Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 15ರ ಅಂಕಿಅಂಶಗಳು
Karnataka Reservoirs Water Level: ಇದೀಗ ಸದ್ಯ ರಾಜ್ಯಾದಂತ ರಣಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಕೆಲವೇ ಕೆಲವೆಡೆ ಮಾತ್ರ ತುಂತುರು ಮಳೆಯಾಗುತ್ತಿದೆ. ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ಡಿಸೆಂಬರ್ 15) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಕೆಲ ಜಲಾಶಯಗಳು ಇದೇ ವರ್ಷ ಎರಡು ಬಾರಿ ಭರ್ತಿ ಆಗಿವೆ.

ಸದ್ಯ ಇದೀಗ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಆವರಿಸಿದೆ. ಈ ನಡುವೆಯೇ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಜಿನುಗು ಮಳೆಯಾಗುತ್ತುದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ರಣಭೀಕರ ಚಳಿ ವಾತಾವರಣ ಮುಂದುವರೆದಿದ್ದು, ಜನರು ಮನೆಯಿಂದ ಹೊರಗಡೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜಿನ ಜೊತೆ ಶೀತಾಗಳಿ ಬೀಸುತ್ತಿದೆ.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಹಾಗಾದ್ರೆ, ಇದೀಗ ಪ್ರಸ್ತುತ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.2 ಅಡಿ
* ಒಳಹರಿವು - 2,915 ಕ್ಯೂಸೆಕ್
* ಹೊರಹರಿವು - 2,392 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 56.56 ಅಡಿ
* ಒಳಹರಿವು - 1,117 ಕ್ಯೂಸೆಕ್
* ಹೊರಹರಿವು - 1,050 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1807.50 ಅಡಿ
* ಒಳಹರಿವು - 952 ಕ್ಯೂಸೆಕ್
* ಹೊರಹರಿವು - 3978.15 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 181.1 ಅಡಿ
* ಒಳಹರಿವು - 220 ಕ್ಯೂಸೆಕ್
* ಹೊರಹರಿವು - 509 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 102.53 ಅಡಿ
* ಒಳಹರಿವು - 77 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
6. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 104.43 ಅಡಿ
* ಒಳಹರಿವು - 796 ಕ್ಯೂಸೆಕ್
* ಹೊರಹರಿವು - 4,700 ಕ್ಯೂಸೆಕ್
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications