Good News: ಒಂದೇ ಪೋರ್ಟಲ್‌ನಲ್ಲಿ 150 ಸರ್ಕಾರಿ ಸೇವೆ: Karnataka
ಬೆಂಗಳೂರು, ಫೆಬ್ರವರಿ 11: ಕರ್ನಾಟಕ ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಬೆಂಗಳೂರಿನಲ್ಲಿ ಇಂದು ಉದ್ಘಾಟನೆಯಾದ ಜಾಗತಿಕ ಹೂಡಿಕೆದಾರರ ಸಮಾವೇಶ 2025 ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಹೊಸ ಪೋರ್ಟಲ್ ಅನ್ನು ಉದ್ಘಾಟಿಸಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಲಾಗಿದೆ. ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದೆ. ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ.

ಇದರೊಂದಿಗೆ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದಾಗಿದೆ. ಸಚಿವರು ಇದರ ಪ್ರಯೋಜನ, ಏನೆಲ್ಲ ಪ್ರಮಾಣ ಪತ್ರ ಪಡೆದುಕೊಳ್ಳಬಹುದೆಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ ಹೋಗಿದ್ದವು. ಇದರಿಂದ ಎಲ್ಲವೂ ಮಂದಗತಿಗೆ ಸಿಲುಕಿ ಸ್ತಬ್ಧವಾಗುತ್ತಿದ್ದವು. ಈಗ ರಾಜ್ಯ ಸರಕಾರದ 30 ಇಲಾಖೆಗಳ ಎಲ್ಲ ಸೇವೆಗಳನ್ನೂ ಒಂದೆಡೆ ತರಲಾಗಿದೆ.
ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ವಿನ್ಯಾಸಗೊಳಿಸಿರುವ ಚಾಟ್-ಬಾಟ್ ಸೌಲಭ್ಯದಲ್ಲಿ ಉದ್ಯಮಿಗಳು ತಮಗೆ ಬೇಕಾದ ಸೇವೆ/ಮಾಹಿತಿಗಳನ್ನು ತಮ್ಮ ಇಷ್ಟದ ಭಾಷೆಯಲ್ಲಿ ಬೆರಳತುದಿಯಲ್ಲೇ ಪಡೆದುಕೊಳ್ಳಬಹುದು. ಈ ಸೇವೆಗಳು ಮೊಬೈಲ್‌ನಲ್ಲಿ ಕೂಡ ಸಿಗಲಿವೆ ಎಂದು ಅವರು ವಿವರಿಸಿದರು.

'ಕರ್ನಾಟಕ ಉದ್ಯೋಗ ಮಿತ್ರ': ಪ್ರಯೋಜನ
ಈ ಏಕಗವಾಕ್ಷಿ ವ್ಯವಸ್ಥೆಯಡಿ 'ಕರ್ನಾಟಕ ಉದ್ಯೋಗ ಮಿತ್ರ'ದ ಮೂಲಕ ಹೂಡಿಕೆದಾರರಿಗೆ ಪ್ರಮಾಣಪತ್ರ ಆಧರಿತ ಅನುಮೋದನೆ (ಎಬಿಸಿ) ನೀಡಲಾಗುವುದು. ಹೀಗಾಗಿ ಉದ್ಯಮಿಗಳು ಅನುಮೋದನೆಗಳಿಗೆ ಕಾಯದೆ, ತಕ್ಷಣವೇ ಕಟ್ಟಡ ಕಾಮಗಾರಿ ಮತ್ತು ಇತರೆ ಸಿದ್ಧತೆ ಆರಂಭಿಸಬಹುದು.
ಈ ವ್ಯವಸ್ಥೆಯನ್ನು ರಾಷ್ಟ್ರ ಮಟ್ಟದ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಬೆಸೆಯಲಾಗಿದೆ. ಈ ಪೋರ್ಟಲ್‌ನಲ್ಲಿ ಕೈಗಾರಿಕೆಗೆ ಬೇಕಾದ ಭೂಮಿಯ ಹುಡುಕಾಟ, ಮಂಜೂರಾತಿ, ಕಟ್ಟಡ ನಕಾಶೆಗೆ ಅನುಮೋದನೆ ಮುಂತಾದ ಕೆಐಎಡಿಬಿ ಸೇವೆಗಳೂ ಸಿಗಲಿವೆ ಎಂದು ತಿಳಿಸಿದರು.
ಹೊಸ ವ್ಯವಸ್ಥೆಯಲ್ಲಿ ಜಿಐಎಸ್ ಆಧರಿತ ಕೈಗಾರಿಕಾ ಮಾಹಿತಿಯನ್ನೂ ಒದಗಿಸಲಾಗುವುದು. ಹೀಗಾಗಿ ಕೈಗಾರಿಕೆಗೆ ತಮ್ಮ ಸ್ವಂತ ಅಥವಾ ಕಂದಾಯ ಭೂಮಿಯನ್ನು ಉಪಯೋಗಿಸಿಕೊಳ್ಳುವವರಿಗೆ ಅನುಕೂಲವಾಗಲಿದೆ. ನಿರಾಕ್ಷೇಪಣಾ ಪತ್ರ ಇತ್ಯಾದಿಗಳಿಗೆ ವಿಝರ್ಡ್ ತಂತ್ರಜ್ಞಾನವನ್ನುಳ್ಳ ಸಾಧನ ಇದರಲ್ಲಿದೆ. ಹಾಗೆಯೇ, ಉದ್ಯಮಿಗಳು ತಮಗೆ ಸಿಗಲಿರುವ ಪ್ರೋತ್ಸಾಹನಾ ಭತ್ಯೆ, ರಿಯಾಯಿತಿ ಮತ್ತು ವಿನಾಯಿತಿಗಳನ್ನು 'ವಿಝರ್ಡ್ ಮತ್ತು ಕ್ಯಾಲ್ಕ್ಯುಲೇಟರ್' ಮೂಲಕ ತಿಳಿದುಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications