Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 2ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಇದೀಗ ಸದ್ಯ ಮಳೆ ಆರ್ಭಟ ಕಡಿಮೆಯಾಗಿದೆ. ಈಗಾಗಲೇ ಮುಂಗಾರು ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿ ಆಗಿವೆ. ಹಾಗಾದ್ರೆ, ಇಂದು (ಡಿಸೆಂಬರ್ 2) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (ಕೆಆರ್‌ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇದೀಗ ಕಳೆದ ಕೆಲ ದಿನಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಎಂಟ್ರಿ ಕೊಟ್ಟಿದೆ. ಈ ನಡುವೆಯ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 122.94 ಅಡಿ
* ಒಳಹರಿವು - 3,268 ಕ್ಯೂಸೆಕ್
* ಹೊರಹರಿವು - 3,996 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 58.2 ಅಡಿ
* ಒಳಹರಿವು - 485 ಕ್ಯೂಸೆಕ್
* ಹೊರಹರಿವು - 1,950 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1810.10 ಅಡಿ
* ಒಳಹರಿವು - 2,693 ಕ್ಯೂಸೆಕ್
* ಹೊರಹರಿವು -3,904.83 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 181.4 ಅಡಿ
* ಒಳಹರಿವು - 31 ಕ್ಯೂಸೆಕ್
* ಹೊರಹರಿವು - 610 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 112.55 ಅಡಿ
* ಒಳಹರಿವು - 306 ಕ್ಯೂಸೆಕ್
* ಹೊರಹರಿವು - 1,200 ಕ್ಯೂಸೆಕ್
6. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 109.58 ಅಡಿ
* ಒಳಹರಿವು - 1,361 ಕ್ಯೂಸೆಕ್
* ಹೊರಹರಿವು - 4,200 ಕ್ಯೂಸೆಕ್












Click it and Unblock the Notifications