Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 12ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶೀತಗಾಳಿ ಮುಂದುವರೆದಿದೆ. ಈ ನಡುವೆಯೇ ಕೆಲವೇ ಕೆಲವೆಡೆ ಮಾತ್ರ ತುಂತುರು ಮಳೆಯಾಗುತ್ತಿದೆ. ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ಡಿಸೆಂಬರ್ 12) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (ಕೆಆರ್ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಕೆಲ ಜಲಾಶಯಗಳು ಇದೇ ವರ್ಷ ಎರಡು ಬಾರಿ ಭರ್ತಿ ಆಗಿವೆ.

ಸದ್ಯ ಇದೀಗ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಆವರಿಸಿದೆ. ಈ ನಡುವೆಯೇ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಜಿನುಗು ಮಳೆಯಾಗುತ್ತುದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ರಣಭೀಕರ ಚಳಿ ವಾತಾವರಣ ಮುಂದುವರೆದಿದ್ದು, ಜನರು ಮನೆಯಿಂದ ಹೊರಗಡೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜಿನ ಜೊತೆ ಶೀತಾಗಳಿ ಬೀಸುತ್ತಿದೆ.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಹಾಗಾದ್ರೆ, ಇದೀಗ ಪ್ರಸ್ತುತ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.14 ಅಡಿ
* ಒಳಹರಿವು - 3,279 ಕ್ಯೂಸೆಕ್
* ಹೊರಹರಿವು - 2,442 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 56.54 ಅಡಿ
* ಒಳಹರಿವು - 1,057 ಕ್ಯೂಸೆಕ್
* ಹೊರಹರಿವು - 1,492 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1,808.20 ಅಡಿ
* ಒಳಹರಿವು - 00 ಕ್ಯೂಸೆಕ್
* ಹೊರಹರಿವು - 3,999.30 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 181.2 ಅಡಿ
* ಒಳಹರಿವು - 208 ಕ್ಯೂಸೆಕ್
* ಹೊರಹರಿವು - 509 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 104.5 ಅಡಿ
* ಒಳಹರಿವು - 155 ಕ್ಯೂಸೆಕ್
* ಹೊರಹರಿವು - 1,000 ಕ್ಯೂಸೆಕ್
6. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 105.3 ಅಡಿ
* ಒಳಹರಿವು - 838 ಕ್ಯೂಸೆಕ್
* ಹೊರಹರಿವು - 4,200 ಕ್ಯೂಸೆಕ್
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications