Karnataka Dam water Level: ಜುಲೈ 25ರಂದು ಕೆಆರ್‌ಎಸ್, ಕಬಿನಿ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
Karnataka Dam Water Level: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದ ಹಿನ್ನೆಲೆ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿಯುತ್ತಿವೆ. ಜೊತೆಗೆ ಜಲಾಶಯಗಳು ಕೂಡ ಭರ್ತಿಯಾಗುವ ಹಂತವನ್ನು ತಲುಪಿವೆ. ಹಾಗಾದರೆ ಇಂದು (ಜುಲೈ 25) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಭಾರೀ ಮಳೆಯಿಂದಾಗಿ ಜಲಾಶಯಗಳು ತುಂಬುವ ಹಂತವನ್ನು ತಲುಪಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಲವು ಜಲಾಶಯಗಳ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಪರಿಣಾಮ ಈಗಾಗಲೇ ನದಿಪಾತ್ರದ ಜನರಿಗೆ ಪ್ರವಾದ ಭೀತಿ ಎದುರಾಗಿದ್ದು, ಅವರು ಜೀವವನ್ನು ಕೈಯಲ್ಲಿ ಹಿಡಿದು ಜೀವನವನ್ನು ಸಾಗಿಸುವಂತಹ ಪರಿಸ್ಥಿತಿ ಎದುರಾಗಿದೆ. ಹಾಗಾದರೆ ಕೆಆರ್‌ಎಸ್ (ಕೃಷ್ಣರಾಜ ಸಾಗರ), ಹೇಮಾವತಿ, ಆಲಮಟ್ಟಿ, ಭದ್ರಾ, ತುಂಗಬದ್ರಾ, ಹಾರಂಗಿ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಇಲ್ಲಿ ಗಮನಿಸಿ.

ಈಗಾಗಲಾ ರಾಜ್ಯ ರಾಜಧಾನಿ ಬೆಂಗಳೂರು, ಸಾಂಸ್ಕೃತಿನಗರಿ ಮೈಸೂರು, ಸಕ್ಕರೆ ನಾಡು ಮಂಡ್ಯ ಜಿಲ್ಲೆಗಳ ಜೀವನಾಡಿಯಾದ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ಭಾಗದ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹಾಗಾದರೆ ಇನ್ನುಳಿದ ಜಲಾಶಯಗಳ ನೀರಿನ ಮಟ್ಟವನ್ನು ಇಲ್ಲಿ ನೀಡಲಾಗಿದೆ ಕಣ್ಣಾಡಿಸಿ.
1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 124.80 ಅಡಿ
* ಒಳಹರಿವು - 41,099 ಕ್ಯೂಸೆಕ್
* ಹೊರಹರಿವು - 41,099 ಕ್ಯೂಸೆಕ್
2. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.6 ಮೀಟರ್
* ಇಂದಿನ ನೀರಿನ ಮಟ್ಟ - 517.58 ಮೀಟರ್
* ಒಳಹರಿವು- 1,59,812 ಕ್ಯೂಸೆಕ್
* ಹೊರಹರಿವು - 2,00,000 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ- 1,631.28 ಅಡಿ
* ಒಳಹರಿವು - 87,700 ಕ್ಯೂಸೆಕ್
* ಹೊರಹರಿವು - 24,176 ಕ್ಯೂಸೆಕ್
4. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 2,066 ಅಡಿ
* ಒಳಹರಿವು - 16,386 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
5. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1,801 ಅಡಿ
* ಒಳಹರಿವು - 58,619 ಕ್ಯೂಸೆಕ್
* ಹೊರಹರಿವು - 1,892.4 ಕ್ಯೂಸೆಕ್
6. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,283.25 ಅಡಿ
* ಒಳಹರಿವು - 14,912 ಕ್ಯೂಸೆಕ್
* ಹೊರಹರಿವು - 12,000 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 169.5 ಅಡಿ
* ಒಳಹರಿವು - 15,383 ಕ್ಯೂಸೆಕ್
* ಹೊರಹರಿವು - 197 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,165 ಅಡಿ
* ಒಳಹರಿವು - 31,153 ಕ್ಯೂಸೆಕ್
* ಹೊರಹರಿವು - 2,536 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,921.02 ಅಡಿ
* ಒಳಹರಿವು - 23,363 ಕ್ಯೂಸೆಕ್
* ಹೊರಹರಿವು - 22,532 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,856.99 ಅಡಿ
* ಒಳಹರಿವು - 100.04 ಕ್ಯೂಸೆಕ್
* ಹೊರಹರಿವು - 400 ಕ್ಯೂಸೆಕ್












Click it and Unblock the Notifications