Karnataka Dam Water Level: ಭರ್ಜರಿ ಮಳೆ; ಇಂದು ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ಎಷ್ಟು?
ಬೆಂಗಳೂರು, ಆಗಸ್ಟ್ 06: ಪ್ರಸಕ್ತ ವರ್ಷ ಮುಂಗಾರು ಮಳೆ ಕರ್ನಾಟಕದ ಜನರಿಗೆ ವರವಾಗಿದೆ. ಮುಂಗಾರು ಆಗಮನ ಈ ಬಾರೀ ಕಳೆದ ವರ್ಷಕ್ಕಿಂತ ಮೊದಲೇ ಆಗಿದ್ದು, ಭರ್ಜರಿ ಮಳೆ ಸುರಿದು ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಅದರಲ್ಲೂ ನಾಡಿನ ಕೃಷಿ, ಕುಡಿಯುವ ನೀರು ಪೂರೈಕೆಗೆ ಆಧಾರವಾಗಿರುವ ಪ್ರಮುಖ 8 ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ.ಜಲಾಶಯಗಳು ಭರ್ತಿಯಾದ ಹಿನ್ನೆಲೆ ಕಳೆದ ಒಂದೆರಡು ದಿನಗಳಿಂದ ಡ್ಯಾಂಗಳ ಕ್ರಸ್ಟ್‌ಗೇಟ್ ತೆರೆದು ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ದಿನದಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಒಂದಿಷ್ಟು ಪ್ರವಾಹದ ವಾತಾವರಣ ಸೃಷ್ಟಿಯಾಗಿದ್ದು, ನಾಲೆಗಳಿಗೆ ನೀರು ಹರಿದು ಬಂದು ಕೆರೆ ಕಟ್ಟೆಗಳು ತುಂಬಿ ರೈತರು ಸಂತಸಗೊಂಡಿದ್ದಾರೆ.
ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಕರ್ನಾಟಕ 19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ಕೇವಲ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯ ರಾಜಧಾನಿ ಬೆಂಗಳೂರು ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ.

ಇನ್ನೂ ಕರ್ನಾಟಕದ ಕೆಲ ಭಾಗಗಲ್ಲಿ ಮಾತ್ರ ಮಳೆ ಕಡಿಮೆಯಾಗಿದ್ದು, ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕೊಪ್ಪಳ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ,ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇತ್ತ ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಭರ್ಜರಿ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್‌ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದ್ರೆ ಭದ್ರಾ ಜಲಾಶಯ ಸೇರಿದಂತೆ ಇಂದು(ಆಗಸ್ಟ್ 06) ರಂದು ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.88 ಅಡಿ
* ಒಟ್ಟು ಸಾಮರ್ಥ್ಯ- 49.46 ಟಿಎಂಸಿ
* ಇಂದಿನ ನೀರಿನ ಮಟ್ಟ- 122.55 ಅಡಿ
* ಒಳಹರಿವು - 12,438 ಕ್ಯೂಸೆಕ್
* ಹೊರಹರಿವು - 5,625 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,280 ಅಡಿ
* ಇಂದಿನ ನೀರಿನ ಮಟ್ಟ - 2,285.25 ಅಡಿ
* ಒಳಹರಿವು - 8,938 ಕ್ಯೂಸೆಕ್
* ಹೊರಹರಿವು - 5,055 ಕ್ಯೂಸೆಕ್
3. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ 518.6 ಮೀಟರ್
* ಒಟ್ಟು ಸಾಮರ್ಥ್ಯ- 125.8 ಟಿಎಂಸಿ
* ಇಂದಿನ ನೀರಿನ ಮಟ್ಟ - 519.59 ಮೀಟರ್
* ಒಳಹರಿವು - 1,00,145 ಕ್ಯೂಸೆಕ್
* ಹೊರಹರಿವು - 20,000 ಕ್ಯೂಸೆಕ್
4. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಒಟ್ಟು ಸಾಮರ್ಥ್ಯ - 105.79 ಟಿಎಂಸಿ
* ಇಂದಿನ ನೀರಿನ ಮಟ್ಟ- 1,626.6 ಅಡಿ
* ಒಳಹರಿವು - 43,736 ಕ್ಯೂಸೆಕ್
* ಹೊರಹರಿವು - 23,399 ಕ್ಯೂಸೆಕ್
5. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,080.5 ಅಡಿ
* ಒಟ್ಟು ಸಾಮರ್ಥ್ಯ - 49.45 ಟಿಎಂಸಿ
* ಇಂದಿನ ನೀರಿನ ಮಟ್ಟ - 2,080.15 ಅಡಿ
* ಒಳಹರಿವು - 4,725 ಕ್ಯೂಸೆಕ್
* ಹೊರಹರಿವು - 1,844 ಕ್ಯೂಸೆಕ್
6. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,818 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,811.50 ಅಡಿ
* ಒಳಹರಿವು - 12,369 ಕ್ಯೂಸೆಕ್
* ಹೊರಹರಿವು 7,545 ಕ್ಯೂಸೆಕ್












Click it and Unblock the Notifications