Get Updates
Get notified of breaking news, exclusive insights, and must-see stories!

Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು ಮಾರ್ಚ್ 29: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಸಮರ ಶುರುವಾಗಿದೆ. ಅಧಿಸೂಚನೆ ಪ್ರಕಟಗೊಂಡ ಮೊದಲನೇ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೇರಿದಂತೆ 25 ಅಭ್ಯರ್ಥಿಗಳು 29 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

Karnataka Lok Sabha Election 2024 List of candidates who filed nomination papers on the first day

ಈ ಪೈಕಿ 23 ಪುರುಷರು, ಇಬ್ಬರು ಮಹಿಳೆಯರು ಸೇರಿ 25 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್ 2, ಬಿಜೆಪಿ 1, ಜೆಡಿಎಸ್ ಮತ್ತು ಬಿಎಸ್‌ಪಿ ತಲಾ 1, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳ 16, ಪಕ್ಷೇತರರ 8 ನಾಮಪತ್ರಗಳು ಸಲ್ಲಿಕೆಯಾಗಿವೆ.

ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಒಟ್ಟು 5 ಅಭ್ಯರ್ಥಿಗಳಿಂದ ಆರು ಉಮೇದುವಾರಿಕೆ ಸಲ್ಲಿಕೆಯಾಗಿವೆ. ನಾಲ್ವರು ಪುರುಷರು, ಒಬ್ಬರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳಿಂದ ನಾಲ್ಕು, ಪಕ್ಷೇತ್ರರರಿಂದ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.

Karnataka Lok Sabha Election 2024 List of candidates who filed nomination papers on the first day

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳು ಮೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳು ಎರಡು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.

ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ ಒಂದು ಮತ್ತು ಪಕ್ಷೇತರರಿಂದ ಒಂದು ಉಮೇದುವಾರಿಕೆ ಸಲ್ಲಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯಿಂದ ಎರಡು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಕಾಂಗ್ರೆಸ್‌ನಿಂದ ಎರಡು ಉಮೇದುವಾರಿಕೆ ಸಲ್ಲಿಕೆಯಾಗಿದೆ.

Karnataka Lok Sabha Election 2024 List of candidates who filed nomination papers on the first day

ಚಾಮರಾಜನಗರ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿಯಿಂದ ಒಂದು ನಾಮಪತ್ರ ಸಲ್ಲಿಕೆಯಾಗಿದ್ದು, ಅದು ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ ಸಲ್ಲಿಕೆಯಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಿಂದ ಒಂದು ಉಮೇದುವಾರಿಕೆ ಸಲ್ಲಿಸಲಾಗಿದೆ. ಚಿತ್ರದುರ್ಗ ಕ್ಷೇತ್ರದಲ್ಲಿ ಯಾವುದೇ ಉಮೇದುವಾರಿಕೆ ಸಲ್ಲಿಕೆಯಾಗಿಲ್ಲ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳಿಂದ ಎರಡು ನಾಮಪತ್ರ ಸಲ್ಲಿಕೆಯಾಗಿವೆ. ಬಿಜೆಪಿ ಮತ್ತು ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ ತಲಾ ಒಂದೊಂದು ಉಮೇದುವಾರಿಕೆ ಸಲ್ಲಿಕೆಯಾಗಿದೆ. ಹಾಸನ ಕ್ಷೇತ್ರದಲ್ಲಿ ಮೂವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಜೆಡಿಎಸ್, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿಯಿಂದ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ.

ಕೋಲಾರ ಕ್ಷೇತ್ರದಲ್ಲಿ ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದಿಂದ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಇಬ್ಬರು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದು, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷ ಮತ್ತು ಪಕ್ಷೇತರರಿಂದ ತಲಾ ಒಂದೊಂದು ಉಮೇದುವಾರಿಕೆ ಸಲ್ಲಿಸಲಾಗಿದೆ.

ಮೈಸೂರು ಕ್ಷೇತ್ರದಲ್ಲಿ ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷದ ಇಬ್ಬರು ಅಭ್ಯರ್ಥಿಗಳು ಮೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಇಬ್ಬರು ಪಕ್ಷೇತರರಿಂದ ಎರಡು ಉಮೇದುವಾರಿಕೆ ಸಲ್ಲಿಕೆ ಮಾಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಎಸ್‌ಪಿಯಿಂದ ಒಂದು ನಾಮಪತ್ರ ಸಲ್ಲಿಸಲಾಗಿದೆ.

ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಜರುಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+