Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 16ರ ಅಂಕಿಅಂಶಗಳು
Karnataka Reservoirs Water Level: ರಾಜ್ಯಾದಂತ ಹಿಂದೆಂದೂ ಕಂಡುಕಂಡರಿಯದ ವಿಪರೀತ ಚಳಿ ಮುಂದುವರೆದಿದೆ. ಈ ನಡುವೆಯೇ ಕೆಲವೇ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ಡಿಸೆಂಬರ್ 16) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಕೆಲ ಜಲಾಶಯಗಳು ಇದೇ ವರ್ಷ ಎರಡು ಬಾರಿ ಭರ್ತಿ ಆಗಿವೆ.

ಸದ್ಯ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಆವರಿಸಿದೆ. ಈ ನಡುವೆಯೇ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಜಿನುಗು ಮಳೆಯಾಗುತ್ತುದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ವಾತಾವರಣ ಮುಂದುವರೆದಿದ್ದು, ಜನರು ಮನೆಯಿಂದ ಹೊರಗಡೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜಿನ ಜೊತೆ ಶೀತಾಗಳಿ ಬೀಸುತ್ತಿದೆ.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಹಾಗಾದ್ರೆ, ಇದೀಗ ಪ್ರಸ್ತುತ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.18 ಅಡಿ
* ಒಳಹರಿವು - 2,498 ಕ್ಯೂಸೆಕ್
* ಹೊರಹರಿವು - 2,292 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 56.56 ಅಡಿ
* ಒಳಹರಿವು - 952 ಕ್ಯೂಸೆಕ್
* ಹೊರಹರಿವು - 633 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1807.30 ಅಡಿ
* ಒಳಹರಿವು - 952 ಕ್ಯೂಸೆಕ್
* ಹೊರಹರಿವು - 3986.38 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 181.1 ಅಡಿ
* ಒಳಹರಿವು - 220 ಕ್ಯೂಸೆಕ್
* ಹೊರಹರಿವು - 509 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 101.26 ಅಡಿ
* ಒಳಹರಿವು - 149 ಕ್ಯೂಸೆಕ್
* ಹೊರಹರಿವು - 300 ಕ್ಯೂಸೆಕ್
6. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 103.21 ಅಡಿ
* ಒಳಹರಿವು - 737 ಕ್ಯೂಸೆಕ್
* ಹೊರಹರಿವು - 4,300 ಕ್ಯೂಸೆಕ್
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications