• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಚ್ಡಿಕೆ ವಿಶ್ವಾಸಮತ ಯಾಚನೆಗೂ ಮುನ್ನ ವಿಧಾನಸಭೆ ಸಂಖ್ಯಾಬಲವೇನು?

|

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಶಾಸಕರ ಸರಣಿ ರಾಜೀನಾಮೆ, ಮನ ಓಲೈಕೆ, ಸಂಧಾನ ವಿಫಲಗಳ ನಡುವೆ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನ ಆರಂಭವಾಗಿದೆ.

'ಎಚ್ ಡಿ ಕುಮಾರಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ' ಎಂದು ಬಿಜೆಪಿ ದನಿಯೆತ್ತಿದೆ. ಇದಕ್ಕೆ ಪ್ರತಿಯಾಗಿ, 'ವಿಶ್ವಾಸಮತಯಾಚನೆಗೆ ಸಿದ್ಧ, ಸಮಯ ನಿಗದಿ ಪಡಿಸಿ' ಎಂದು ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಅವರ ಬಳಿ ಮನವಿ ಮಾಡಿದ್ದು, ಗುರುವಾರ (ಜುಲೈ 18)ದಂದು ಸರ್ಕಾರದ ಅಳಿವು, ಉಳಿವಿನ ಪ್ರಶ್ನೆಗೆ ಉತ್ತರ ಸಿಗಲಿದೆ.

ಸ್ಪೀಕರ್ ರಮೇಶ್ ಮುಂದಿರುವ 7 ಆಯ್ಕೆಗಳು

ಈ ನಡುವೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ವಿಪ್ ಜಾರಿಯಾಗಿದೆ. ವಿತ್ತೀಯ ವಿಧೇಯಕಗಳು, ವಿಧೇಯಕಗಳು, ಶಾಸನಗಳು ಹಾಗೂ ಇತರೆ ಕಾರ್ಯ ಕಲಾಪಗಳಲ್ಲಿ ಭಾಗವಹಿಸಿ ಸರ್ಕಾರದ ಪರ ಕಡ್ಡಾಯವಾಗಿ ಮತ ಚಲಾಯಿಸುವಂತೆ ಈ ಮೂಲಕ ವಿಪ್ ನೀಡಲಾಗಿದೆ.

ವಿಪ್ ಜಾರಿಗೊಳಿಸಿದ ವೇಳೆ ಪಕ್ಷದ ಆದೇಶಕ್ಕೆ ವಿರುದ್ಧವಾಗಿ ಮತ ಹಾಕುವಂತಿಲ್ಲ. ಸದನಕ್ಕೆ ಗೈರು ಹಾಜರಾಗುವಂತಿಲ್ಲ. ಆದ್ದರಿಂದ, ರಾಜೀನಾಮೆ ನೀಡಿರುವ ಶಾಸಕರು ಇಕ್ಕಟ್ಟಿಗೆ ಸಿಲುಕಲಿದ್ದಾರೆ.

ರಮೇಶ್ ಕುಮಾರ್: ಬಿಕ್ಕಟ್ಟುಗಳು ಬಂದಾಗೆಲ್ಲಾ ಭಾವನೆಗಳೇ ಅಸ್ತ್ರ!

ರಾಜೀನಾಮೆ ಅಂಗೀಕರಿಸುವುದು ಬಿಡುವುದು, ಯಾವಾಗ ಅಂಗೀಕರಿಸಬೇಕು ಎಂಬುದು ಸ್ಪೀಕರ್ ಆಯ್ಕೆಗೆ ಬಿಟ್ಟಿದ್ದು, ಇದನ್ನು ಶಾಸಕರು ಪ್ರಶ್ನಿಸುವಂತಿಲ್ಲ. ಸುಪ್ರೀಂಕೋರ್ಟ್ ಕೂಡಾ ಸ್ಪೀಕರ್ ಅವರ ಮೇಲೆ ಒತ್ತಡ ಹೇರಲಾಗುವುದಿಲ್ಲ. ಈ ನಡುವೆ ಸದನದಲ್ಲಿ ಸದಸ್ಯರ ಬಲಾಬಲ ಬಗ್ಗೆ ಚಿತ್ರಣ ಇಲ್ಲಿದೆ...

