• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಲಾಕ್ ಡೌನ್: ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ!

|

ಬೆಂಗಳೂರು, ಮಾರ್ಚ್ 24: ಮಾರಣಾಂತಿಕ ಕೊರೊನಾ ವೈರಸ್ ನ ತಡೆಗಟ್ಟಲು ಈ ಹಿಂದೆ 9 ಜಿಲ್ಲೆಗಳಿಗೆ ಮಾತ್ರ ಅನ್ವಯಿಸಲಾಗಿದ್ದ ನಿರ್ಬಂಧವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯವನ್ನು ಲಾಕ್ ಡೌನ್ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಆದೇಶದ ಅನ್ವಯ ಮಾರ್ಚ್ 24 ರಿಂದ ಮಾರ್ಚ್ 31 ರವರೆಗೂ ಕರ್ನಾಟಕ ಸ್ತಬ್ಧವಾಗಿರುತ್ತದೆ. ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ, ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ಕೂಡ ರವಾನೆ ಆಗಿದೆ.

ಕೊರೊನಾ ಭೀತಿ; ಇಡೀ ಕರ್ನಾಟಕ ಲಾಕ್‌ಡೌನ್ ಮಾಡಲು ಸಿಎಂ ಆದೇಶ

ಇಡೀ ಕರ್ನಾಟಕ ಲಾಕ್ ಡೌನ್ ಆಗುವುದರಿಂದ ದಿನಸಿ, ತರಕಾರಿ, ಹಣ್ಣು ಸಿಗುವುದಿಲ್ಲ ಎಂದು ಅವುಗಳನ್ನ ಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಆದ್ರೆ, ''ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಆಹಾರ ಮತ್ತು ದಿನಸಿ ಅಂಗಡಿಗಳು ಎಂದಿನಂತೆ ತೆರೆದಿರುತ್ತದೆ. ನಿಮ್ಮೆಲ್ಲರ ಸಹಕಾರ ಅಗತ್ಯ'' ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿಯೂ ಆಹಾರ ಮತ್ತು ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ಪ್ಯಾನಿಕ್ ಆಗದೆ ಮನೆಯಲ್ಲಿರಿ, ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯದ ಕಡೆ ಗಮನ ಕೊಡಿ.

English summary
Karnataka Lock Down: There is no need for bulk buying. Food supply and grocery shops will be open for all as usual tweets BS Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X