ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

25 ಸ್ಥಾನಗಳ ಪರಿಷತ್ ಚುನಾವಣೆಗೆ ವೇಳಾಪಟ್ಟಿ ಪ್ರಕಟ

|
Google Oneindia Kannada News

ಬೆಂಗಳೂರು, ನವೆಂಬರ್ 25 : ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಡಿಸೆಂಬರ್ 27ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಕೇಂದ್ರ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ. 2016ರ ಜನವರಿ 6ರಂದು 25 ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದ್ದು, ಅಷ್ಟರೊಳಗೆ ನೂತನ ಸದಸ್ಯರ ಆಯ್ಕೆ ನಡೆಯಬೇಕಾಗಿದೆ. [ಎಂಎಲ್ಸಿ ಚುನಾವಣೆ ಲಾಬಿ, ರಮ್ಯಾ ಹೆಸರು ಐತೇನ್ರಿ!]

legislative council

ವೇಳಾಪಟ್ಟಿ : ಡಿಸೆಂಬರ್ 2 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 9 ಕೊನೆಯ ದಿನ. ಡಿಸೆಂಬರ್ 10ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಡಿಸೆಂಬರ್ 12 ಕೊನೆಯ ದಿನ. [ಬೀದರ್, ದೇವದುರ್ಗ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕು]

ಡಿಸೆಂಬರ್ 27 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಮತ ಎಣಿಕೆ ನಡೆಯಲಿದ್ದು, ಫ‌ಲಿತಾಂಶ ಪ್ರಕಟಗೊಳ್ಳಲಿದೆ.

ಚುನಾವಣೆಗೆ ಬಿಜೆಪಿ 16 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್, ಮಾಜಿ ಸಚಿವ ಮುರುಗೇಶ ನಿರಾಣಿ ಸಹೋದರ ಹನುಮಂತ ನಿರಾಣಿ ಅವರಿಗೆ ಟಿಕೆಟ್ ನೀಡಲಾಗಿದೆ. [ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ]

ದಿನಾಂಕಗಳು

* ಡಿಸೆಂಬರ್ 2ರ ಬುಧವಾರ ಚುನಾವಣೆ ಅಧಿಸೂಚನೆ ಪ್ರಕಟ
* ಡಿಸೆಂಬರ್ 9ರ ಬುಧವಾರ ನಾಮಪತ್ರ ಸಲ್ಲಿಸಲು ಕೊನೆ ದಿನ
* ಡಿಸೆಂಬರ್ 10ರ ಗುರುವಾರ ನಾಮಪತ್ರ ಪರಿಶೀಲನೆ
* ಡಿಸೆಂಬರ್ 12ರ ಶನಿವಾರ ನಾಪಪತ್ರ ವಾಪಸ್ ಪಡೆಯಲು ಕೊನೆಯ ದಿನ
* ಡಿಸೆಂಬರ್ 27ರ ಭಾನುವಾರ ಮತದಾನ
* ಡಿಸೆಂಬರ್ 30ರ ಬುಧವಾರ ಫಲಿತಾಂಶ ಪ್ರಕಟ

English summary
The Election Commission of India on November 24th announced time table for the elections to the Legislative Council from graduates, teachers and local authorities constituencies. Election will be held on December 27, 2015. Code of conduct comes into force with immediate effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X