ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ
ಬೆಂಗಳೂರು, ಡಿಸೆಂಬರ್ 29 : ಮಂಗಳವಾರ ಮುಂಜಾನೆ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಚಳಿ ಬಿಡಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಜನಾರ್ದನ ರೆಡ್ಡಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರು, ರಾಯಚೂರು, ಕೋಲಾರ, ಕಲಬುರಗಿ ಮತ್ತು ಬೀದರ್‌ನಲ್ಲಿ ಮಂಗಳವಾರ ಮುಂಜಾನೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ದಾಳಿ ನಡೆಸಲಾಗಿದೆ. [ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ]

ಕೋಲಾರದಲ್ಲಿ ಜಿಲ್ಲಾ ಪಂಚಾಯತ್ ಜ್ಯೂನಿಯರ್ ಇಂಜಿನಿಯರ್ ಬಿ.ಕೆ.ಪ್ರಸನ್ನ ಕುಮಾರ್ ಅವರ ಮನೆ ಮೇಲೆ ದಾಳಿ ನಡೆದಿದೆ. ಕಲಬುರಗಿಯಲ್ಲಿ ಕೂಡಾ ಅಧ್ಯಕ್ಷರ ಆಪ್ತ ಸಹಾಯಕ ಸುಬ್ಬರಾವ್ ಸುಬೇದಾರ್ ನಿವಾಸದ ಮೇಲೆ ದಾಳಿ ನಡೆದಿದೆ. [ಕರ್ನಾಟಕ ಲೋಕಾಯುಕ್ತ ಹಗರಣ Timeline]
ಬೀದರ್‌ನಲ್ಲಿ ಕುಡಿಯುವ ನೀರು, ಗ್ರಾಮೀಣ ನೈರ್ಮಲ್ಯ ಇಲಾಖೆಯ ಎಇಇ ರಾಜಶೇಖರ್ ಮನೆಯ ಮೇಲೆ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.....












Click it and Unblock the Notifications