ಸುಪ್ರೀಂಕೋರ್ಟಿನಲ್ಲಿ ಜುಲೈ 16ರಂದು ವಿಚಾರಣೆ

ಸುಪ್ರೀಂಕೋರ್ಟಿನಲ್ಲಿ ಜುಲೈ 16ರಂದು ವಿಚಾರಣೆ

ಶಾಸಕರ ರಾಜೀನಾಮೆ ಅಂಗೀಕಾರ, ಅನರ್ಹತೆಗೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟಿನ ಸಿಜೆಐ ಇದ್ದ ತ್ರಿಸದಸ್ಯ ನ್ಯಾಯಪೀಠವು ಯಥಾಸ್ಥಿತಿ ಕಾಪಾಡಿಕೊಳ್ಳಲು ಆದೇಶ ನೀಡಿದೆ. ಅನರ್ಹತೆ ಅರ್ಜಿಗಳ ವಿಚಾರಣೆಯನ್ನು ಸದ್ಯಕ್ಕೆ ಮಾಡುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಕರ್ನಾಟಕದ 16 ಮಂದಿ ಕಾಂಗ್ರೆಸ್‌ ಮತ್ತು ಜೆಡಿಎಸ್ ಅತೃಪ್ತ ಶಾಸಕರು ಸಲ್ಲಿಸಿದ ಅರ್ಜಿಯ ವಿಚಾರಣೆ ಇನ್ನೂ ಬಾಕಿಯಿರುವುದರಿಂದ ರಾಜಕೀಯ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಸದ್ಯಕ್ಕೆ ಸಾಧ್ಯವಿಲ್ಲ ಎನ್ನಬಹುದು.

ಈ ನಡುವೆ ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮುಂದಾಗಿದ್ದು, ಮಂಗಳವಾರ(ಜುಲೈ 16)ದಂದು ವಿಚಾರಣೆ ಬಳಿಕ ಕೋರ್ಟ್ ನೀಡುವ ಆದೇಶ ಮಹತ್ವ ಪಡೆಯಲಿದೆ.

ಗುರುವಾರ ಸಿಎಂ ವಿಶ್ವಾಸಮತ ಯಾಚನೆ: ಸರ್ಕಾರದ ಭವಿಷ್ಯ ಅಂದೇ ನಿರ್ಧಾರ

ಸಮಯ ನಿಗದಿಪಡಿಸಲು ಕೋರಿದ್ದ ಕುಮಾರಸ್ವಾಮಿ

ಸಮಯ ನಿಗದಿಪಡಿಸಲು ಕೋರಿದ್ದ ಕುಮಾರಸ್ವಾಮಿ

"ರಾಜ್ಯದಲ್ಲಿ ಕೆಲವು ಶಾಸಕರು ರಾಜೀನಾಮೆ ನೀಡುವ ಮೂಲಕ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ, ಈ ಸ್ಥಾನವನ್ನು ದುರುಪಯೋಗ ಪಡಿಸಿಕೊಳ್ಳಲು ನನಗಿಷ್ಟವಿಲ್ಲ. ಸದನದ ಬೆಂಬಲ ಇದ್ದಾಗ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯ. ನಾನು ಸ್ವಪ್ರೇರಣೆಯಿಂದ ಬಹುಮತ ಸಾಬೀತುಪಡಿಸಲು ಮುಂದಾಗಿದ್ದೇನೆ. ಹೀಗಾಗಿ, ಸಮಯವನ್ನು ನಿಗದಿಪಡಿಸುವಂತೆ ಕೋರಿದ್ದೇನೆ" ಎಂದು ಕುಮಾರಸ್ವಾಮಿ ಅವರು ಅಧಿವೇಶನದ ಮೊದಲ ದಿನದಂದು ಮನವಿ ಮಾಡಿದ್ದರು, ಅದರಂತೆ, ಗುರುವಾರ(ಜುಲೈ 18) ಬಹುಮತ ಸಾಬೀತುಪಡಿಸಲು ಸಮಯ ನೀಡಲಾಗಿದೆ.

