Liquor: ಅಬಕಾರಿ ಇಲಾಖೆಯಲ್ಲಿ ಕಮಿಷನ್ ದಂಧೆ, ಏನಿದು ವಿವಾದ - ರಾಹುಲ್ಗೆ ದೂರು ನೀಡಲು ಸಿದ್ಧತೆ
ಕಾಂಗ್ರೆಸ್ ಸರ್ಕಾರದಡಿ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಂದೊಂದು ಲೈಸೆನ್ಸ್ ನೀಡಲೂ ಕೋಟಿಗಟ್ಟಲೆ ಲಂಚ ನೀಡಬೇಕಾಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪಾಲು ಸಿಗುತ್ತಿರುವ ಕಾರಣ ಸಿಎಂ ಅವರಿಗೆ ದೂರು ನೀಡಿದರೂ ಏನೂ ಸ್ಪಂದನೆ ನೀಡುತ್ತಿಲ್ಲ. ಈ ಕೂಡಲೇ ಸಿಎಂ ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಖ್ಯಮಂತ್ರಿಗಳ ವಿರುದ್ಧವೇ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಡಿ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಂದೊಂದು ಲೈಸೆನ್ಸ್ ನೀಡಲೂ ಕೋಟಿಗಟ್ಟಲೆ ಲಂಚ ನೀಡಬೇಕಾಗಿದೆ. ಈ ಹಗರಣದಲ್ಲಿ ಸಿಎಂ ಅವರಿಗೂ ಪಾಲು ಸಿಗುತ್ತಿರುವ ಕಾರಣ ಸಿಎಂ ಅವರಿಗೆ ದೂರು ನೀಡಿದರೂ ಏನೂ ಸ್ಪಂದನೆ ನೀಡುತ್ತಿಲ್ಲ. ಈ ಕೂಡಲೇ ಸಿಎಂ ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಖ್ಯಮಂತ್ರಿಗಳ ವಿರುದ್ಧವೇ ನಡೆಯಲಿದೆ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಿತ್ಯನಿರಂತರವಾಗಿದೆ. ಬಿಜೆಪಿ ಸರ್ಕಾರದ ಮೇಲೆ 40% ಎಂಬ ಸುಳ್ಳು ಆರೋಪ ಹೊರಿಸಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಈಗ ಕಮಿಷನ್ ದಂಧೆಯನ್ನೇ ನಿತ್ಯದ ಕಾಯಕವಾಗಿಸಿಕೊಂಡಿದೆ.
ಮದ್ಯದಂಗಡಿಗಳಲ್ಲಿ ಪರವಾನಗಿಯಿಂದ ಹಿಡಿದು ಪ್ರತಿ ಹಂತದಲ್ಲೂ ಸಚಿವರ, ಕರ್ನಾಟಕ ಕಾಂಗ್ರೆಸ್ ಶಾಸಕರ, ಅಧಿಕಾರಿಗಳ ಕೈಬಿಸಿ ಮಾಡಬೇಕು ಎಂದು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರು ಆರೋಪ ಹೊರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ, ಕಾರಣ ಅಕ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರ ಪಾಲೂ ಇದೆ. ಭ್ರಷ್ಟಾಚಾರ ಎಸಗಿದ ಸಚಿವರನ್ನು ಸಂಪುಟದಿಂದ ತೆಗೆಯಲು ಹಿಂದೆ ಮುಂದೆ ನೋಡುತ್ತಿರುವ ಮುಖ್ಯಮಂತ್ರಿಗಳು, ಅಬಕಾರಿ ಅಕ್ರಮಕ್ಕೆ ತಮ್ಮ ಸಹಮತವಿದೆ ಎಂಬುದನ್ನು ಸೂಚಿಸುತ್ತಿದ್ದಾರೆಯೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಈ ಸಂಬಂಧ ಜೆಡಿಎಸ್ ಟ್ವೀಟ್ ಮಾಡಿದ್ದು, ಅಬಕಾರಿ ಇಲಾಖೆಯ "ಮಂಥ್ಲಿ ಮನಿ ಮಿನಿಸ್ಟರ್" ಆರ್.