Legislative Council Election 2024: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ
ಬೆಂಗಳೂರು, ಮೇ. 02 : ಲೋಕಸಭಾ ಚುನಾವಣಾ ಮೂರನೇ ಹಂತದ ಮತದಾನಕ್ಕೆ ದೇಶ ಸಿದ್ಧವಾಗುತ್ತಿದೆ. ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಇದೆ ಸಂದರ್ಭದಲ್ಲಿ ಹಾಲಿ ಸದಸ್ಯರ ನಿವೃತ್ತಿಯ ನಂತರ ತೆರವಾಗಲಿರುವ ಕರ್ನಾಟಕದ ಆರು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
ಜೂನ್ 3 ರಂದು ಆರು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಗುರುವಾರ ತಿಳಿಸಿದೆ. ರಾಜ್ಯದ ಮೂರು ಪದವೀಧರ ಕ್ಷೇತ್ರಗಳು ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ರಾಜ್ಯ ವಿಧಾನ ಪರಿಷತ್ ಚುನಾವಣೆ
ಮೇ 9 ರಂದು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆಯ ಅಧಿಸೂಚನೆ ಹೊರಡಿಸಲಿದ್ದು, ಮೇ 16ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಮತ್ತು ಮೇ 20 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ಜೂನ್ 6ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣೆಯನ್ನು ದಿನಾಂಕ ಜೂನ್ 12ರ ಒಳಗೆ ಮುಗಿಸಬೇಕು ಎಂದು ಆಯೋಗ ತಿಳಿಸಿದೆ.
ಮುಗಿಯಲಿದೆ ಆರು ಸದಸ್ಯರ ಅಧಿಕಾರಾವಧಿ
ರಾಜ್ಯ ವಿಧಾನ ಪರಿಷತ್‌ನ ಮೂರು ಪದವೀಧರ ಕ್ಷೇತ್ರಗಳು ಮತ್ತು ಮೂರು ಶಿಕ್ಷಕರ ಕ್ಷೇತ್ರಗಳ ಸದಸ್ಯರ ಅಧಿಕಾರಾವಧಿ ಜೂನ್ 21 ರಂದು ಮುಗಿಯಲಿದ್ದು, ಅವರು ನಿವೃತ್ತರಾಗುತ್ತಿದ್ದಾರೆ.
* ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ- ಡಾ.ಚಂದ್ರಶೇಖರ ಬಿ ಪಾಟೀಲ್
* ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರ - ಆಯನೂರು ಮಂಜುನಾಥ
* ಬೆಂಗಳೂರು ಪದವೀಧರ ಕ್ಷೇತ್ರ- ಎ ದೇವೇಗೌಡ
* ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ - ಡಾ.ವೈ.ಎ.ನಾರಾಯಣಸ್ವಾಮಿ
* ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ - ಎಸ್.ಎಲ್.ಭೋಜೇಗೌಡ
*ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ- ಮರಿತಿಬ್ಬೇಗೌಡ












Click it and Unblock the Notifications