Lokayukta: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

ಬೆಂಗಳೂರು, ಜುಲೈ 11: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇಂದು ಬೆಳಗ್ಗೆ ಏಕಕಾಲದಲ್ಲಿ ರಾಜ್ಯಾದ್ಯಂತ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, 100ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಒಟ್ಟು 56 ಕಡೆಗಳಲ್ಲಿ ವಿವಿಧ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.

Karnataka Lokayukta Raids At More Than 9 Districts Across The State

ಜೆಡಿಎಸ್ ಮುಖಂಡ ಎಂ.ರವೀಂದ್ರಪ್ಪ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಚಿತ್ರದುರ್ಗ: ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗ, ಮಂಡ್ಯ, ಮೈಸೂರು, ಕಲಬುರಗಿ, ಧಾರವಾಡ, ಬೆಳಗಾವಿ, ದಾವಣಗೆರೆ, ಕೋಲಾರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.

ಈ ಪೈಕಿ ಚಿತ್ರದುರ್ಗದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ. ರವೀಂದ್ರಪ್ಪ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳಗಿನ ಜಾವ 6ಗಂಟೆಗೆ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮುಂಗಸವಳ್ಳಿ ತೋಟದ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ನಿವೃತ್ತ ಮುಖ್ಯ ಇಂಜಿನಿಯರ್ ಆಗಿ ನಿವೃತ್ತಿ ಹೊಂದಿದ್ದ ರವೀಂದ್ರಪ್ಪ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ವಿಧಾನಸಭೆ ಚುನಾವಣೆಯ ಮತದಾನಕ್ಕೂ ಮುನ್ನ ಎಂ. ರವೀಂದ್ರಪ್ಪ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಮತ್ತೆ ಲೋಕಾಯುಕ್ತ ದಾಳಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಭರ್ಜರಿ ಮತಯಾಚನೆ ಮಾಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸೋಲಿಗೆ ಎದೆಗುಂದದೆ ಹಿರಿಯೂರು ತಾಲೂಕಿನಲ್ಲಿ ವಿವಿಧ ಕಾಮಗಾರಿಗಳಲ್ಲಿ ಭಾಗಿಯಾಗಿ, ಬಡವರಿಗೆ, ರೈತರ ಹೋರಾಟಕ್ಕೆ ಸ್ಪಂದಿಸುತ್ತಿದ್ದರು. ನಿನ್ನೆ ಬುಧವಾರವಾಷ್ಟೇ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಜಲಾಶಯ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ಹರಿಸುವಂತೆ ಸಂಸದ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+