ಬಿ. ತಿಮ್ಮಾಪುರ "ಕಮಿಷನ್" ಮತ್ತು "ಕಲೆಕ್ಷನ್" ದಂಧೆಗೆ ಮದ್ಯ ಮಾರಾಟಗಾರರು ಹೈರಾಣಾಗಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರಕ್ಕೆ ಸಿಡಿದೆದ್ದಿರುವ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರು, ರಾಹುಲ್ ಗಾಂಧಿ, ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಲು ಮುಂದಾಗಿದ್ದಾರೆ. ಮೊನ್ನೆಯಷ್ಟೇ ಬೆಂಗಳೂರು ಅಬಕಾರಿ ಡಿಸಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಬೇರೂರಿರುವ ಭ್ರಷ್ಟಾಚಾರಕ್ಕೆ ಹಿಡಿದಿರುವ ಕೈಗನ್ನಡಿ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ನಿಮಗೆ ಕಿಂಚಿತ್ತಾದರೂ ಮಾನ, ಮರ್ಯಾದೆ ಉಳಿಸಿಕೊಂಡಿದ್ದರೇ, ಮೊದಲು ಭ್ರಷ್ಟ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಅವರನ್ನು ಸಂಪುಟದಿಂದ ಕಿತ್ತೊಗೆಯಿರಿ ಎಂದು ಜೆಡಿಎಸ್ ಹೇಳಿದೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತು ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ಗುರುಸ್ವಾಮಿ ಅವರು ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿರುವ ನಡೆ,
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ನಾಚಿಕೆಗೇಡಿನ ವಿಷಯ.
ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತು ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಎಸ್.ಗುರುಸ್ವಾಮಿ ಅವರು ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿರುವ ನಡೆ, @CMofKarnataka ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ @DKShivakumar ಅವರಿಗೆ ನಾಚಿಕೆಗೇಡಿನ… pic.twitter.com/rfB7N67qCq
— Nikhil Kumar (@Nikhil_Kumar_k) January 27, 2026
ರಾಹುಲ್ ಗಾಂಧಿ ಅವರಿಗೆ ಈ ಬಗ್ಗೆ ದೂರು ನೀಡಿದರು ಕೂಡ ಮದ್ಯ ಮಾರಾಟಗಾರರಿಗೆ ಇದರಿಂದ ಯಾವುದೇ ಪ್ರಯೋಜನ ಆಗುವ ಸಾಧ್ಯತೆ ಇಲ್ಲ. ಕಾರಣ ವಸೂಲಿ ಮಾಡಲು ಆದೇಶ ಕೊಟ್ಟಿರೋದೇ ಹೈಕಮಾಂಟ್ ಆಗಿರುವುದರಿಂದ ಇನ್ನು ಅವರಿಂದ ಏನು ಪರಿಹಾರ ಸಿಗಲಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಎಲ್ಲ ರೀತಿಯಿಂದಲೂ ಲೂಟಿ ಹೊಡೆಯುತ್ತಿರುವ ಈ ಲೂಟಿಕೋರ ಕರ್ನಾಟಕ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಗುತ್ತಿಗೆದಾರರ, ಮದ್ಯ ಮಾರಾಟಗಾರರ ಸಮಸ್ಯೆ ಬಗೆಹರಿಯಲ್ಲ. ಸರ್ಕಾರಕ್ಕೆ ಕಿಂಚಿತ್ತಾದರೂ ಮಾನ, ಮರ್ಯಾದೆ ರಾಜ್ಯದ ಜನತೆಯ ಮೇಲೆ ಗೌರವವಿದ್ದರೆ ಈ ಕೂಡಲೇ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications