Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 13ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ನವೆಂಬರ್ 13) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ (ಕೃಷ್ಣರಾಜ ಸಾಗರ) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಆದರೆ ಇದೀಗ ಕಳೆದ ಕೆಲ ದಿನಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಎಂಟ್ರಿ ಕೊಟ್ಟಿದೆ. ಈ ನಡುವೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರೆದಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.58 ಅಡಿ
* ಒಳಹರಿವು - 3,597 ಕ್ಯೂಸೆಕ್
* ಹೊರಹರಿವು - 5,647 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 62.23 ಅಡಿ
* ಒಳಹರಿವು - 223 ಕ್ಯೂಸೆಕ್
* ಹೊರಹರಿವು - 2,100 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1812.80 ಅಡಿ
* ಒಳಹರಿವು - 2,591 ಕ್ಯೂಸೆಕ್
* ಹೊರಹರಿವು 3,804.17 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 184.1 ಅಡಿ
* ಒಳಹರಿವು - 380 ಕ್ಯೂಸೆಕ್
* ಹೊರಹರಿವು - 3,389 ಕ್ಯೂಸೆಕ್
ರಾಜ್ಯಕ್ಕೆ ಈ ಬಾರಿ ಮುಂಗಾರು ಮಳೆ ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದು ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆಯಿಂದಾಗಿ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಸೇರಿದಂತೆ ಇನ್ನಿತರೆ ಜಲಮೂಲಗಳು ಭರ್ತಿಯಾದ ಕಾರಣ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಅಲ್ಲದೆ, ಮುಂದಿನ ವರ್ಷ ನೀರಿನ ಅಭಾವ ಎದುರಾಗಂತಹ ಪರಿಸ್ಥಿತಿ ಎದುರಾಗದಂತೆ ಆಗಿದೆ.
ಇದೀಗ ಸದ್ಯ ಮಳೆರಾಯನ ಆರ್ಭಟ ಸಂಪೂರ್ಣ ತಗ್ಗಿದ್ದು, ಕೆಲವೆಡೆ ಮಾತ್ರ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ಮತ್ತೊಂದೆಡೆ, ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಆವರಿಸುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications