ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳು ಘೋಷಣೆ

|
Google Oneindia Kannada News

ಬೆಂಗಳೂರು , ಜೂನ್ 17 : ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ 7 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

Recommended Video

The sovereignty of the Galwan valley area always belonged to China:Zhao Lijian | Oneindia Kannada

ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಗುರುವಾರ ಕೊನೆ ದಿನವಾಗಿದೆ.

ಪರಿಷತ್ ಫೈಟ್; ಸಿದ್ದರಾಮಯ್ಯ ಭೇಟಿಯಾದ ಡಿಕೆಶಿ ಪರಿಷತ್ ಫೈಟ್; ಸಿದ್ದರಾಮಯ್ಯ ಭೇಟಿಯಾದ ಡಿಕೆಶಿ

Karnataka Legislative Council Election: Congress Candidates List Announced

ಬಿ. ಕೆ. ಹರಿಪ್ರಸಾದ್ ಮತ್ತು ನಜೀರ್ ಅಹ್ಮದ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿದ್ದಾರೆ. ವಿಧಾನಸಭೆಯಲ್ಲಿ 68 ಶಾಸಕರ ಬಲವನ್ನು ಹೊಂದಿರುವ ಕಾಂಗ್ರೆಸ್ ಇಬ್ಬರು ಸದಸ್ಯರನ್ನು ಪರಿಷತ್‌ಗೆ ಆಯ್ಕೆ ಮಾಡಿ ಕಳಿಸಬಹುದಾಗಿದೆ.

ಪರಿಷತ್ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗಾಗಿ ಭಾರಿ ಲಾಬಿ!ಪರಿಷತ್ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗಾಗಿ ಭಾರಿ ಲಾಬಿ!

ಕಾಂಗ್ರೆಸ್‌ ಪಕ್ಷದ 2 ಸೀಟುಗಳಿಗೆ 200ಕ್ಕೂ ಅಧಿಕ ಆಕಾಂಕ್ಷಿಗಳಿದ್ದರು. ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಂಗಳವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿದ್ದರು. ಬುಧವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.

ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿವಿಧಾನ ಪರಿಷತ್ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಅಲ್ಪಸಂಖ್ಯಾತ ನಾಯಕರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಡ ಹಾಕಲಾಗಿತ್ತು. ಆದ್ದರಿಂದ, ನಜೀರ್ ಅಹ್ಮದ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಿ. ಕೆ. ಹರಿಪ್ರಸಾದ್ 2019ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೋಲು ಕಂಡಿದ್ದರು.

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿ. ಕೆ. ಹರಿಪ್ರಸಾದ್ ನಿವೃತ್ತರಾಗಿದ್ದರು. ಹೈಕಮಾಂಡ್ ಮಟ್ಟದಲ್ಲಿ ಭಾರಿ ಪ್ರಭಾವ ಹೊಂದಿರುವ ಅವರು ವಿಧಾನ ಪರಿಷತ್ ಚುನಾವಣೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

English summary
Congress announced candidates for the legislative council elections. On June 29th election will be held to elect 7 members from Karnataka assembly to council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X