ಎಚ್ಡಿಕೆ ತನ್ನ ಹೆಸರು ಉಳಿಸಿಕೊಳ್ಳಲು ರೇವಣ್ಣನ ಹೆಸರು ಹಾಳು ಮಾಡುತ್ತಿದ್ದಾರೆ: ಚೆಲುವರಾಯಸ್ವಾಮಿ

ರೆಬೆಲ್ ಶಾಸಕರಿಗೂ ವಿಪ್ ಜಾರಿಗೊಳಿಸಲಾಗಿದೆ

ರೆಬೆಲ್ ಶಾಸಕರಿಗೂ ವಿಪ್ ಜಾರಿಗೊಳಿಸಲಾಗಿದೆ

ರಾಜೀನಾಮೆಗಳು ಅಂಗೀಕಾರವಾಗಿಲ್ಲದ ಕಾರಣ ಕಾಂಗ್ರೆಸ್ -ಜೆಡಿಎಸ್ ಪಕ್ಷಗಳು ತಮ್ಮ ರೆಬೆಲ್ ಶಾಸಕರಿಗೆ ವಿಪ್ ಜಾರಿಗೊಳಿಸಿ ಸದನಕ್ಕೆ ಹಾಜರಾಗಿ, ಇಲ್ಲದಿದ್ದರೆ ಅರ್ನಹತೆ ಎದುರಿಸಿ ಎಂದು ಸೂಚಿಸಿವೆ. ಇದಲ್ಲದೆ, ಜೆಡಿಎಸ್ ಪರವಾಗಿ ವಕೀಲ ರಂಗನಾಥ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಕಾಂಗ್ರೆಸ್‌ ಸಹ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಿದೆ. ಆದರೆ, ಯಾವುದೇ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಸ್ಪೀಕರ್ ಇನ್ನೂ ಯಾವುದೇ ತೀರ್ಮಾನಗಳನ್ನು ಕೈಗೊಂಡಿಲ್ಲ. ಮಂಗಳವಾರದ ತನಕ ತೀರ್ಮಾನ ಕೈಗೊಳ್ಳುವ ಸಾಧ್ಯತೆಯೂ ಇಲ್ಲ

ಕರ್ನಾಟಕದ ಹೈಡ್ರಾಮಕ್ಕೆ ಒಂದು ವಾರ : ಯಾರು, ಏನು ಹೇಳಿದರು?

ಶಾಸಕರಿಗೆ ಅನರ್ಹತೆಯ ಭೀತಿ

ಶಾಸಕರಿಗೆ ಅನರ್ಹತೆಯ ಭೀತಿ

ಈ ನಡುವೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ವಿಪ್ ಜಾರಿಯಾಗಿದೆ. ವಿತ್ತೀಯ ವಿಧೇಯಕಗಳು, ವಿಧೇಯಕಗಳು, ಶಾಸನಗಳು ಹಾಗೂ ಇತರೆ ಕಾರ್ಯ ಕಲಾಪಗಳಲ್ಲಿ ಭಾಗವಹಿಸಿ ಸರ್ಕಾರದ ಪರ ಕಡ್ಡಾಯವಾಗಿ ಮತ ಚಲಾಯಿಸುವಂತೆ ಈ ಮೂಲಕ ವಿಪ್ ನೀಡಲಾಗಿದೆ.

ಒಂದು ವೇಳೆ ವಿಪ್ ಉಲ್ಲಂಘಿಸಿದ್ದಕ್ಕೆ ರೆಬೆಲ್ ಶಾಸಕರನ್ನು ಅನರ್ಹಗೊಳಿಸಿದರೆ, ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕಷ್ಟವಾಗಲಿದೆ. ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಅಗತ್ಯ ಸಂಖ್ಯಾಬಲ ಸಿಗುವುದಿಲ್ಲ, ಅನಿವಾರ್ಯವಾಗಿ ಅನರ್ಹಗೊಂಡ ಶಾಸಕರು, ಅನರ್ಹತೆ ಆದೇಶವನ್ನು ಪ್ರಶ್ನಿಸಿ ಮತ್ತೊಮ್ಮೆ ಕೋರ್ಟ್ ಮೆಟ್ಟಿಲೇರಬಹುದು. ಕೋರ್ಟ್ ಮೂಲಕ ಪರಿಹಾರ ಕಂಡುಕೊಳ್ಳುವ ತನಕ 6 ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಮಂತ್ರಿಗಿರಿಯೂ ಸಿಗುವುದಿಲ್ಲ.

