Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಡಿಸೆಂಬರ್ 7ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಇನ್ನೂ ಈಗಾಗಲೇ ಮುಂಗಾರು ಮಳೆ ವೇಳೆ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ಡಿಸೆಂಬರ್ 7) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೃಷ್ಣರಾಜಸಾಗರ (ಕೆಆರ್ಎಸ್) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಕೆಲ ಜಲಾಶಯಗಳು ಇದೇ ವರ್ಷ ಎರಡು ಬಾರಿ ಭರ್ತಿ ಆಗಿವೆ.
ಸದ್ಯ ಇದೀಗ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಆವರಿಸಿದೆ. ಈ ನಡುವೆಯ ಕೆಲವು ಭಾಗಗಳ ಅಲ್ಲಲ್ಲಿ ಮಾತ್ರ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾದ್ರೆ ಪ್ರಸ್ತುತ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 122.86 ಅಡಿ
* ಒಳಹರಿವು - 3,518 ಕ್ಯೂಸೆಕ್
* ಹೊರಹರಿವು - 2,389 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 57.6 ಅಡಿ
* ಒಳಹರಿವು - 973 ಕ್ಯೂಸೆಕ್
* ಹೊರಹರಿವು - 2,300 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1809.35 ಅಡಿ
* ಒಳಹರಿವು - 1,966 ಕ್ಯೂಸೆಕ್
* ಹೊರಹರಿವು - 3,930.08 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 181.3 ಅಡಿ
* ಒಳಹರಿವು - 209 ಕ್ಯೂಸೆಕ್
* ಹೊರಹರಿವು - 510 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 107.56 ಅಡಿ
* ಒಳಹರಿವು - 535 ಕ್ಯೂಸೆಕ್
* ಹೊರಹರಿವು - 1,200 ಕ್ಯೂಸೆಕ್
6. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 107.2 ಅಡಿ
* ಒಳಹರಿವು - 856 ಕ್ಯೂಸೆಕ್
* ಹೊರಹರಿವು - 4,500 ಕ್ಯೂಸೆಕ್
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications