Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 16ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ನವೆಂಬರ್ 16) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ (ಕೃಷ್ಣರಾಜ ಸಾಗರ) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಆದರೆ ಇದೀಗ ಕಳೆದ ಕೆಲ ದಿನಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಎಂಟ್ರಿ ಕೊಟ್ಟಿದೆ. ಈ ನಡುವೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರೆದಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 124.44 ಅಡಿ
* ಒಳಹರಿವು - 3,596 ಕ್ಯೂಸೆಕ್
* ಹೊರಹರಿವು - 5,646 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 61.97 ಅಡಿ
* ಒಳಹರಿವು - 516 ಕ್ಯೂಸೆಕ್
* ಹೊರಹರಿವು - 2,250 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1812.35 ಅಡಿ
* ಒಳಹರಿವು - 883 ಕ್ಯೂಸೆಕ್
* ಹೊರಹರಿವು 3818.36 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 183.8 ಅಡಿ
* ಒಳಹರಿವು - 425 ಕ್ಯೂಸೆಕ್
* ಹೊರಹರಿವು - 3,388 ಕ್ಯೂಸೆಕ್
ರಾಜ್ಯಕ್ಕೆ ಈ ಬಾರಿ ಮುಂಗಾರು ಮಳೆ ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದು ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆಯಿಂದಾಗಿ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಸೇರಿದಂತೆ ಇನ್ನಿತರೆ ಜಲಮೂಲಗಳು ಭರ್ತಿಯಾದ ಕಾರಣ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಅಲ್ಲದೆ, ಮುಂದಿನ ವರ್ಷ ನೀರಿನ ಅಭಾವ ಎದುರಾಗಂತಹ ಪರಿಸ್ಥಿತಿ ಎದುರಾಗದಂತೆ ಆಗಿದೆ.
ಇದೀಗ ಸದ್ಯ ಮಳೆರಾಯನ ಆರ್ಭಟ ಸಂಪೂರ್ಣ ತಗ್ಗಿದ್ದು, ಕೆಲವೆಡೆ ಮಾತ್ರ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ಮತ್ತೊಂದೆಡೆ, ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಚಳಿ ಆವರಿಸುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications