ಲೋಕಾಯುಕ್ತ ಪದಚ್ಯುತಿಗೆ ಸೆಪ್ಟೆಂಬರ್ನಲ್ಲಿ ವಿಶೇಷ ಅಧಿವೇಶನ
ಬೆಂಗಳೂರು, ಆಗಸ್ಟ್ 18 : ಕರ್ನಾಟಕದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ -2015ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸೆಪ್ಟೆಂಬರ್ನಲ್ಲಿ ವಿಶೇಷ ವಿಧಾನ ಮಂಡಲ ಅಧಿವೇಶನ ನಡೆಸಿ, ಲೋಕಾಯುಕ್ತರನ್ನು ಪದಚ್ಯತಿಗೊಳಿಸುವ ನಿರ್ಣಯವನ್ನು ಮಂಡಿಸುವ ಸಾಧ್ಯತೆ ಇದೆ.
ಲೋಕಾಯಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದ ನಂತರ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರರಾವ್ ಅವರ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಪ್ರತಿಪಕ್ಷಗಳು ಲೋಕಾಯುಕ್ತರು ರಾಜೀನಾಮೆ ನೀಡಬೇಕು ಎಂದು ಪಟ್ಟುಹಿಡಿದಿವೆ. [ಲೋಕಾಯುಕ್ತರ ಪದಚ್ಯುತಿ ಹೇಗೆ?]

ರಾಜ್ಯ ಸರ್ಕಾರ ಲೋಕಾಯುಕ್ತ ಪದಚ್ಯುತಿಗೆ ಅನುಕೂಲವಾಗುವಂತೆ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ -2015ವನ್ನು ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಮಂಡಿಸಿತ್ತು. ಉಭಯ ಸದನಗಳಲ್ಲಿ ಅಂಗೀಕಾರವಾದ ಈ ನಿರ್ಣಯಕ್ಕೆ ಸೋಮವಾರ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ. [ಲೋಕಾಯುಕ್ತರ ಪದಚ್ಯುತಿ, ಕಾನೂನು ಇಲಾಖೆ ಹೇಳುವುದೇನು?]
ಚುನಾವಣೆ ನಂತರ ವಿಶೇಷ ಅಧಿವೇಶನ : ಆ.22ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಆ.25ರ ಮಂಗಳವಾರ ಫಲಿತಾಂಶ ಪ್ರಕಟಗೊಳ್ಳಲಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ವಿಶೇಷ ವಿಧಾನಸಭೆ ಅಧಿವೇಶನ ನಡೆಸಿ ಲೋಕಾಯುಕ್ತರನ್ನು ಪದ್ಯುತಿಗೊಳಿಸುವ ನಿರ್ಣಯವನ್ನು ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ವಿಧೇಯಕದ ಅನ್ವಯ ವಿಧಾನಮಂಡಲದ ಉಭಯ ಸದನಗಳ ಮೂರನೇ ಎರಡರಷ್ಟು ಸದಸ್ಯರ ಅನುಮೋದನೆಯೊಂದಿಗೆ ಲೋಕಾಯುಕ್ತರನ್ನು ಪದಚ್ಯುತಿಗೊಳಿಸಬಹುದಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಲೋಕಾಯುಕ್ತರ ಪದಚ್ಯುತಿಗೆ ಒತ್ತಾಯಿಸುತ್ತಿದ್ದು, ನಿರ್ಣಯ ಮಂಡಿಸಿದರೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.











Click it and Unblock the Notifications