ರಾಜ್ಯದ ಬಸ್‌ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದ ಪುಣೆ ಪ್ರತಿಭಟನಾಕಾರರು

ಪುಣೆ, ನ.25: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ವಿರೋಧಿಸಿ ಮರಾಠ ಮಹಾಸಂಘದ ಸದಸ್ಯರು ಗುರುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ ಮೇಲೆ ಪ್ರತಿಭಟನಾ ಸಂದೇಶಗಳನ್ನು ಬರೆದಿದ್ದಾರೆ.

ಪುಣೆ ಜಿಲ್ಲೆಯ ದೌಂಡ್‌ನಲ್ಲಿ ನಿಪಾಣಿ ಔರಂಗಾಬಾದ್ ಬಸ್‌ ಮೇಲೆ "ಜೈ ಮಹಾರಾಷ್ಟ್ರ" ಮತ್ತು "ಜಾಹಿರ್ ನಿಶೇಧ್" (ಖಂಡನೆ) ಎಂಬ ಪದಗಳನ್ನು ಕಿತ್ತಳೆ ಮತ್ತು ಕಪ್ಪು ಬಣ್ಣದಲ್ಲಿ ಬರೆದಿದ್ದಾರೆ.

ಬಸ್‌ ಮೇಲೆ ಮಹಾರಾಷ್ಟ್ರಕ್ಕೆ ಬೆಂಬಲ ನೀಡುವ ಘೋಷಣೆಗಳನ್ನು ಬರೆದ ನಂತರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧವೂ ಘೋಷಣೆ ಕೂಗಿದ್ದಾರೆ.

Karnataka - Maharashtra Border Row: Protesters Paint over Karnataka Buses

ನೀರಿನ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳಿಸಲು ನಿರ್ಣಯವನ್ನು ಅಂಗೀಕರಿಸಿವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದರು.

ಇದಕ್ಕೆ ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕಕ್ಕೆ ಸೇರುವುದಿಲ್ಲ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. "ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕಕ್ಕೆ ಸೇರುವುದಿಲ್ಲ! ಬೆಳಗಾವಿ, ಕಾರವಾರ, ನಿಪಾಣಿ ಸೇರಿದಂತೆ ಮರಾಠಿ ಭಾಷಿಕ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ಹೋರಾಟ ನಡೆಸಲಿದೆ" ಎಂದಿದ್ದಾರೆ.

ದೇವೇಂದ್ರ ಫಡ್ನವೀಸ್ ಅವರ ಕನಸು ಎಂದಿಗೂ ನನಸಾಗುವುದಿಲ್ಲ ಎಂದಿರುವ ಬಸವರಾಜ ಬೊಮ್ಮಾಯಿ, "ಕರ್ನಾಟಕ ಮಹಾರಾಷ್ಟ್ರ ಗಡಿವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ'' ಎಂದಿದ್ದರು.

Karnataka - Maharashtra Border Row: Protesters Paint over Karnataka Buses

ದಶಕಗಳ ಬಳಿಕ ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದಕ್ಕೆ ಮತ್ತೆ ಕಿಡಿ ಹತ್ತಿದ್ದು, ಮಹಾರಾಷ್ಟ್ರದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಇತ್ತ, ಉಭಯ ರಾಷ್ಟ್ರಗಳಲ್ಲಿ ನಾಯಕರು ಪರಸ್ಪರ ವಾಗ್ದಾಳಿ ಆರಂಭಿಸಿದ್ದಾರೆ. ಇನ್ನು, ಈ ಬಗ್ಗೆ ನಿರ್ಣಯ ಕೈಗೊಳ್ಳಲು ಮುಂದಿನವಾರ ಸರ್ವಪಕ್ಷ ಸಭೆ ಕರೆಯುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+