ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

Subscribe to Oneindia Kannada

ಬೆಂಗಳೂರು, ಡಿಸೆಂಬರ್. 06: ವಿಧಾನ ಪರಿಷತ್ ಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ನಂತರ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಅಂತಿಮ ಮಾಡಲಾಗಿದೆ.

ಒಟ್ಟು 20 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಈಗಾಗಲೇ 12 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇಂದು 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಇನ್ನು ಎರಡು ಕ್ಷೇತ್ರ ಅಂದರೆ ತುಮಕೂರು ಮತ್ತು ಕೋಲಾರ ಕ್ಷೇತ್ರಗಳಿಗೆ ಸದ್ಯವೇ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪ್ರಹ್ಲಾದ ಜೋಶಿ ತಿಳಿಸಿದರು.[ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ]

bjp

ಬಿಜೆಪಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ ಕುಮಾರ್, ಡಿ.ವಿ.ಸದಾನಂದಗೌಡ, ವಿಧಾನ ಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಆರ್. ಅಶೋಕ್ ಹಾಜರಿದ್ದರು.[ಪರಿಷತ್ ಚುನಾವಣೆ ವೇಳಾಪಟ್ಟಿ]

6 ಅಭ್ಯರ್ಥಿಗಳ ಅಂತಿಮ ಪಟ್ಟಿ( ಬಿಜೆಪಿ 2 ನೇ ಪಟ್ಟಿ)
ಬೆಂಗಳೂರು ಗ್ರಾಮಾಂತರ: ಹನುಮಂತೇಗೌಡ
ಬೆಂಗಳೂರು ನಗರ: ದೊಡ್ಡ ಬಸವರಾಜು
ಬೀದರ್: ಸಂಜಯ ಖೇಣಿ
ಬಳ್ಳಾರಿ: ಚನ್ನಬಸವನಗೌಡ
ಹಾಸನ: ರೇಣು ಕುಮಾರ್
ಮಂಡ್ಯ: ನಾಗಣ್ಣ ಗೌಡ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Bharatiya Janata Party on Sanday announced candidates second list for Legislative council election.
Please Wait while comments are loading...