Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ: ನವೆಂಬರ್ 23ರ ಅಂಕಿಅಂಶಗಳು
Karnataka Reservoirs Water Level: ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಹಾಗಾದ್ರೆ, ಇಂದು (ನವೆಂಬರ್ 23) ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್ (KRS) ಸೇರಿದಂತೆ ಉಳಿದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂಗಾರು ಮಳೆ ಆರ್ಭಟದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದಿವೆ. ಅಲ್ಲದೆ, ಪ್ರಮುಖ ಜಲಾಶಯಗಳು ಭರ್ತಿ ಆಗಿದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಇದೀಗ ಕಳೆದ ಕೆಲ ದಿನಗಳಿಂದ ಮಳೆರಾಯನ ಆರ್ಭಟ ತಗ್ಗಿದ್ದು, ಚಳಿ ಎಂಟ್ರಿ ಕೊಟ್ಟಿದೆ. ಈ ನಡುವೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.

1. ಕೆಆರ್‌ಎಸ್ ಜಲಾಶಯ
* ಗರಿಷ್ಠ ನೀರಿನ ಮಟ್ಟ - 124.80 ಅಡಿ
* ಒಟ್ಟು ಸಾಮರ್ಥ್ಯ- 49.45 ಟಿಎಂಸಿ
* ಇಂದಿನ ನೀರಿನ ಮಟ್ಟ- 123.55 ಅಡಿ
* ಒಳಹರಿವು - 3,672 ಕ್ಯೂಸೆಕ್
* ಹೊರಹರಿವು - 4,891 ಕ್ಯೂಸೆಕ್
2. ಕಬಿನಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 65 ಅಡಿ
* ಇಂದಿನ ನೀರಿನ ಮಟ್ಟ - 60.1ಅಡಿ
* ಒಳಹರಿವು - 208 ಕ್ಯೂಸೆಕ್
* ಹೊರಹರಿವು - 1,850 ಕ್ಯೂಸೆಕ್
3. ಲಿಂಗನಮಕ್ಕಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 1,819 ಅಡಿ
* ಒಟ್ಟು ಸಾಮರ್ಥ್ಯ - 151.75 ಟಿಎಂಸಿ
* ಇಂದಿನ ನೀರಿನ ಮಟ್ಟ - 1811.40 ಅಡಿ
* ಒಳಹರಿವು - 841 ಕ್ಯೂಸೆಕ್
* ಹೊರಹರಿವು - 3857.09 ಕ್ಯೂಸೆಕ್
4. ಭದ್ರಾ ಜಲಾಶಯ
* ಗರಿಷ್ಠ ನೀರಿನ ಮಟ್ಟ - 186 ಅಡಿ
* ಒಟ್ಟು ಸಾಮರ್ಥ್ಯ - 71.54 ಟಿಎಂಸಿ
* ಇಂದಿನ ನೀರಿನ ಮಟ್ಟ - 182 ಅಡಿ
* ಒಳಹರಿವು - 176 ಕ್ಯೂಸೆಕ್
* ಹೊರಹರಿವು - 2,236 ಕ್ಯೂಸೆಕ್
5. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 129 ಅಡಿ
* ಇಂದಿನ ನೀರಿನ ಮಟ್ಟ - 117.86 ಅಡಿ
* ಒಳಹರಿವು - 32 ಕ್ಯೂಸೆಕ್
* ಹೊರಹರಿವು - 1,550 ಕ್ಯೂಸೆಕ್
6. ಹಾರಂಗಿ ಜಲಾಶಯ
* ಗರಿಷ್ಠ ನೀರಿನ ಮಟ್ಟ - 117 ಅಡಿ
* ಇಂದಿನ ನೀರಿನ ಮಟ್ಟ - 112.1 ಅಡಿ
* ಒಳಹರಿವು - 1,185 ಕ್ಯೂಸೆಕ್
* ಹೊರಹರಿವು - 4,780 ಕ್ಯೂಸೆಕ್
ರಾಜ್ಯಕ್ಕೆ ಈ ಬಾರಿ ಮುಂಗಾರು ಮಳೆ ಜೂನ್ ಆರಂಭದಲ್ಲೇ ಎಂಟ್ರಿ ಕೊಟ್ಟಿದ್ದು ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆಯಿಂದಾಗಿ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳು ಸೇರಿದಂತೆ ಇನ್ನಿತರೆ ಜಲಮೂಲಗಳು ಭರ್ತಿಯಾದ ಕಾರಣ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಅಲ್ಲದೆ, ಮುಂದಿನ ವರ್ಷ ನೀರಿನ ಅಭಾವ ಎದುರಾಗಂತಹ ಪರಿಸ್ಥಿತಿ ಎದುರಾಗದಂತೆ ಆಗಿದೆ.
ಇದೀಗ ಸದ್ಯ ಮಳೆರಾಯನ ಆರ್ಭಟ ಸಂಪೂರ್ಣ ತಗ್ಗಿದ್ದು, ಕೆಲವೆಡೆ ಮಾತ್ರ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ಮತ್ತೊಂದೆಡೆ, ಮಳೆ ತಗ್ಗಿದ ಕಾರಣ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ. ಇದೀಗ ಸದ್ಯ ರಾಜ್ಯದಲ್ಲಿ ಶೀತಗಾಳಿ ಬೀಸುತ್ತಿದ್ದು, ಈ ನಡುವೆಯೇ ಕೆಲವೆಡೆ ಮಳೆಯೂ ಮುಂದುವರೆದಿದೆ.












Click it and Unblock the Notifications