ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಬಸ್ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೋಸ್ಟರ್‌ಗೆ ಕಪ್ಪು ಮಸಿ

|
Google Oneindia Kannada News

ಬೆಂಗಳೂರು, ನ.27: ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದ ಕಿಡಿ ಹೊತ್ತಿದ್ದು ಮಹಾರಾಷ್ಟ್ರದ ರಾಜಧಾನಿ ಮುಂಬೈನ ಮಾಹಿಮ್ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪೋಸ್ಟರ್‌ಗೆ ಕಪ್ಪು ಮಸಿ ಬಳಿದಿರುವುದು ಕಂಡುಬಂದಿದೆ.

ರಾಜ್ಯದ ಪ್ರವಾಸೋದ್ಯಮದ ಜಾಹೀರಾತು ಇದ್ದ ಪೋಸ್ಟರ್‌ನಲ್ಲಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಿತ್ರಕ್ಕೆ ಕಪ್ಪು ಬಣ್ಣ ಬಳಿಯಲಾಗಿದೆ. ಜೊತೆಗೆ ಸಚಿವ ಆನಂದ್ ಸಿಂಗ್ ಭಾವಚಿತ್ರಕ್ಕೂ ಮಸಿ ಬಳಿಯಲಾಗಿದೆ.

Breaking; ಮಹಾರಾಷ್ಟ್ರದಿಂದ ಬೆಳಗಾವಿಗೆ ಬಸ್ ಸಂಚಾರ ಸ್ಥಗಿತBreaking; ಮಹಾರಾಷ್ಟ್ರದಿಂದ ಬೆಳಗಾವಿಗೆ ಬಸ್ ಸಂಚಾರ ಸ್ಥಗಿತ

ಶುಕ್ರವಾರ ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್‌ಗಳ ಮೇಲೆ ಮರಾಠಾ ಪರ ಸಂಘಟನೆಯ ಕಾರ್ಯಕರ್ತರ ಗುಂಪು ಮಹಾರಾಷ್ಟ್ರ ಪರ ಘೋಷಣೆಗಳನ್ನು ಬರೆದಿದ್ದರು. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

Karnataka-Maharashtra border row: black ink smeared on Bommais poster

ಈ ಘಟನೆಗಳನ್ನು ಖಂಡಿಸಿದ್ದ ಬಸವರಾಜ ಬೊಮ್ಮಾಯಿ, ಇಂತಹ ಕೃತ್ಯಗಳನ್ನು ನಿಲ್ಲಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿದ್ದರು. ಇಂತಹ ಘಟನೆಗಳು ರಾಜ್ಯಗಳ ನಡುವೆ ಒಡಕು ಮೂಡಿಸುತ್ತವೆ. ಆದ್ದರಿಂದ ಮಹಾರಾಷ್ಟ್ರವು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದಿದ್ದರು.

"ನಮ್ಮ ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಹಕ್ಕುಗಳಿವೆ. ಈ ರಾಜ್ಯಗಳನ್ನು ರಾಜ್ಯ ಮರುಸಂಘಟನೆ ಕಾಯಿದೆಯಡಿ ರಚಿಸಲಾಗಿದೆ. ಕಾನೂನು ಸ್ಪಷ್ಟವಾಗಿದ್ದು, ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮತ್ತು ರಾಜ್ಯಗಳ ನಡುವೆ ಶಾಂತಿ ಮತ್ತು ನೆಮ್ಮದಿ ಇರುವಂತೆ ನೋಡಿಕೊಳ್ಳುವುದು ಆಯಾ ಸರ್ಕಾರದ ಕರ್ತವ್ಯವಾಗಿದೆ" ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದರು.

ಎರಡು ರಾಜ್ಯಗಳ ನಡುವೆ ದಶಕಗಳಷ್ಟು ಹಳೆಯದಾದ ಗಡಿ ವಿವಾದ ಮತ್ತೆ ಭುಗಿಲೆದ್ದಿದ್ದು, ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಪ್ರಕರಣದ ವಿಚಾರಣೆಯನ್ನು ನಿರೀಕ್ಷಿಸುವ ನಿರೀಕ್ಷೆಯಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿರುವ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮಗಳು ನೀರಿನ ಸಮಸ್ಯೆ ಎದುರಿಸುತ್ತಿರುವ ಕಾರಣ ಅಧಿಕೃತವಾಗಿ ಕರ್ನಾಟಕದ ಭಾಗವಾಗಲು ನಿರ್ಣಯವನ್ನು ಅಂಗೀಕರಿಸಿವೆ ಎಂದು ಬೊಮ್ಮಾಯಿ ನವೆಂಬರ್ 23 ರಂದು ಹೇಳಿಕೆ ನೀಡಿದ ನಂತರ ಹೊಸ ವಿವಾದ ಭುಗಿಲೆದ್ದಿದೆ.

Karnataka-Maharashtra border row: black ink smeared on Bommais poster

ಇನ್ನು, ಮಹಾರಾಷ್ಟ್ರದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಒಂದಕ್ಕೆ ಕೆಲವು ಕಿಡಿಗೇಡಿಗಳು, ಕಲ್ಲು ತೂರಾಟ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ, ಗಡಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿ, ಕಟ್ಟೆಚ್ಚರ ವಹಿಸುವಂತೆ, ಗೃಹ ಸಚಿವ ಆರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

English summary
Karnataka - Maharashtra border row: black ink smeared on chief minister Basavaraj Bommai poster at Mahim bus stop in Mumbai. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X