ಪರಿಷತ್ : ನೂತನ ಸದಸ್ಯರ ಪ್ರಮಾಣ, ರಘು ಆಚಾರ್ ಗೈರು
ಬೆಂಗಳೂರು, ಜನವರಿ 06 : ಕರ್ನಾಟಕ ವಿಧಾನಪರಿಷತ್ತಿನ ನೂತನ ಸದಸ್ಯರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಡಿಸೆಂಬರ್ 27ರಂದು ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿತ್ತು.
ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. [ಪರಿಷತ್ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?]

ಕಾಡಿದ ಧನುರ್ ಮಾಸ : ಚಿತ್ರದುರ್ಗ ಕ್ಷೇತ್ರದಲ್ಲಿ ಜಯಗಳಿಸಿದ ರಘು ಆಚಾರ್ (ಕಾಂಗ್ರೆಸ್) ಹೊರತುಪಡಿಸಿ, ಉಳಿದ 24 ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಧನುರ್ ಮಾಸವಾದ ಕಾರಣ ಆಚಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿಲ್ಲ ಎಂದು ತಿಳಿದುಬಂದಿದೆ. ['ಪರಿಷತ್ ಚುನಾವಣೆಯಲ್ಲಿ ನಮ್ಮವರೇ ಮೋಸ ಮಾಡಿದರು']
ಗೋಮಾತೆ ಹೆಸರಿನಲ್ಲಿ ಪ್ರಮಾಣ ವಚನ : ವಿಜಯಪುರ-ಬಾಗಲಕೋಟೆ ದ್ವಿಸದಸ್ಯ ಕ್ಷೇತ್ರದಲ್ಲಿ ಜಯಗಳಿಸಿದ ಬಸನಗೌಡ ಪಾಟೀಲ್ ಯತ್ನಾಳ್ (ಪಕ್ಷೇತರ) ಅವರು ಗೋ ಮಾತೆಯ ಹೆಸರಿನಲ್ಲಿ, ಮಂಡ್ಯ ಕ್ಷೇತ್ರದಲ್ಲಿ ಜಯಗಳಿಸಿದ ಅಪ್ಪಾಜಿ ಗೌಡ (ಜೆಡಿಎಸ್) ಅವರು ದೇವೇಗೌಡರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.













Click it and Unblock the Notifications