Karnataka Dam water Level: ಜುಲೈ 26ರಂದು ಕೆಆರ್‌ಎಸ್ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?
Karnataka Dam Water Level: ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದಿ, ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಈಗಾಗಲೇ ಕೆಆರಸ್‌ಎಸ್ (ಕೃಷ್ಣರಾಜ ಸಾಗರ) ಸೇರಿದ ಕೆಲವು ಪ್ರಮುಖ ಜಲಾಶಯಗಳು ಕೂಡ ಭರ್ತಿಯಾಗಿದ್ದು, ಇನ್ನು ಕೆಲವು ತುಂಬುವ ಹಂತವನ್ನು ತಲುಪಿವೆ. ಹಾಗಾದರೆ ಇಂದು (ಜುಲೈ 26) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳು ತುಂಬಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಲವು ಜಲಾಶಯಗಳ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ನದಿಗಳಿಗೆ ಹರಿಸಲಾಗುತ್ತಿದೆ. ಈ ಹಿನ್ನೆಲೆ ನದಿಪಾತ್ರದ ಜನರಿಗೆ ಪ್ರವಾದ ಭೀತಿ ಎದುರಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುವ ಕೆಲಸವನ್ನು ಆಯಾ ಜಿಲ್ಲೆ ಅಧಿಕಾರಿಗಳು ಮಾಡುತ್ತಿದ್ದಾರೆ. ಹಾಗಾದರೆ ಇದೀಗ ಕೆಆರ್‌ಎಸ್ (ಕೃಷ್ಣರಾಜ ಸಾಗರ), ಹೇಮಾವತಿ, ಆಲಮಟ್ಟಿ, ಭದ್ರಾ, ತುಂಗಬದ್ರಾ, ಹಾರಂಗಿ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 124.35 ಅಡಿ
* ಒಳಹರಿವು - 90,000 ಕ್ಯೂಸೆಕ್
* ಹೊರಹರಿವು - 80,000 ಕ್ಯೂಸೆಕ್
2. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ- 519.60 ಮೀಟರ್
* ಇಂದಿನ ನೀರಿನ ಮಟ್ಟ - 516.92 ಮೀಟರ್
* ಒಳಹರಿವು- 2,04,098 ಕ್ಯೂಸೆಕ್
* ಹೊರಹರಿವು - 2,66,586 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ- 1,631.99 ಅಡಿ
* ಒಳಹರಿವು - 87,300 ಕ್ಯೂಸೆಕ್
* ಹೊರಹರಿವು - 83,969 ಕ್ಯೂಸೆಕ್
4. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.50 ಅಡಿ
* ಇಂದಿನ ನೀರಿನ ಮಟ್ಟ - 23.61 ಟಿಎಂಸಿ
* ಒಳಹರಿವು - 20,657 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್
5. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1804.80 ಅಡಿ
* ಒಳಹರಿವು - 65,147 ಕ್ಯೂಸೆಕ್
* ಹೊರಹರಿವು - 1,853 ಕ್ಯೂಸೆಕ್
6. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,282.27 ಅಡಿ
* ಒಳಹರಿವು - 19,000 ಕ್ಯೂಸೆಕ್
* ಹೊರಹರಿವು - 19,000 ಕ್ಯೂಸೆಕ್
7. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 174.3 ಅಡಿ
* ಒಳಹರಿವು - 35,318 ಕ್ಯೂಸೆಕ್
* ಹೊರಹರಿವು - 202 ಕ್ಯೂಸೆಕ್
8. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 45.74 ಟಿಎಂಸಿ
* ಒಳಹರಿವು - 39,174 ಕ್ಯೂಸೆಕ್
* ಹೊರಹರಿವು - 10,044 ಕ್ಯೂಸೆಕ್
9. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,920.05 ಅಡಿ
* ಒಳಹರಿವು - 52,999 ಕ್ಯೂಸೆಕ್
* ಹೊರಹರಿವು - 63,580 ಕ್ಯೂಸೆಕ್
10. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,856 ಅಡಿ
* ಒಳಹರಿವು - 8,720 ಕ್ಯೂಸೆಕ್
* ಹೊರಹರಿವು - 20,000 ಕ್ಯೂಸೆಕ್












Click it and Unblock the Notifications