• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಪರಿಚಯ

|
   ಪುಷ್ಪಾ ಅಮರನಾಥ್, ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವ್ಯಕ್ತಿಚಿತ್ರ | Oneindia Kannada

   ಬೆಂಗಳೂರು, ನವೆಂಬರ್ 19 : ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬಿ.ಪುಷ್ಪಾ ಅಮರನಾಥ್ ಅವರು ಅಧಿಕಾರ ಸ್ವೀಕರಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬದಲು ಪುಷ್ಪಾ ಅಮರನಾಥ್ ಅವರನ್ನು ಅಧ್ಯಕ್ಷರಾಗಿ ಕೆಲವು ದಿನಗಳ ಹಿಂದೆ ಆಯ್ಕೆ ಮಾಡಲಾಗಿತ್ತು.

   ಸೋಮವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪುಷ್ಪಾ ಅಮರನಾಥ್ ಅವರು ಅಧಿಕಾರವಹಿಸಿಕೊಂಡರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಕಾಂಗ್ರೆಸ್‌ ಧ್ವಜವನ್ನು ನೀಡಿದರು.

   ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸಂದರ್ಶನ

   ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

   ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪದವಿ ಸಮಾರಂಭಕ್ಕೆ ಡ್ರೆಸ್ ಕೋಡ್

   ಮೈಸೂರು ಜಿಲ್ಲಾ ರಾಜಕಾರಣದಲ್ಲಿ ಸಕ್ರಿಯರಾಗಿರುವ ಪುಷ್ಪಾ ಅಮರನಾಥ್ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪುಷ್ಪಾ ಅಮರನಾಥ್ ಅವರ ಪರಿಚಯ ಇಲ್ಲಿದೆ ನೋಡಿ......

   ಜಿಲ್ಲಾ ರಾಜಕೀಯದಲ್ಲಿ ಸಕ್ರಿಯ

   ಜಿಲ್ಲಾ ರಾಜಕೀಯದಲ್ಲಿ ಸಕ್ರಿಯ

   ಪುಷ್ಪಾ ಅಮರನಾಥ್ ಅವರು ಮೈಸೂರು ಜಿಲ್ಲಾ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 2014 ರಿಂದ 2016ರ ಫೆಬ್ರವರಿ ತನಕ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು.

   * 2011ರ ಚುನಾವಣೆಯಲ್ಲಿ ಹುಣಸೂರು ತಾಲೂಕಿನ ಧರ್ಮಾಪುರ ಕ್ಷೇತ್ರದಿಂದ

   * 2016ರ ಚುನಾವಣೆಯಲ್ಲಿ ಬನ್ನಿಕುಪ್ಪೆ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

   * 2018ರ ಮಾರ್ಚ್‌ನಲ್ಲಿ ಎಐಸಿಸಿ ಸದಸ್ಯರಾಗಿ ನೇಮಕಗೊಂಡರು.

   ಬಾವ ಹುಣಸೂರು ಕ್ಷೇತ್ರದ ಶಾಸಕರಾಗಿದ್ದರು

   ಬಾವ ಹುಣಸೂರು ಕ್ಷೇತ್ರದ ಶಾಸಕರಾಗಿದ್ದರು

   ಪುಷ್ಪಾ ಅಮರನಾಥ್ ಅವರ ಪತಿ ಉದ್ಯಮಿಯಾಗಿದ್ದಾರೆ. ಬಾವ ಎಚ್.ಪಿ.ಮಂಜುನಾಥ್ ಅವರು ಎರಡು ಅವಧಿಗೆ ಹುಣಸೂರು ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

   ಯುವ ವಿಜ್ಞಾನಿ ಪ್ರಶಸ್ತಿ ಪಡೆದಿದ್ದಾರೆ

   ಯುವ ವಿಜ್ಞಾನಿ ಪ್ರಶಸ್ತಿ ಪಡೆದಿದ್ದಾರೆ

   ಪುಷ್ಪಾ ಅಮರನಾಥ್ ಅವರು ಸಸ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಅಮೆರಿಕ ಜಾನ್ ಹಾಕಿನ್ಸ್ ವಿಶ್ವವಿದ್ಯಾಲಯ 2012ರಲ್ಲಿ'ಯುವ ವಿಜ್ಞಾನಿ' ಪ್ರಶಸ್ತಿ ನೀಡಿ ಗೌರವಿಸಿದೆ.

   ಪುಷ್ಪಾ ಅಮರನಾಥ್ ಹೇಳಿದ್ದೇನು?

   ಪುಷ್ಪಾ ಅಮರನಾಥ್ ಹೇಳಿದ್ದೇನು?

   'ರಾಜ್ಯ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ನನಗೆ ದೊರೆತಿರುವ ಜವಾಬ್ದಾರಿಯನ್ನು ಯಾವುದೇ ಚ್ಯುತಿ ಬಾರದಂತೆ ನಿಮ್ಮಲ್ಲರ ಸಹಕಾರ ಮಾರ್ಗದರ್ಶನದಲ್ಲಿ ನಿರ್ವಹಿಸುತ್ತೇನೆ ಎಂಬ ವಿಶ್ವಾಸವಿದೆ' ಎಂದು ಪುಷ್ಪಾ ಅಮರನಾಥ್ ಹೇಳಿದರು.

   English summary
   B.Pushpa Amarnath took charge as the Karnataka State Women's Congress Committee. The All-India Congress Committee (AICC) appointed B.Pushpa Amarnath as president recently. Here is the profile of B.Pushpa Amarnath.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X