• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಧನಂಜಯ ಕುಮಾರ್ ನಿಧನ : ಪಕ್ಷಬೇಧ ಮರೆತು ಸಂತಾಪ ಸೂಚಿಸಿದ ಗಣ್ಯರು

|

ಬೆಂಗಳೂರು, ಮಾರ್ಚ್ 04 : ಕೇಂದ್ರದ ಮಾಜಿ ಸಚಿವ ವಿ.ಧನಂಜಯ ಕುಮಾರ್ ವಿಧಿವಶರಾಗಿದ್ದಾರೆ. ಕರ್ನಾಟಕದ ವಿವಿಧ ರಾಜಕೀಯ ನಾಯಕರು ಪಕ್ಷಬೇಧ ಮರೆತು ಹಿರಿಯ ನಾಯಕರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವಿ.ಧನಂಜಯ ಕುಮಾರ್ (67) ಅವರು ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಆರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೋಮಾ ಸ್ಥಿತಿಗೆ ತಲುಪಿದ್ದರು.

ಕೇಂದ್ರ ಮಾಜಿ ಸಚಿವ ಧನಂಜಯ ಕುಮಾರ್ ಇನ್ನಿಲ್ಲ

ಮಂಗಳವಾರ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ತನಕ ಮಂಗಳೂರಿನ ಕದ್ರಿಕಂಬಳದಲ್ಲಿರುವ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಸಂಜೆ ವೇಣೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಾಜಿ ಕೇಂದ್ರ ಸಚಿವ ವಿ. ಧನಂಜಯ್ ಕುಮಾರ್ ನಿಧನಕ್ಕೆ ಸಂತಾಪ

ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಧನಂಜಯ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

'ಒಬ್ಬ ಉತ್ತಮ ಗೆಳೆಯರ ಅಗಲಿಕೆಯ ನೋವು ತುಂಬಾ ಕಾಡುತ್ತಿದೆ' ಎಂದು ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಸಂತಾಪ

ಕೇಂದ್ರ ಮಾಜಿ ಸಚಿವ ವಿ. ಧನಂಜಯ ಕುಮಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವಾಜಪೇಯಿ ಸರ್ಕಾರದಲ್ಲಿ ಎರಡು ಅವಧಿಯಲ್ಲಿ ವಿವಿಧ ಖಾತೆಗಳನ್ನು ನಿಭಾಯಿಸಿದ ಅನುಭವ ಅವರದಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಅಗಲಿಕೆಯ ನೋವು ತುಂಬಾ ಕಾಡುತ್ತಿದೆ

ಹಿರಿಯ ರಾಜಕಾರಣಗಳು, ಮಾಜಿ ಕೇಂದ್ರ ಸಚಿವರು, ಆತ್ಮೀಯರೂ ಆಗಿದ್ದ ಶ್ರೀ ವಿ.ಧನಂಜಯ ಕುಮಾರ್ ಅವರ ನಿಧನವು ತೀವ್ರ ದುಃಖ ತರಿಸಿದೆ. ಒಬ್ಬ ಉತ್ತಮ ಗೆಳೆಯರ ಅಗಲಿಕೆಯ ನೋವು ತುಂಬಾ ಕಾಡುತ್ತಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನಿಧನದ ಸುದ್ದಿ ಆಘಾತ ಉಂಟು ಮಾಡಿದೆ

ಮಾಜಿ ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಅವರ ನಿಧನದ ಸುದ್ದಿ ಆಘಾತವನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂಚೂಣಿ ನಾಯಕರಾಗಿದ್ದರು

ಕರಾವಳಿ ಕರ್ನಾಟಕದಲ್ಲಿ ಬಿಜೆಪಿಯ ಮುಂಚೂಣಿಯ ನಾಯಕರಲ್ಲೊಬ್ಬರಾಗಿದ್ದ ಮಾನ್ಯ ಶ್ರೀ ವಿ. ಧನಂಜಯ ಕುಮಾರ್ ನಿಧನದ ಸುದ್ಧಿ ತಿಳಿದು ದುಃಖ ವಾಯಿತು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ.

ತೀವ್ರ ದುಃಖವಾಯಿತು

ಮಾಜಿ ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಸಂತಾಪ ಸೂಚಿಸಿದ ಡಿಸಿಎಂ

ಕೇಂದ್ರದ ಮಾಜಿ ಸಚಿವ ವಿ.ಧನಂಜಯ ಕುಮಾರ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಟ್ವೀಟ್ ಮಾಡಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ

ಕೇಂದ್ರ ಮಾಜಿ ಸಚಿವ ಧನಂಜಯ್ ಕುಮಾರ್ ಇನ್ನಿಲ್ಲ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸುರೇಶ್ ಕುಮಾರ್ ಸಂತಾಪ

1983 ರಲ್ಲಿ ಬಿಜೆಪಿ ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿ ಶಾಸಕನಾಗಿ ಗೆದ್ದು, ತದ ನಂತರ ಲೋಕಸಭೆಗೆ ಆಯ್ಕೆಯಾಗಿ, ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದ ಶ್ರೀ ಧನಂಜಯ ಕುಮಾರ್ ರವರು ಇನ್ನಿಲ್ಲ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ತುಂಬಲಾರದ ನಷ್ಟ

ಕರಾವಳಿ ಪ್ರದೇಶದ ಹಿರಿಯ ರಾಜಕಾರಣಿಯಾಗಿದ್ದ ಧನಂಜಯಕುಮಾರ್‌ರ ನಿಧನ ತುಂಬಲಾರದನಷ್ಟ ಎಂದು ಸಚಿವ ಜಿ.ಟಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಸಂತಾಪ ಸೂಚಿಸಿದ ಮೊಯ್ಲಿ

ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ವಿ.ಧನಂಜಯ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಯು.ಟಿ.ಖಾದರ್ ಸಂತಾಪ

ವಸತಿ ಸಚಿವ ಯು.ಟಿ.ಖಾದರ್ ಅವರು ವಿ. ಧನಂಜಯ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕರಾವಳಿ ಭಾಗಕ್ಕೆ ಕೊಡುಗೆ ಅಪಾರ

ಕರಾವಳಿ ಭಾಗದಲ್ಲಿ ಬಿಜೆಪಿಗೆ ಬೆಳೆಯಲು ವಿ.ಧನಂಜಯ್ ಕುಮಾರ್ ಅವರ ಕೊಡುಗೆ ಅಪಾರ ಎಂದು ಮಾಜಿ ಸಚಿವ ಸಿ.ಟಿ.ರವಿ ನೆನಪು ಮಾಡಿಕೊಂಡಿದ್ದು, ಸಂತಾಪ ಸೂಚಿಸಿದ್ದಾರೆ.

English summary
Former Union Minister Venur Dhananjay Kumar passed away in Mangaluru on Monday, March 4, 2019. Karnataka political leaders expressed their condolences for the death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X