ಕರ್ನಾಟಕ ಲೋಕಸಭಾ ಚುನಾವಣೆ ವೇಳಾಪಟ್ಟಿ: ಯಾವಾಗ ಮತದಾನ? ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು, ಮಾರ್ಚ್‌ 16: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದೆ. ಇಂದು (ಶನಿವಾರ) ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದೇಶಾದ್ಯಂತ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು ಹಂತದಲ್ಲಿ ನಡೆಯಲಿದೆ. ಇಂದಿನಿಂದಲೇ ( ಶನಿವಾರ) ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

Karnataka Lok Sabha Election 2024 Schedule Polling Date Phases and Results Date ECI Announcement

ಈ ಕುರಿತು ಭಾರತೀಯ ಚುನಾವಣೆ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಮಹತ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ಏಪ್ರಿಲ್ 19 ಮೊದಲ ಹಂತ, ಏಪ್ರಿಲ್ 26 2ನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13 ನಾಲ್ಕನೇ ಹಂತ, ಮೇ 20ರಂದು 5ನೇ ಹಂತ, ಮೇ 25ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ

ಇನ್ನೂ ಕರ್ನಾಟಕದಲ್ಲಿಮೊದಲ ಹಂತದ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್‌ 4 ರಂದು ಫಲಿತಾಂಶ ಬರಲಿದೆ.

14 ಜಿಲ್ಲೆಗಳಲ್ಲಿ ಮೊದಲ ಹಂತದ ಚುನಾವಣೆ

ಮೊದಲ ರಾಜ್ಯದಲ್ಲಿ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್‌ 28 ರಂದು ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 04 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 05 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 08 ಕೊನೆಯ ದಿನವಾಗಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26 ರಂದು ನಡೆಯಲಿದೆ.

ಮೊದಲ ಹಂತದಲ್ಲಿ ಮತದಾನ ಉಡುಪಿ - ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಜಿಲ್ಲೆಯಲ್ಲಿ ಚುನಾವಣೆ ನಡೆಯಲಿದೆ.

14 ಜಿಲ್ಲೆಗಳಲ್ಲಿ ಎರಡನೇ ಹಂತದ ಚುನಾವಣೆ

ಇನ್ನು, ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಏಪ್ರಿಲ್‌ 12 ರಂದು ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 20 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 22 ಕೊನೆಯ ದಿನವಾಗಿರುತ್ತದೆ. ಎರಡನೇ ಹಂತದ ಮತದಾನ ಮೇ 07 ರಂದು ನಡೆಯಲಿದೆ.

ಎರಡನೇ ಹಂತದ ಮತದಾನ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+