13 ಶಾಸಕರ ರಾಜೀನಾಮೆಗೂ ಮುನ್ನ(ಜುಲೈ 05)

13 ಶಾಸಕರ ರಾಜೀನಾಮೆಗೂ ಮುನ್ನ(ಜುಲೈ 05)

13 ಶಾಸಕರ ರಾಜೀನಾಮೆಗೂ ಮುನ್ನ(ಜುಲೈ 05)

ಒಟ್ಟು ಸದಸ್ಯ ಬಲ : 224+1 (ನಾಮಾಂಕಿತ ಸದಸ್ಯರು)

ಕಾಂಗ್ರೆಸ್ + ಜೆಡಿಎಸ್ : 117

ಮ್ಯಾಜಿಕ್ ನಂಬರ್ : 113

ಬಿಜೆಪಿ : 105

ಬಿಎಸ್ ಪಿ: 1

ಕಾಂಗ್ರೆಸ್ : 79

ಜೆಡಿಎಸ್ : 37

ಪಕ್ಷೇತರ : 2

ಶಾಸಕರ ಜೊತೆ ಮಹತ್ವದ ಸಭೆ ನಡೆಸಿದ ಸಿದ್ದರಾಮಯ್ಯ

ಜುಲೈ 15ರಂದು ವಿಧಾನಸಭೆ ಬಲಾಬಲ

ಜುಲೈ 15ರಂದು ವಿಧಾನಸಭೆ ಬಲಾಬಲ

ಜುಲೈ 15ರಂದು ವಿಧಾನಸಭೆ ಬಲಾಬಲ(16 ಶಾಸಕರ ರಾಜೀನಾಮೆ ಅಂಗೀಕಾರವಾದರೆ)

ಒಟ್ಟು ಸದಸ್ಯ ಬಲ : 208

ಕಾಂಗ್ರೆಸ್ + ಜೆಡಿಎಸ್ : 101

ಮ್ಯಾಜಿಕ್ ನಂಬರ್ : 105

ಬಿಜೆಪಿ : 105+2 (ಪಕ್ಷೇತರ)=107

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ 16 ಮಂದಿ ಶಾಸಕರು ರಾಜೀನಾಮೆ ನೀಡಿದ್ದು, ಎಲ್ಲರ ರಾಜೀನಾಮೆ ಅಂಗೀಕಾರವಾದರೆ, ವಿಧಾನಸಭೆಯಲ್ಲಿ 224 ಸದಸ್ಯರ ಸಂಖ್ಯಾಬಲ 209ಕ್ಕೆ ಕುಸಿಯಲಿದೆ. ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್- ಜೆಡಿಎಸ್ಸಿಗೆ ಕನಿಷ್ಠ 101 ಶಾಸಕರ ಬೆಂಬಲ ಬೇಕಾಗುತ್ತದೆ.

ಇನ್ನೊಂದೆಡೆ, 105 ಸದಸ್ಯ ಬಲ ಹೊಂದಿರುವ ಬಿಜೆಪಿಗೆ ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಸಿಗುವ ಸಾಧ್ಯತೆಯಿದೆ. ವಿಶ್ವಾಸ ಮತಯಾಚನೆಯಲ್ಲಿ ಸರ್ಕಾರದ ವಿರುದ್ಧ ಮತಗಳು ಅಧಿಕವಾಗಿ ಬೀಳುವ ನಿರೀಕ್ಷೆಯನ್ನು ಕೇಸರಿ ಪಡೆ ಹೊಂದಿದೆ.

English summary
The suspense has finally ended and the H D Kumaraswamy government would face a trust vote on Thursday at 11 am. The government faces a trust vote after 16 MLAs resigned. If the 16 resignations are accepted, then the strength of the house comes down to 209. In this case, the Congress and JD(S) would need the backing of 105 MLAs to remain in power
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more