KRS Dam water Level: ಜುಲೈ 22ರಂದು ಕೆಆರ್‌ಎಸ್, ಕಬಿನಿ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
Karnataka Dam water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದಿ, ನದಿ, ಕೆರೆ-ಕಟ್ಟೆಗಳು ಸೇರಿದಂತೆ ಇನ್ನಿತರೆ ಜಲಮೂಲಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಹಲವು ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತವನ್ನು ತಲುಪಿವೆ. ಹಾಗಾದರೆ ಇಂದು (ಜುಲೈ 22) ಕೆಆರ್‌ಎಸ್, ಕಬಿನಿ ಸೇರಿದಂತೆ ಇನ್ನಿಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.
ಕಳೆದ ಬಾರಿ ಅಂದರೆ 2023ರಲ್ಲಿ ಮುಂಗಾಋಉ ಕೈಕೊಟ್ಟ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜಲಮೂಲಗಳು ಬತ್ತಿಹೋಗಿದ್ದವು. ಅಲ್ಲದೆ, ಜಲಾಶಯಗಳಲ್ಲಿ ನೀರಿನ ಮಟ್ಟ ತಳಮಟ್ಟಕ್ಕೆ ಇಳಿದಿತ್ತು. ಇದೀಗ 2024ರ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಮಳೆ ಆರಂಭವಾಗಿದ್ದು, ಇಲ್ಲಿಯವರೆಗೂ ಕೂಡ ಮಳೆರಾಯ ಆರ್ಭಟಿಸುತ್ತಲೇ ಇದ್ದಾನೆ. ಇದರಿಂದ ಜಲಮೂಲಗಳಿಗೆ ಜೀವಕಳೆ ಬಂದಂದಾಗಿದೆ.

ಅದರಲ್ಲೂ ಭಾರೀ ಮಳೆಯಿಂದ ಹಲವು ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತವನ್ನು ತಲುಪಿವೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಕೆಲವು ಜಲಾಶಯಗಳಿಂದ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಹಾಗಾದರೆ ಇಂದು ಕೆಆರ್‌ಎಸ್ (ಕೃಷ್ಣರಾಜ ಸಾಗರ), ಕಬಿನಿ, ಹಾರಂಗಿ, ಹೇಮಾವತಿ, ಭದ್ರಾ, ತುಂಗಭದ್ರಾ ಸೇರಿದಂತೆ ಇನ್ನುಳಿದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಲಿಯಿರಿ.
ಇನ್ನು ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯ ಭರ್ತಿಯ ಹಂತ ತಲುಪಿರುವುದರಿಂದ ಈ ಜಲಾಶಯದಿಂದ 51,769 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದೆ.
ಈ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಈಗಾಗಲೇ ಜಲಾಶಯದ ನೀರಿನ ಮಟ್ಟ 123.10 ಅಡಿಗೆ ತಲುಪಿದೆ. ಅಂದರೆ ತುಂಬಲು ಇನ್ನು ಒಂದು ಅಡಿ ಮಾತ್ರ ಬಾಕಿಯಿದೆ. ಇದೀಗ 69,617 ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಅಣೆಕಟ್ಟೆಯಲ್ಲಿ ನೀರಿನ ಒತ್ತಡವನ್ನು ಕಡಿಮೆ ಮಾಡಲು ಜಲಾಶಯದಿಂದ 51,769 ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ.
ಅಣೆಕಟ್ಟೆಯಲ್ಲಿ 46.567 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹರಿಯಬಿಟ್ಟಿರುವುದರಿಂದ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದ್ದು, ಈ ಭಾಗದ ಜನರಿಗೆ ಈಗಾಗಲೇ ಜಿಲ್ಲಾಡಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮುನ್ಸೂಚನೆಯನ್ನು ಕೂಡ ನೀಡಿದೆ.
ಭರ್ತಿಯಾಗುವ ಹಂತ ತಲುಪಿದ ಪ್ರಮುಖ ಜಲಾಶಯಗಳು
| ಪ್ರಮುಖ ಜಲಾಶಯಗಳು | ಗರಿಷ್ಠ ನೀರಿನ ಮಟ್ಟ | ಇಂದಿನ ನೀರಿನ ಮಟ್ಟ | ಒಳಹರಿವು (ಕ್ಯೂಸೆಕ್) | ಹೊರಹರಿವು (ಕ್ಯೂಸೆಕ್) |
| ಆಲಮಟ್ಟಿ ಜಲಾಶಯ | 519.60 ಮೀಟರ್ | 517.90 ಮೀಟರ್ | 1,50,000 | 1,00,064 |
| ತುಂಗಭದ್ರಾ ಜಲಾಶಯ | 1,633 ಅಡಿ | 1,625.27 ಅಡಿ | 34,150 | 34,150 |
| ಕೆಆರ್‌ಎಸ್ | 124.80 ಅಡಿ | 123.20 ಅಡಿ | 70,850 | 52,162 |
| ಮಲಪ್ರಭಾ ಜಲಾಶಯ | 2,079.5 ಅಡಿ | 2,062.30 ಅಡಿ | 14,824 | 194 |
| ಲಿಂಗನಮಕ್ಕಿ ಜಲಾಶಯ | 1,819 ಅಡಿ | 1797.60 ಅಡಿ | 44,387 | 1,898 |
| ಕಬಿನಿ ಜಲಾಶಯ | 2,284 ಅಡಿ | 2,282.40 ಅಡಿ | 25,885 | 17,375 |
| ಭದ್ರಾ ಜಲಾಶಯ | 164.4 ಅಡಿ | 162.70 ಅಡಿ | 25,367 | 193 |
| ಘಟಪ್ರಭಾ ಜಲಾಶಯ | 2,175 ಅಡಿ | 2,154.90 ಅಡಿ | 10,823 | 1,733 |
| ಹೇಮಾವತಿ ಜಲಾಶಯ | 2,922 ಅಡಿ | 2920.10 ಅಡಿ | 23,769 | 15,624 |
| ಹಾರಂಗಿ ಜಲಾಶಯ | 2,859 ಅಡಿ | 2,854.95 ಅಡಿ | 9,520 | 4,000 |












Click it and Unblock the Notifications