ಮೇ 7ರಂದು ಯಾವ ಯಾವ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ ಗೊತ್ತೇ?
ನವದೆಹಲಿ, ಮಾರ್ಚ್ 16: ಲೋಕಸಭಾ ಚುನಾವಣಾ ಕಾವು ಹೆಚ್ಚಾಗಿದ್ದು, ಇದೀಗ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಇಂದು( ಶನಿವಾರ) ಪ್ರಕಟಿಸಿದ್ದಾರೆ.
ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಚುನಾವಣಾ ದಿನಾಂಕ ಪ್ರಕಟವಾದ ದಿನವೇ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪ್ರಚಾರ ಕಹಳೆ ಮೊಳಗಿಸಿದ್ದಾರೆ.

ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಮೇ 7ರಂದು ಯಾವ ಯಾವ ಜಿಲ್ಲೆಗಳಲ್ಲಿ ಚುನಾವಣೆ!
* ಚಿಕ್ಕೋಡಿ
* ಬೆಳಗಾವಿ
* ಬಾಗಲಕೋಟೆ
* ಬಿಜಾಪುರ (ಎಸ್‌ಸಿ)
* ಗುಲ್ಬರ್ಗಾ (ಎಸ್‌ಸಿ)
* ರಾಯಚೂರು (ಎಸ್‌ಟಿ)
* ಬೀದರ್
* ಕೊಪ್ಪಳ
* ಬಳ್ಳಾರಿ (ಎಸ್‌ಟಿ)
* ಹಾವೇರಿ
* ಧಾರವಾಡ
* ಉತ್ತರ ಕನ್ನಡ
* ದಾವಣಗೆರೆ
* ಶಿವಮೊಗ್ಗ
ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿತ್ತು. 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ ಇತ್ತ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಇನ್ನೂ ಜೆಡಿಎಸ್ ಒಂದು ಸ್ಥಾನ ಗೆಲುವು ಕಂಡಿದ್ರೆ, ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನ ಗಳಿಸಿದ್ದರು.












Click it and Unblock the Notifications