ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

105 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 02 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಮೊದಲ ಅಗ್ನಿ ಪರೀಕ್ಷೆ ಎದುರಾಗಿದೆ. ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ ಅವರು ಗುರುವಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದರು. ರಾಜ್ಯದ 105 ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್‌ 29ರಂದು ಚುನಾವಣೆ ನಡೆಯಲಿದೆ. ಸೆಪ್ಟೆಂಬರ್ 1ರಂದು ಫಲಿತಾಂಶ ಪ್ರಕಟವಾಗಲಿದೆ.

Karnataka local body elections 2018 calendar announced

ರಾಜ್ಯದ 29 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಶಿವಮೊಗ್ಗ, ಮೈಸೂರು, ತುಮಕೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿಲ್ಲ. ಈ ಪಾಲಿಕೆಗಳ ಚುನಾವಣೆ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಎಲ್ಲಾ ಜಿಲ್ಲೆಗಳಲ್ಲಿ ಜಾರಿಯಾಗಲಿದೆ. ಆಗಸ್ಟ್ 10ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನ, ಆಗಸ್ಟ್ 18 ರಂದು ನಾಮತ್ರಗಳ ಪರಿಶೀಲನೆ ನಡೆಯಲಿದೆ.

'ಸರ್ಕಾರ ಮೀಸಲು ಪಟ್ಟಿಯನ್ನು ಪ್ರಕಟಿಸಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ' ಎಂದು ಪಿ.ಎನ್.ಶ್ರೀನಿವಾಸಚಾರಿ ಹೇಳಿದರು.

ವೆಚ್ಚದ ವಿವರ : ನಗರಸಭೆ ಚುನಾವಣೆಗೆ 2 ಲಕ್ಷ, ಪುರಸಭೆ ಚುನಾವಣೆಗೆ 1.5 ಲಕ್ಷವನ್ನು ಅಭ್ಯರ್ಥಿ ಖರ್ಚು ಮಾಡಬಹುದಾಗಿದೆ. ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಲಾಗುತ್ತದೆ.

English summary
Election Commissioner of Karnataka Srinivasachari on August 2, 2018 announced calendar for local body election. Election will be held on August 29 and result will be announced on September 1, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X