Karnataka Major Reservoirs: ಕೆಆರ್ಎಸ್ ಸೇರಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ಜುಲೈ 26ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಹಲವೆಡೆ ಮತ್ತೆ ಮುಂಗಾರು ಚುರುಕು ಪಡೆದಿದೆ. ಈ ಹಿನ್ನೆಲೆ ಜಲಾಶಯಶಗಳ ಒಳಹರಿವಿನ ಪ್ರಮಾಣ ನಿಧಾನಗತಿಯಲ್ಲಿ ಹೆಚ್ಚಾಗುತ್ತಿದೆ. ಹಾಗಾದ್ರೆ ಭಾನುವಾರ (ಜುಲೈ 26) ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್ಎಸ್ (ಕೃಷ್ಣರಾಜ ಸಾಗರ) ಸೇರಿದಂತೆ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಳೆದ ಕೆಲದ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಲ್ಲದೆ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಪರಿಣಾಮ ಜಲಮೂಲಗಳಲ್ಲಿ ನೀರಿನ ಪ್ರಮಾಣ ಕಡಿಮೆ ಆಗುತ್ತಲಿತ್ತು. ಇದೀಗ ಮತ್ತೆ ಮುಂಗಾರು ಮಳೆ ಚುರುಕು ಪಡೆದ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳಿಗೆ ಜೀವಕಳೆ ಬಂದಂತಾಗಿದೆ. ಇದರಿಂದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ.

1. ಕೆಆರ್ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಇಂದಿನ ನೀರಿನ ಮಟ್ಟ- 91.82 ಅಡಿ
* ಒಳಹರಿವು - 726 ಕ್ಯೂಸೆಕ್
* ಹೊರಹರಿವು - 1,576 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,284 ಅಡಿ
* ಇಂದಿನ ನೀರಿನ ಮಟ್ಟ - 2,273.77 ಅಡಿ
* ಒಳಹರಿವು - 4,494 ಕ್ಯೂಸೆಕ್
* ಹೊರಹರಿವು - 500 ಕ್ಯೂಸೆಕ್
3. ತುಂಗಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,633 ಅಡಿ
* ಇಂದಿನ ನೀರಿನ ಮಟ್ಟ - 1,606.03 ಅಡಿ
* ಒಳಹರಿವು - 14,281 ಕ್ಯೂಸೆಕ್
* ಹೊರಹರಿವು - 3,574 ಕ್ಯೂಸೆಕ್
4. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಇಂದಿನ ನೀರಿನ ಮಟ್ಟ - 1770.75 ಅಡಿ
* ಒಳಹರಿವು - 23,706 ಕ್ಯೂಸೆಕ್
* ಹೊರಹರಿವು - 2,244 ಕ್ಯೂಸೆಕ್
5. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಇಂದಿನ ನೀರಿನ ಮಟ್ಟ - 152.01 ಅಡಿ
* ಒಳಹರಿವು - 6,472 ಕ್ಯೂಸೆಕ್
* ಹೊರಹರಿವು - 176 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,859 ಅಡಿ
* ಇಂದಿನ ನೀರಿನ ಮಟ್ಟ - 2,858 ಅಡಿ
* ಒಳಹರಿವು - 4,000 ಕ್ಯೂಸೆಕ್
* ಹೊರಹರಿವು - 180 ಕ್ಯೂಸೆಕ್
7. ಹೇಮಾವತಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,922 ಅಡಿ
* ಇಂದಿನ ನೀರಿನ ಮಟ್ಟ - 2,904.97 ಅಡಿ
* ಒಳಹರಿವು - 3,068 ಕ್ಯೂಸೆಕ್
* ಹೊರಹರಿವು - 450 ಕ್ಯೂಸೆಕ್
8. ಆಲಮಟ್ಟಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 519.06 ಮೀಟರ್
* ಇಂದಿನ ನೀರಿನ ಮಟ್ಟ - 518.69 ಮೀಟರ್
* ಒಳಹರಿವು - 88,228 ಕ್ಯೂಸೆಕ್
* ಹೊರಹರಿವು - 68,425 ಕ್ಯೂಸೆಕ್
9. ಘಟಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,175 ಅಡಿ
* ಇಂದಿನ ನೀರಿನ ಮಟ್ಟ - 2,142.40 ಅಡಿ
* ಒಳಹರಿವು - 13,743 ಕ್ಯೂಸೆಕ್
* ಹೊರಹರಿವು - 857 ಕ್ಯೂಸೆಕ್
10. ಮಲಪ್ರಭಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 2,079.5 ಅಡಿ
* ಇಂದಿನ ನೀರಿನ ಮಟ್ಟ - 2,057.60 ಅಡಿ
* ಒಳಹರಿವು - 4,567 ಕ್ಯೂಸೆಕ್
* ಹೊರಹರಿವು - 194 ಕ್ಯೂಸೆಕ್


Click it and Unblock the Notifications
