Get Updates
Get notified of breaking news, exclusive insights, and must-see stories!

Liquor: ಅಬಕಾರಿ ಇಲಾಖೆಯಲ್ಲಿ ಕಮಿಷನ್ ದಂಧೆ, ಏನಿದು ವಿವಾದ - ರಾಹುಲ್‌ಗೆ ದೂರು ನೀಡಲು ಸಿದ್ಧತೆ

ಕಾಂಗ್ರೆಸ್‌ ಸರ್ಕಾರದಡಿ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಂದೊಂದು ಲೈಸೆನ್ಸ್‌ ನೀಡಲೂ ಕೋಟಿಗಟ್ಟಲೆ ಲಂಚ ನೀಡಬೇಕಾಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪಾಲು ಸಿಗುತ್ತಿರುವ ಕಾರಣ ಸಿಎಂ ಅವರಿಗೆ ದೂರು ನೀಡಿದರೂ ಏನೂ ಸ್ಪಂದನೆ ನೀಡುತ್ತಿಲ್ಲ. ಈ ಕೂಡಲೇ ಸಿಎಂ ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಖ್ಯಮಂತ್ರಿಗಳ ವಿರುದ್ಧವೇ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಎಚ್ಚರಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಡಿ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಂದೊಂದು ಲೈಸೆನ್ಸ್‌ ನೀಡಲೂ ಕೋಟಿಗಟ್ಟಲೆ ಲಂಚ ನೀಡಬೇಕಾಗಿದೆ. ಈ ಹಗರಣದಲ್ಲಿ ಸಿಎಂ ಅವರಿಗೂ ಪಾಲು ಸಿಗುತ್ತಿರುವ ಕಾರಣ ಸಿಎಂ ಅವರಿಗೆ ದೂರು ನೀಡಿದರೂ ಏನೂ ಸ್ಪಂದನೆ ನೀಡುತ್ತಿಲ್ಲ. ಈ ಕೂಡಲೇ ಸಿಎಂ ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಖ್ಯಮಂತ್ರಿಗಳ ವಿರುದ್ಧವೇ ನಡೆಯಲಿದೆ ಎಂದು ಹೇಳಿದ್ದಾರೆ.

Karnataka Liquor

ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್‌ ದಂಧೆ ನಿತ್ಯನಿರಂತರವಾಗಿದೆ. ಬಿಜೆಪಿ ಸರ್ಕಾರದ ಮೇಲೆ 40% ಎಂಬ ಸುಳ್ಳು ಆರೋಪ ಹೊರಿಸಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಈಗ ಕಮಿಷನ್‌ ದಂಧೆಯನ್ನೇ ನಿತ್ಯದ ಕಾಯಕವಾಗಿಸಿಕೊಂಡಿದೆ.

ಮದ್ಯದಂಗಡಿಗಳಲ್ಲಿ ಪರವಾನಗಿಯಿಂದ ಹಿಡಿದು ಪ್ರತಿ ಹಂತದಲ್ಲೂ ಸಚಿವರ, ಕರ್ನಾಟಕ ಕಾಂಗ್ರೆಸ್ ಶಾಸಕರ, ಅಧಿಕಾರಿಗಳ ಕೈಬಿಸಿ ಮಾಡಬೇಕು ಎಂದು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರು ಆರೋಪ ಹೊರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ, ಕಾರಣ ಅಕ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರ ಪಾಲೂ ಇದೆ. ಭ್ರಷ್ಟಾಚಾರ ಎಸಗಿದ ಸಚಿವರನ್ನು ಸಂಪುಟದಿಂದ ತೆಗೆಯಲು ಹಿಂದೆ ಮುಂದೆ ನೋಡುತ್ತಿರುವ ಮುಖ್ಯಮಂತ್ರಿಗಳು, ಅಬಕಾರಿ ಅಕ್ರಮಕ್ಕೆ ತಮ್ಮ ಸಹಮತವಿದೆ ಎಂಬುದನ್ನು ಸೂಚಿಸುತ್ತಿದ್ದಾರೆಯೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

ಈ ಸಂಬಂಧ ಜೆಡಿಎಸ್ ಟ್ವೀಟ್ ಮಾಡಿದ್ದು, ಅಬಕಾರಿ ಇಲಾಖೆಯ "ಮಂಥ್ಲಿ ಮನಿ ಮಿನಿಸ್ಟರ್‌" ಆರ್.ಬಿ. ತಿಮ್ಮಾಪುರ "ಕಮಿಷನ್‌" ಮತ್ತು "ಕಲೆಕ್ಷನ್‌" ದಂಧೆಗೆ ಮದ್ಯ ಮಾರಾಟಗಾರರು ಹೈರಾಣಾಗಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರಕ್ಕೆ ಸಿಡಿದೆದ್ದಿರುವ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರು, ರಾಹುಲ್ ಗಾಂಧಿ, ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ನೀಡಲು ಮುಂದಾಗಿದ್ದಾರೆ. ಮೊನ್ನೆಯಷ್ಟೇ ಬೆಂಗಳೂರು ಅಬಕಾರಿ ಡಿಸಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದು ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ಬೇರೂರಿರುವ ಭ್ರಷ್ಟಾಚಾರಕ್ಕೆ ಹಿಡಿದಿರುವ ಕೈಗನ್ನಡಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ನಿಮಗೆ ಕಿಂಚಿತ್ತಾದರೂ ಮಾನ, ಮರ್ಯಾದೆ ಉಳಿಸಿಕೊಂಡಿದ್ದರೇ, ಮೊದಲು ಭ್ರಷ್ಟ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್‌ ಅವರನ್ನು ಸಂಪುಟದಿಂದ ಕಿತ್ತೊಗೆಯಿರಿ ಎಂದು ಜೆಡಿಎಸ್ ಹೇಳಿದೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತು ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಗುರುಸ್ವಾಮಿ ಅವರು ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿರುವ ನಡೆ,

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ನಾಚಿಕೆಗೇಡಿನ ವಿಷಯ.

ರಾಹುಲ್ ಗಾಂಧಿ ಅವರಿಗೆ ಈ ಬಗ್ಗೆ ದೂರು ನೀಡಿದರು ಕೂಡ ಮದ್ಯ ಮಾರಾಟಗಾರರಿಗೆ ಇದರಿಂದ ಯಾವುದೇ ಪ್ರಯೋಜನ ಆಗುವ ಸಾಧ್ಯತೆ ಇಲ್ಲ. ಕಾರಣ ವಸೂಲಿ ಮಾಡಲು ಆದೇಶ ಕೊಟ್ಟಿರೋದೇ ಹೈಕಮಾಂಟ್ ಆಗಿರುವುದರಿಂದ‌ ಇನ್ನು ಅವರಿಂದ ಏನು ಪರಿಹಾರ ಸಿಗಲಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಎಲ್ಲ ರೀತಿಯಿಂದಲೂ ಲೂಟಿ ಹೊಡೆಯುತ್ತಿರುವ ಈ ಲೂಟಿಕೋರ ಕರ್ನಾಟಕ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಗುತ್ತಿಗೆದಾರರ, ಮದ್ಯ ಮಾರಾಟಗಾರರ ಸಮಸ್ಯೆ ಬಗೆಹರಿಯಲ್ಲ. ಸರ್ಕಾರಕ್ಕೆ ಕಿಂಚಿತ್ತಾದರೂ ಮಾನ, ಮರ್ಯಾದೆ ರಾಜ್ಯದ ಜನತೆಯ ಮೇಲೆ ಗೌರವವಿದ್ದರೆ ಈ ಕೂಡಲೇ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+