿ ನೇತಾಡ್ತಾ ಇದೆ. ಈ ಬಗ್ಗೆ ಯೋಚಿಸಬೇಕು. ಗೋಮಾಳದಲ್ಲೂ ಅಕ್ರಮವಾಗಿ ಸಾಗುವಳಿ ನಡೆಯುತ್ತಿದೆ. ಮಠ, ಸಂಸ್ಥೆಗೂ ಕೊಟ್ಟಿರುವ ಗೋಮಾಳ ಜಾಗವನ್ನು ಸಕ್ರಮ ಮಾಡುವ ಮೊದಲು ಯೋಚಿಸಬೇಕು. ಗೋಮಾಳ ಗೋಮಾಳವಾಗಿಯೇ ಇರಬೇಕು. ಕೋಟ್ಯಾಂತರ ರೂ ಬೆಲೆಬಾಳುವ ಜಾಗವನ್ನು ಸಾವಿರಾರು ರುಪಾಯಿಗೆ ಕೊಡಲಾಗಿದೆ. ಅಕ್ರಮ - ಸಕ್ರಮ ಮಾಡುವಾಗ ಎಷ್ಟು ಅಕ್ರಮ ನಡೆಯುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದರು.
ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಮಂಡಿಸಿದ್ದ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022 ಅಂಗೀಕಾರವನ್ನು ಪಡೆಯಲಾಯಿತು.

ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022ಯಲ್ಲಿ ಏನಿದೆ?
ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಮಂಡಿಸಿ ದಿನಾಂಕ 1-1-2005 ರ ಹಿಂದಿನಿಂದ ಸಾಗುವಳಿ ಮಾಡಲಾಗುತ್ತಿರುವ 17-3-2018 ರಿಂದ 16-3-2019 ರವರೆಗೆ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57 ನ್ನು ಸಲ್ಲಿಸುವುದಕ್ಕೆ ಒಂದು ವರ್ಷ ಕಾಲಾವಕಾಶ ನೀಡುವ ಸಲುವಾಗಿ ಈ ತಿದ್ದುಪಡಿ ವಿಧೇಯಕದಲ್ಲಿ ಸೇರಿಸಲಾಗಿದೆ.

ಸಂಸತ್ತಿನ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಕಾರಣ 10-3-2019 ರಿಂದ ಅರ್ಜಿಗಳನ್ನು ಸ್ವೀಕರಿಸಿರುವುದಿಲ್ಲ ಮತ್ತು ಶಾಸಕರು ಹಾಗೂ ಸಾರ್ವಜನಿಕರಿಂದ ಈ ಬಗ್ಗೆ ಹಲವು ಮನವಿಗಳು ಸ್ವೀಕೃತಗೊಂಡಿವೆ. ಹಾಗಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ-1964 ರ 94 ಎ ಪ್ರಕರಣವನ್ನು ತಿದ್ದುಪಡಿ ಮಾಡುವುದರ ಮೂಲಕ ನಮೂನೆ-57 ನ್ನು ಸಲ್ಲಿಸುವುದಕ್ಕಾಗಿ ಸಮಯ ವಿಸ್ತರಿಸಲು ಕಂದಾಯ ಅಧಿನಿಯಮಕ್ಕೆ ತಿದ್ದುಪಡಿ ಅವಶ್ಯವೆಂದು ಪರಿಗಣಿಸಿ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ಇದೀಗ ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ- 2022ಕ್ಕೆ ಅಂಗೀಕಾರ ಸಿಗುವ ಮೂಲಕ ಉಭಯ ಸದನದಲ್ಲಿ ವಿಧೇಯಕ ಅಂಗೀಕಾರಗೊಂಡಂತೆ ಆಗಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications